ಬೆಂಗಳೂರು: ದೇಶದ ರೈತರ ಬೆಂಬಲ ನಮಗಿದೆ ನಾವು ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ಛಲ ನಮ್ಮಲ್ಲಿದೆ. ದಕ್ಷಿಣ ಭಾರತ ರಾಜ್ಯಗಳ ರೈತರು ಬೆಂಬಲಿಸಿ ಚಳವಳಿಯನ್ನು ಪ್ರಬಲಗೊಳಿಸಿ, ರೈತಶಕ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಸಂಯುಕ್ತ ಕಿಸಾನ್ ಬೇಡ ಮೋರ್ಚಾ (ರಾಜಕೀಯತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಹೇಳಿದ್ದಾರೆ.
ಇಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಸ್‌ಪಿ ಖಾತರಿ ಕಾನೂನಿಗೆ ಫೆಬ್ರವರಿ 13 ರಿಂದ 4 ಸ್ಥಳಗಳಲ್ಲಿ ನಮ್ಮ ಪ್ರತಿಭಟನೆ ನಡೆಯುತ್ತಿದ್ದು, 125 ದಿನಗಳಿಗೂ ಹೆಚ್ಚು ಕಾಲ ಸಾವಿರಾರು ರೈತರು ರಸ್ತೆಗಿಳಿದಿದ್ದಾರೆ. ಕೇಂದ್ರ ಸರ್ಕಾರ ಈಡೇರಿಸುವವರೆಗೆ ಈ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದರು.
ನಮ್ಮ ಭಾಗದ ರೈತ ಸಮುದಾಯದ ಆಕ್ರೋಶದಿಂದ ಗ್ರಾಮೀಣ ಪ್ರದೇಶದಲ್ಲಿ 2019 ರ ಚುನಾವಣೆಗೆ ಹೋಲಿಸಿದರೆ ಈ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ 71 ಲೋಕಸಭಾ ಸ್ಥಾನಗಳನ್ನು ಕಳೆದುಕೊಂಡಿದೆ ಎಂದು ಒತ್ತಿ ಹೇಳಿದ ಅವರು, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತಮ್ಮ ರೈತ ವಿರೋಧಿ ನೀತಿಯನ್ನು ಬದಲಾಯಿಸದಿದ್ದರೆ ಬಿಜೆಪಿ ರೈತರ ಭಾರಿ ಆಕ್ರೋಶ ಎದುರಿಸಬೇಕಾಗುತ್ತದೆ ಎಂದರು.
ಹರಿಯಾಣ ಮತ್ತು ಮಹಾರಾಷ್ಟ್ರ ಸೇರಿದಂತೆ ಮುಂಬರುವ ಎಲ್ಲ ವಿಧಾನಸಭಾ ಚುನಾವಣಾ ರಾಜ್ಯಗಳಲ್ಲಿ ರೈತರ ಕೋಪವನ್ನು ತೋರಿಸಲಾಗುವುದು. ಜುಲೈ 8 ರಂದು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ವತಿಯಿಂದ ಬಿಜೆಪಿಯ 240 ಸಂಸದರನ್ನು ಹೊರತುಪಡಿಸಿ ಎಲ್ಲ ಸಂಸತ್ ಸದಸ್ಯರಿಗೆ ತಮ್ಮ 12 ಬೇಡಿಕೆಗಳ ಕುರಿತು ಜ್ಞಾಪಕ ಪತ್ರವನ್ನು ನೀಡಲಾಗುವುದು ಎಂದರು.
ಜುಲೈನಲ್ಲಿ ಎರಡು ವೇದಿಕೆಗಳಲ್ಲಿ ದೆಹಲಿಯಲ್ಲಿ ಬೃಹತ್ ರೈತ ಸಮಾವೇಶವನ್ನು ಆಯೋಜಿಸಲಿದ್ದೇವೆ. ಈಗ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬಲಪಡಿಸಲು ದಕ್ಷಿಣ ಭಾರತದ ರೈತರು ಜೂನ್ 24 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಸಮಾವೇಶ ಆಯೋಜಿಸಿದ್ದರು. ಎಸ್‌ಕೆಎಂ (ರಾಜಕೀಯೇತರ) ಸೆಪ್ಟೆಂಬರ್‌ನಲ್ಲಿ ಹರಿಯಾಣದಲ್ಲಿ ರೈತ ರ‍್ಯಾಲಿಯನ್ನು ಆಯೋಜಿಸುತ್ತಿದ್ದು, ಅದರಲ್ಲಿ ಎಲ್ಲ ರಾಜ್ಯಗಳಿಂದ 1 ಲಕ್ಷಕ್ಕೂ ಹೆಚ್ಚು ರೈತರ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಂಯುಕ್ತ ಕಿಸಾನ್ ಮೋರ್ಚಾ ದಕ್ಷಿಣ ಭಾರತ ಸಂಚಾಲಕ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದ ತಕ್ಷಣ ರೈತರಿಗೆ ಲಾಭವಿಲ್ಲ ರೈತರ ಕಣ್ಣಿಗೆ ಮಣ್ಣಿರಚಬಾರದು. ರೈತರು ಕೇಳುತ್ತಿರುವುದು ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು, ಅದಕ್ಕಾಗಿಯೇ ನಮ್ಮ ಹೋರಾಟ ಎಂದರು.
ಇನ್ನು ಒಡಿಸ್ಸಾ ಮತ್ತು ಛತ್ತೀಸ್ಗಡ ರಾಜ್ಯಗಳು ಭತ್ತಕ್ಕೆ 3100 ರೂ. ಪ್ರೋತ್ಸಾಹ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ 2300 ರೂ. ಬೆಂಬಲ ಬೆಲೆ ನಿಗದಿ ಮಾಡಿರುವುದು ಯಾವ ನ್ಯಾಯ. ಕರ್ನಾಟಕದಲ್ಲಿ ಬರಗಾಲದಿಂದ ರೈತರು ತತ್ತರಿಸಿದ್ದರು ಸೂಕ್ತ ಪರಿಹಾರ ಸಿಕ್ಕಿಲ್ಲ. ಆದರೆ ತೆಲಂಗಾಣ ಸರ್ಕಾರ ರೈತರ 2 ಲಕ್ಷ ರೂ.ಸಾಲ ಮನ್ನಾ ಮಾಡಿದೆ.ಪ್ರತಿ ಎಕರೆಗೆ ವರ್ಷಕ್ಕೆ 15ಸಾವಿರ ಪ್ರೋತ್ಸಾಹಧನ
ನೀಡುತ್ತಿದ್ದಾರೆ.
ಆದರೆ, ನಮ್ಮ ರಾಜ್ಯದಲ್ಲಿ ತೀವ್ರ ಬರಗಾಲವಾಗಿದ್ದರು ರೈತರಿಗೆ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಹಣ 4 ಸಾವಿರ ರೂ.ಗಳನ್ನು ನಿಲ್ಲಿಸಿದ್ದಾರೆ. ಇದು ರಾಜ್ಯ ಸರ್ಕಾರ ರೈತರಿಗೆ ಬಗೆದ ದ್ರೋಹ ಎಂದು ಕಿಡಿಕಾರಿದರು.
ರೈತರ ಹೆಸರಿನಲ್ಲಿ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಆದರೆ, ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ 5 ರೂ. ಪ್ರೋತ್ಸಾಹ ಧನದ ಸುಮಾರು 700 ಕೋಟಿ ರೂ.ಗಳನ್ನು 8 ತಿಂಗಳಿಂದ ಬಿಡುಗಡೆ ಮಾಡಿಲ್ಲ, ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹರಿಯಾಣ ರಾಜ್ಯದ ರೈತ ಮುಖಂಡ ಅಭಿಮನ್ಯುಕೊಹರ್, ಕೇರಳ ರಾಜ್ಯದ ಕೆ.ವಿ. ಬಿಜು ಮಾತನಾಡಿ ಕೇಂದ್ರ ಸರ್ಕಾರ ಅಡುಗೆಗೆ ಬಳಸುವ ಪಾಮ್ ಅಯಿಲ್ ಅಂಡ್ ಸೋಯಾಬಿನ್ ಆಯಿಲ್ ಎಣ್ಣೆಯ ಆಮದು ತೆರಿಗೆಯನ್ನು ಶೇ.5.5ಕ್ಕೆ ಇಳಿಕೆ ಮಾಡಿದ ಪರಿಣಾಮ ತೆಂಗು ಬೆಳೆಗಾರರು ಸಂಕಷ್ಟ ಪಡುವಂತಾಗಿದೆ.ಇನ್ನು ಆದಾನಿ ಮಾಲಿಕತ್ವದ ಕಂಪನಿ ಈ ಎಣ್ಣೆಯನ್ನು ಹೆಚ್ಚು ಆಮದು ಮಾಡಿಕೊಳ್ಳುತ್ತಿದೆ ಇದು ರೈತರ ಪಾಲಿಗೆ ದೊಡ್ಡ ಸಂಕಷ್ಟ ಸೃಷ್ಟಿ ಮಾಡಿದೆ ಎಂದು ಕಿಡಿಕಾರಿದರು.
ತಮಿಳುನಾಡಿನ ರೈತ ಮುಖಂಡ ಪಿ.ಆರ್. ಪಾಂಡ್ಯನ್ ಮಾತನಾಡಿ, ಕೇಂದ್ರ ಸರ್ಕಾರ ನಾಲ್ಕು ಸಭೆಗಳನ್ನು ನಡೆಸಿ ಯಾವುದೇ ತೀರ್ಮಾನ ಕೈಗೊಳ್ಳದೆ ನಾಟಕವಾಡಿದೆ. ದಕ್ಷಿಣ ಭಾರತ ರಾಜ್ಯಗಳ ಕಬ್ಬು, ತೆಂಗು ಬೆಳೆಗಾರರ ಸಮಸ್ಯೆಗಳ ಬಗ್ಗೆ ಯಾವುದೇ ಗಂಭೀರ ಚಿಂತನೆ ನಡೆಸಿಲ್ಲ ಎಂದರು.
ಹರಿಯಾಣದ ಲಕ್ವಿಂದರ್ ಸಿಂಗ್, ನವದೆಹಲಿಯ ಜಾಫರ್ ಖಾನ್, ಸುಖಜಿತ್ ಸಿಂಗ್ ಮಾತನಾಡಿ, ಸ್ವಾತಂತ್ರ ಹೋರಾಟದ ಮಾದರಿಯಲ್ಲಿ ಶಾಂತಿಯುತ ರೈತ ಹೋರಾಟ ನಡೆಯುತ್ತಿದೆ ಸರ್ಕಾರ ಯಾವುದೇ ಅಸ್ತ್ರಬಳಸಿದರು ನಾವು ಎದೆಗುಂದುವ ಪ್ರಶ್ನೆಯೇ ಇಲ್ಲ. ರೈತ ಹೋರಾಟವನ್ನು ಲಘುವಾಗಿ ಕಾಣುವವರಿಗೆ ತಕ್ಕ ಪಾಠ ಕಲಿಸುತ್ತೇವೆ. ರೈತರು ವ್ಯವಸಾಯ ನಿಲ್ಲಿಸಿದರೆ ದೇಶದಲ್ಲಿ ಹಸಿವಿನ ಕ್ರಾಂತಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯ ರೈತ ಸಂಘದ ಗೋವಿಂದ ರೆಡ್ಡಿ, ಅತ್ತಹಳ್ಳಿ ದೇವರಾಜ್, ಗಜೇಂದ್ರ ಸಿಂಗ್ ಇದ್ದರು.
Related

You Might Also Like
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...
KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಮ್ ಪಾಷ ನೇಮಕ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಂಪಾಷಾ ಅವರನ್ನು ನೇಮಿಸಿ ಸರ್ಕಾರ ಗುರುವಾರ (ಜೂ.12) ಆದೇಶ ಹೊರಡಿಸಿದೆ. ಇದೇ ಜೂನ್ 2ರ ಸೋಮವಾರ...
NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ...