CRIMENEWSಕ್ರೀಡೆ

ನನ್ನ ಮೊಮ್ಮಗಳ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ: ದಿವ್ಯಾನ್ಷಿಯ ಅಜ್ಜ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನನ್ನ ಮೊಮ್ಮಗಳ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೃತಪಟ್ಟ ಯಲಹಂಕದ ದಿವ್ಯಾನ್ಷಿಯ ಅಜ್ಜ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬುಧವಾರ 4:30ಕ್ಕೆ ಕರೆ ಮಾಡಿ ದಿವ್ಯಾನ್ಷಿ ಮೃತಪಟ್ಟ ಬಗ್ಗೆ ತಿಳಿಸಿದರು. ಈ ಸಾವಿಗೆ ಸರ್ಕಾರವೇ ಕಾರಣ, ಸರಿಯಾದ ವ್ಯವಸ್ಥೆ ಮಾಡದೆ ಈರೀತಿ ಮಕ್ಕಳನ್ನು ಬಲಿಪಡೆದುಕೊಂಡಿದೆ ಎಂದು ಕಣ್ಣೀರಾಕಿದರು.

ಇನ್ನು ಇಂದು ಸಂಜೆ ಆಂಧ್ರದ ಅನ್ನಮಯ ಜಿಲ್ಲೆಗೆ ಮೃತದೇಹ ಶಿಫ್ಟ್ ಮಾಡುತ್ತೇವೆ. ನನ್ನ ಮೊಮ್ಮಗಳ ಸಾವಿಗೆ ಸರ್ಕಾರವೇ ನೇರ ಹೊಣೆ. ಯಾವುದೇ ಪೊಲೀಸ್‌ ಇರಲಿಲ್ಲ ಎಂದು ಕಿಡಿಕಾರಿದರು.

ಗೇಟ್ ನಂಬರ್ 15ರ ಒಳಗೆ ಹೋದಾಗ ಈ ಘಟನೆ ನಡೆದಿದೆ. ಬಿದ್ದ ಮೊಮ್ಮಗಳನ್ನು ಜೊತೆಗೆ ಇದ್ದವರೇ ಆಟೋದಲ್ಲಿ ಕರೆದುಕೊಂಡು ಹೋದರು. ಸರ್ಕಾರ ಮೊದಲೇ ಸಿದ್ಧತೆ ಮಾಡಿಕೊಳ್ಳಬೇಕಿತ್ತು ಎಂದು ಗೋಳಾಡುತ್ತಿದ್ದಾರೆ.

ಇನ್ನು ತಾಯಿ ಮತ್ತು ಚಿಕ್ಕಮ್ಮ ಜೊತೆಗೆ ಹೋಗಿದ್ದರು ಆದರೆ ನನ್ನ ಮಗಳು ವಾಪಸ್‌ ಹೆಣವಾಗಿ ಬಂದಿದ್ದಾಳೆ. ಈ ನೋವ ಯಾರಿಗೂ ಬೇಡ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಮೊಮ್ಮಗಳು 9ನೇ ತರಗತಿ ಓದುತ್ತಿದ್ದಳು. ದಿವ್ಯಾನ್ಷಿ ಕಾಲ್ತುಳಿತದ ವೇಳೆ ಅಸ್ವಸ್ಥಗೊಂಡು ಮೃತಪಟ್ಟಿದ್ದಾಳೆ. ಸದ್ಯ ದಿವ್ಯಾನ್ಷಿಯ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.

ಶಿವಕುಮಾರ್ ಹಾಗೂ ಅಶ್ವಿನಿ ದಂಪತಿಯ ಮಗಳಾದ ದಿವ್ಯಾನ್ಷಿ ಚಿಕ್ಕಮ್ಮ ರಚನಾ ಹಾಗೂ ಇನ್ನಿಬ್ಬರ ಜೊತೆ ಆರ್‌ಸಿಬಿ ಸಂಭ್ರಮಾಚರಣೆ ನೋಡಲು ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿದ್ದಳು. ನೂಕುನುಗ್ಗಲಿನಲ್ಲಿ ಕಾಲ್ತುಳಿತ ಉಂಟಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾಳೆ. ಯಲಹಂಕದ ಚೌಡೇಶ್ವರಿ ಲೇ ಔಟ್ ಮನೆಗೆ ದಿವ್ಯಾನ್ಷಿಯ ಮೃತದೇಹ ರವಾನಿಸಲಾಗಿದೆ. ಯಲಹಂಕದಲ್ಲಿ ದಿವ್ಯಾಂಶಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ