NEWSನಮ್ಮಜಿಲ್ಲೆನಮ್ಮರಾಜ್ಯ

ಮಹಿಳೆಯರ ಚಲನಶೀಲತೆಗೆ ಗಮನಾರ್ಹ ಬದಲಾವಣೆ ತಂದ ಸಾರಿಗೆ ‘ಶಕ್ತಿ’ ಯೋಜನೆ

ವಿಜಯಪಥ ಸಮಗ್ರ ಸುದ್ದಿ
  • ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ಅಧ್ಯಯನ ವರದಿಯಲ್ಲಿ ಬಹಿರಂಗ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಶಕ್ತಿ’ ಯೋಜನೆ ಬೆಂಗಳೂರಿನಲ್ಲಿ ಮಹಿಳೆಯರ ಸಾರಿಗೆ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ತಂದಿದೆ ಎಂದು ತನ್ನ ಅಧ್ಯಯನ ವರದಿಯಲ್ಲಿ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ತಿಳಿಸಿದೆ.

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಯೋಜನೆಯಿಂದ ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಹೌದು! 2023ರ ಜೂನ್‌ 11ರಂದು ಆರಂಭವಾದ ಈ ಶಕ್ತಿ ಯೋಜನೆಯಿಂದಾಗಿ ಸರ್ಕಾರಿ ಸಾರಿಗೆ ವ್ಯವಸ್ಥೆಯಲ್ಲಿ ಪುರುಷರಿಗಿಂತ ಮಹಿಳಾ ಪ್ರಯಾಣಿಕರು ಹೆಚ್ಚುವಂತಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಮಹಿಳೆಯರು ಅದರ ಪ್ರಯೋಜನವನ್ನು ಉತ್ತಮವಾಗಿ ಪಡೆಯುತ್ತಿದ್ದಾರೆ.

ಇನ್ನು 2023ರ ಜನವರಿಯಿಂದ 2025ರ ಜನವರಿವರೆಗೆ ಬಿಎಂಟಿಸಿ 2.89 ಕೋಟಿ ಟ್ರಿಪ್‌ಗಳಲ್ಲಿ ಬಸ್‌ ಸೇವೆ ನೀಡಿದೆ. ಈ ಅವಧಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹಿಂದಿಗಿಂತಲೂ 2.5 ಪಟ್ಟು ಹೆಚ್ಚಾಗಿದೆ. ಮಹಿಳೆ ಮತ್ತು ಪುರುಷ ಪ್ರಯಾಣಿಕರ ಅನುಪಾತ 60:40 ದಾಖಲಾಗಿದೆ.

ಅಧ್ಯಯನ ವರದಿ ಪ್ರಕಾರ ಬಿಎಂಟಿಸಿಯಲ್ಲಿ ಮಹಿಳಾ ಪ್ರಯಾಣಿಕರು ಹೆಚ್ಚಾಗಿರುವುದರಿಂದ ಆದಾಯದಲ್ಲಿ ಕುಸಿತವಾಗಿಲ್ಲ. ಆದಾಯವು ಹಿಂದಿಗಿಂತಲೂ ಹೆಚ್ಚಾಗಿದೆ. ಕೇವಲ ನಗರದ ಕೇಂದ್ರಭಾಗವಷ್ಟೇ ಅಲ್ಲದೆ ಬೆಂಗಳೂರಿನ ಉತ್ತರ, ಪಶ್ಚಿಮ ಭಾಗದಲ್ಲಿಯೂ ಪ್ರಯಾಣಿಕರು ಹೆಚ್ಚಾಗಿದ್ದಾರೆ.

ಇನ್ನು ಮೆಟ್ರೋ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಬಿಎಂಟಿಸಿಯ ಮೆಟ್ರೋ ಫೀಡರ್‌ ಬಸ್‌ಗಳ ಪ್ರಯಾಣಿಕರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ ಎಂದು ವರದಿ ವಿವರವಾಗಿ ತಿಳಿಸಿದೆ.

Megha
the authorMegha

Leave a Reply

error: Content is protected !!
Latest news
ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ