NEWSಕೃಷಿದೇಶ-ವಿದೇಶ

ಅನ್ನದಾತರ ಹೋರಾಟ: ಕಿಮೀವರೆಗೆ ವಾಹನಗಳ ಸಾಲು- ಸವಾರರ ಪರದಾಟ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿವಿಧ ಬೇಡಿಕಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆ ಗಾಜಿಪುರ ಮತ್ತು ಚಿಲ್ಲಾ ಗಡಿಯ ಹೆದ್ದಾರಿಗಳಲ್ಲಿ ತೀವ್ರ ಟ್ರಾಫಿಕ್ ಉಂಟಾಗಿ ವಾಹನ ಸವಾರರು ಗಂಟೆಗಟ್ಟೆಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ರೈತರ ಮೆರವಣಿಗೆಗೆ ಮೊದಲೇ ದೆಹಲಿಯ ಬಹುಮುಖ್ಯ ರಸ್ತೆಗಳಿಗೆ ಸಂರ್ಪಕಿಸುವ ಹೆದ್ದಾರಿಗಳಲ್ಲಿ ತೀವ್ರ ಟ್ರಾಫಿಕ್ ಉಂಟಾಗಿತ್ತು. ಅದರಿಂದ ವಾಹನ ಸವಾರರು ಒಂದು ಕಿಲೋಮೀಟರ್‌ಗೆ ಒಂದು ಗಂಟೆವರೆಗೆ ಕಾಯುವಂತಾಯಿತು. ದೆಹಲಿಯ ಗಾಜಿಯಾಬಾದ್ ಮತ್ತು ಉತ್ತರ ಪ್ರದೇಶದ ನೋಯ್ಡಾದೊಂದಿಗೆ ಸಂಪರ್ಕಿಸುವ ಗಾಜಿಪುರ ಮತ್ತು ಚಿಲ್ಲಾ ಗಡಿ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಆಗಿತ್ತು.

ಟ್ರಾಕ್ಟರ್‌ಗಳು ಮತ್ತು ಟ್ರಾಲಿಗಳು ಗಡಿ ಭಾಗದಲ್ಲಿ ಉರುಳುವುದನ್ನು ತಡೆಯಲು ಕಾಂಕ್ರೀಟ್ ಬ್ಲಾಕ್‌ಗಳು ಮತ್ತು ಬ್ಯಾರಿಕೇಡ್‌ಗಳ ಪದರಗಳನ್ನು ಹೆದ್ದಾರಿಗಳಲ್ಲಿ ನಿರ್ಮಿಸಲಾಗಿದೆ. ರಸ್ತೆಗಳಲ್ಲಿ ಮುಳ್ಳು ತಂತಿ ಮತ್ತು ಮೊಳೆಗಳನ್ನೂ ಅಳವಡಿಸಲಾಗಿದೆ. ರೈತರು ಸೋಮವಾರ ರಾತ್ರಿ ಸರ್ಕಾರದ ನಿಯೋಗದೊಂದಿಗೆ ಮಾತುಕತೆ ನಡೆಸಿದ್ದಾರೆ. ನಂತರವೂ ಮೂರು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದು, ಕನಿಷ್ಠ ಬೆಂಬಲ ಬೆಲೆಯನ್ನು ತಾವು ಬೆಳೆಯುವ ಬೆಲೆಗಳಿಗೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದರಿಂದ ದೆಹಲಿಯಿಂದ ಗುರುಗಾಂವ್‌ಗೆ ಸಂಪರ್ಕಿಸುವ ಎನ್‌ಎಚ್- 48 ರಸ್ತೆಯಲ್ಲಿಯೂ ವಾಹನಗಳ ಸಂಚಾರ ನಿಧಾನವಾಗಿದೆ. ದೆಹಲಿಗೆ ಪ್ರವೇಶಿಸುವ ಮೊದಲು ಬರುವ ಎಲ್ಲ ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಪ್ರತಿಭಟನೆ ಮಾಡುತ್ತಿರುವ ರೈತರನ್ನು ದೆಹಲಿಗೆ ಪ್ರವೇಶಿಸಿದಂತೆ ತಡೆಯಲು ಗಾಜಿಪುರ, ಸಿಂಘು ಮತ್ತು ಟಿಕ್ರಿ ಸೇರಿದಂತೆ ಹಲವಾರು ಗಡಿ ಭಾಗಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸವೇ ಮೂಲಕ ದೆಹಲಿಗೆ ಸರಕು ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಹರಿಯಾಣದ ಸಿರ್ಸಾ ಮತ್ತು ಉತ್ತರ ಪ್ರದೇಶದ ಸೂರಜ್‌ಪುರ (ಪರಿಚೌಕ್) ಮೂಲಕ ಪ್ರಯಾಣಿಸಲು ಸಹ ಅನುಮತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಒಟ್ಟಾರೆ ಕ್ಷಣ ಕ್ಷಣಕ್ಕೂ ರೈತರ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದು, ನಾಳೆ ಇನ್ನೆಷ್ಟು ಕಾವು ಏರುವುದೋ ಗೊತ್ತಿಲ್ಲ. ಆದರೆ, ಹೋರಾಟಕ್ಕೆ ಬರುತ್ತಿರುವ ರೈತರು 6 ತಿಂಗಳಿಗೆ ಬೇಕಾದ ಆಹಾರ ಸಾಮಗ್ರಿಗಳು ಮತ್ತು ಟ್ರ್ಯಾಕ್ಟರ್‌ಗಳಿಗೆ ಬೇಕಾದ ಡೀಸೆಲ್‌ಅನ್ನು ಈಗಾಗಲೇ ತಮ್ಮೊಂದಿಗೆ ತಂದಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಭಾರಿ ಸಮಸ್ಯೆ ಎದುರಿಸುವ ಸಾಧ್ಯತೆ ಹೆಚ್ಚಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ