NEWSಆರೋಗ್ಯನಮ್ಮಜಿಲ್ಲೆನಮ್ಮರಾಜ್ಯ

ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗದರ್ಶನದಂತೆ ಇಂದಿನಿಂದ ಫೆ.3ರವೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ಆಯುಕ್ತರು ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಿಕ ಚಾಲನೆ ನೀಡಿದರು.


ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌ ಮತ್ತಿತರರು ಉಪಸ್ಥಿತರಿದ್ದರು.

ಪಾಲಿಕೆ ವ್ಯಾಪ್ತಿಯ 198 ವಾರ್ಡ್ ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಲು ಈಗಾಗಲೇ ಪಾಲಿಕೆ ಆರೋಗ್ಯ ಇಲಾಖೆಯು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡು ಪೋಲಿಯೋ ಲಸಿಕೆ ಹಾಕುತ್ತಿದೆ.

ರಾಷ್ಟ್ರೀಯ ಪಲ್ಸ್ ಪೋಲಿಯೋ-2021 ಕಾರ್ಯಕ್ರಮವನ್ನು ಬಿಬಿಎಂಪಿಯ 140 ಯೋಜನಾ ಘಟಕಗಳ, 198 ವಾರ್ಡ್ ಗಳಲ್ಲಿ ಲಸಿಕೆ ಹಾಕಲು ಯೋಜನೆ ರೂಪಿಸಿಕೊಳ್ಳಲಾಗಿದ್ದು ಅದರಂತೆ ಅಭಿಯಾನ ನಡೆಯುತ್ತಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,04,45,633 ಜನಸಂಖ್ಯೆ ಇದ್ದು, ಒಟ್ಟು 28,38,822 ಮನೆಗಳಿವೆ. ಈ ಪೈಕಿ 0-5 ವರ್ಷದ 10,84,392 ಮಕ್ಕಳಿದ್ದಾರೆ. 960 ಕೊಳಚೆ ಪ್ರದೇಶಗಳಲ್ಲಿ 3,60,712 ಮಕ್ಕಳಿದ್ದಾರೆ. 3,995 ವಲಸೆ ಜನಾಂಗದ ಪ್ರದೇಶಗಳಲ್ಲಿ 1,97,565 ಜನಸಂಖ್ಯೆಯಿದ್ದು, 18,507 5 ವರ್ಷದೊಳಗಿನ ಮಕ್ಕಳಿದ್ದಾರೆ.

ಪಲ್ಸ್ ಪೋಲಿಯೋ ಲಸಿಕೆ ಹಾಕಲು ಪಾಲಿಕೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಕುಟುಂಬ ಕಲ್ಯಾಣ ಕೇಂದ್ರ, ಔಷಧಾಲಯಗಳು, ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರ, ಶಾಲೆಗಳು, ಸ್ಥಿರ ಮತ್ತು ಸಂಚಾರಿ ತಂಡಗಳನ್ನು ಬಸ್ ನಿಲ್ದಾಣ, ರೈಲ್ವೆ ಮತ್ತು ಮೆಟ್ರೊ ನಿಲ್ದಾಣ, ಮಾಲ್‌ಗಳು, ಸ್ವಯಂ ಸೇವಾ ಸಂಸ್ಥೆಯ ಆಸ್ಪತ್ರೆಗಳು, ಖಾಸಗಿ ನರ್ಸಿಂಗ್ ಹೋಮ್‌ಗಳು, ವೈದ್ಯಕೀಯ ಮಹಾವಿದ್ಯಾಲಯ, ಪ್ರಮುಖ ಉದ್ಯಾನವನಗಳು, ಕೊಳಚೆ ಪ್ರದೇಶಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ.

ಪೋಲಿಯೋ ಲಸಿಕೆ ಹಾಕಲು 3,340 ಬೂತ್‌ಗಳು, 456 ಸ್ಥಿರ ತಂಡಗಳು, 324 ಸಂಚಾರಿ ತಂಡಗಳು, 14,922 ಲಸಿಕಾ ಕಾರ್ಯಕರ್ತರು ಹಾಗೂ 426 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.

ಇನ್ನು ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ 15ಇ ಬಸ್‌ ನಿಲ್ದಾಣದಲ್ಲಿ ಪೋಲಿಯೋ ಹನಿಯನ್ನು ಮಗುವೊಂದಕ್ಕೆ ಹಾಕುತ್ತಿರುವುದದನ್ನು ನೀವು ಚಿತ್ರದಲ್ಲಿ ನೋಡಬಹುದು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...