CrimeNEWSಬೆಂಗಳೂರು

ಪ್ರೀತಿಸಿದ ಯುವಕನ ಕಿಡ್ನಾಪ್ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿರಾತಕರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರೀತಿಸಿದ ತಪ್ಪಿಗೆ ಪ್ರೇಯಸಿಯ ಸಂಬಂಧಿಕರು ಸಿಟ್ಟುಗೊಂಡು ಪ್ರಿಯಕರನ ಕಿಡ್ನಾಪ್ ಮಾಡಿ ಬೆಂಕಿಹಚ್ಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.

ಆರ್‌ಆರ್‌ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್​ ಎಂಬಾತನ ಮೇಲೆ ಕಿರಾತಕರು ಪೆಟ್ರೋಲ್​ ಸುರಿದು ಬೆಂಕಿಹಚ್ಚಿ ಪರಾರಿಯಾಗಿದ್ದು, ಬಳಿಕ ಶಶಾಂಕ್‌ ಆ ಬೆಂಕಿಯನ್ನು ಹೇಗೋ ನಂದಿಸಿಕೊಂಡು ಮನೆಯವರಿಗೆ ಫೋನ್‌ ಮಾಡಿದ್ದಾನೆ.

ವಿಷಯ ತಿಳಿದ ಕೂಡಲೇ ಆಂಬುಲೆನ್ಸ್‌ಗೆ ಕರೆ ಮಾಡಿ ಪಾಲಕರು, ರಾಜರಾಜೇಶ್ವರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲು ಸಾಧ್ಯವಿಲ್ಲ ನೀವು ವಿಕ್ಟೋರಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಸಲಹೆ ನೀಡಿದ್ದಾರೆ. ಕೂಡಲೇ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಿದ್ದು, ಜೀವನ್ಮರಣ ನಡುವೆ ಸೆಣಸಾಟ ನಡುತ್ತಿದ್ದಾನೆ ಶಶಾಂಕ್‌.

ಶಶಾಂಕ್ ಮೈಸೂರಿನಲ್ಲಿರುವ ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿಸುತಿದ್ದ. ಆದರೆ ಇಬ್ಬರ ಪ್ರೀತಿಗೆ ಯುವತಿಯ ಪಾಲಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಆಕೆ ಕಳೆದ ಸೋಮವಾರ ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದಳು.

ತನ್ನನ್ನು ನಂಬಿ ಬೆಂಗಳೂರಿಗೆ ಬಂದ ಯುವತಿಯ‌ನ್ನು ಶಶಾಂಕ್ ಮನೆಗೆ ಕರೆದೊದುಕೊಂಡು ಹೋಗಿದ್ದ. ಈ ವೇಳೆ ಯುವತಿಯ ಪಾಲಕರು ಶಶಾಂಕ್ ಮನೆಗೆ ನುಗ್ಗಿ ಆತನ ಮೇಲೆ ಹಲ್ಲೆ ಮಾಡಿ, ಯುವತಿಯನ್ನು ಕರೆದುಕೊಂಡು ಹೋಗಿದ್ದರು. ಇದಾದ ಬಳಿಕ ಯುವತಿ ಸಹವಾಸಕ್ಕೆ ಹೋಗಲ್ಲ ಎಂದು ಹೇಳಿ ಶಶಾಂಕ್ ತನ್ನ ಪಾಡಿಗೆ ಕಾಲೇಜಿಗೆ ಹೋಗುತ್ತಿದ್ದ.

ನಿನ್ನೆ ಬೆಳಗ್ಗೆ ತಂದೆ ರಂಗನಾಥ ಶಶಾಂಕ್​​ನನ್ನು ಕಾಲೇಜಿಗೆ ಡ್ರಾಪ್ ಮಾಡಿದ್ದಾರೆ. ಬಳಿಕ ವಾಪಸ್‌ ಬರುವಾಗ ಬಸ್ ನಿಲ್ದಾಣದಲ್ಲಿ‌ ಬಸ್​ಗೆ ಕಾಯುತಿದ್ದ ಶಶಾಂಕ್​​​ನನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಕೈ ಕಾಲು ಕಟ್ಟಿಹಾಕಿದ್ದಾರೆ. ಬಳಿಕ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾರೆ.

ಶಶಾಂಕ್‌ ಬೆಂಕಿಹಚ್ಚಿದ್ದರಿಂದ ತೀವ್ರವಾಗಿ ಸುಟ್ಟಗಾಯದಿಂದ ಬಳಲುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣ ಸಂಬಂಧಿಸಿದಂತೆ ಕುಂಬಳಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಘಟನೆ ಸಂಬಂಧ ಮಾಹಿತಿ ಪಡೆದು ಆರೋಪಿಗಳ ವಿರುದ್ಧ ಕಠೀಣ ಕ್ರಮ ತೆಗೆದುಕೊಳ್ಳುವಂತೆ ನಮ್ಮ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ