NEWSನಮ್ಮರಾಜ್ಯರಾಜಕೀಯ

ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ: ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ ಎಂದು ಮಾಜಿ ಸಿಎಂ‌ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ. ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ ಎಂದು ಸರಣಿ ಟ್ವೀಟ್‌ ಮಾಡಿದ್ದಾರೆ.

ಇನ್ನು, ಸರ್ಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರ್ಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಂದ್ ನಿಂದ ಸರ್ಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ.

ಸರ್ಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್ ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆ-ತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದು ಹೇಳಿದ್ದಾರೆ.

ಇನ್ನು ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, ‘ಗ್ಯಾರಂಟಿ ಬಾಧಿತರ’ ಬದುಕಿಗೆ ಪರಿಹಾರ ಒದಗಿಸಬೇಕು. ತಕ್ಷಣ ಬಂದ್ ನಿರತರನ್ನು ಸಿಎಂ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕರೆದು ಮಾತನಾಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ