CrimeNEWSನಮ್ಮಜಿಲ್ಲೆ

NWKRTC ಚಲಿಸುತ್ತಿರುವಾಗಲೇ ಬಸ್‌ನ ಹಿಂಬದಿ ಚಕ್ರ ಕಳಚಿತು- ತಪ್ಪಿದ ಭಾರಿ ಅನಾಹುತ

ವಿಜಯಪಥ ಸಮಗ್ರ ಸುದ್ದಿ

ಗದಗ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಒಂದು ಚಲಿಸುತ್ತಿರುವಾಗಲೇ ಅದರ ಹಿಂಬದಿ ಚಕ್ರ ಕಳಚಿ ಬಿದ್ದಿರುವ ಘಟನೆ ಗದಗ ತಾಲೂಕಿನ ಹೊಂಬಳ ಗ್ರಾಮದ ಬಳಿ ನಡೆದಿದೆ.

ಗದಗದಿಂದ ನರಗುಂದಕ್ಕೆ ಭಾನುವಾರ ಆ.20ರಂದು ಹೊರಟಿದ್ದ ಬಸ್‌ನ ಚಕ್ರ ಕಳಚಿ ಬಿದ್ದಿದ್ದು, ಇದನ್ನು ಗಮನಿಸಿದ ಚಾಲಕ ಸುಮಾರು 10 ಮೀಟರ್‌ದೂರ ಚಲಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ.

ಡಬಲ್ ಚಕ್ರದಲ್ಲಿ ಒಂದು ಚಕ್ರ ಕಳಚಿರುವ ದೃಶ್ಯ ಬಸ್‌ನ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ಅದೃಷ್ಟವಶಾತ್‌ ಯಾವುದೇ ತೊಂದರೆ ಆಗದೆ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಬಸ್ ಗದಗ ಡಿಪೋಗೆ ಸೇರಿದ್ದು, ಘಟನೆ ವೇಳೆ ಸುಮಾರು 50 ಜನರು ಅದರಲ್ಲಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದವರು ಚಕ್ರ ಕಳಚಿದ ವೇಳೆ ಬೆಚ್ಚಿಬಿದ್ದಿದ್ದಾರೆ.

Leave a Reply

error: Content is protected !!
LATEST
NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ...