NEWSನಮ್ಮರಾಜ್ಯಸಿನಿಪಥ

ರಾತ್ರೋರಾತ್ರಿ ಡಾ.ವಿಷ್ಣುವರ್ಧನ್‌ ಸಮಾಧಿ ತೆರವು- ಅಭಿಮಾನಿಗಳ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾತ್ರೋರಾತ್ರಿ ಅಭಿಮಾನಿಗಳ ವಿರೋಧದ ನಡುವೆಯೂ ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಅವರ ಸಮಾಧಿಯನ್ನು ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್‌ ಇಲಾಖೆ ಹಾಗೂ ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

35 ವರ್ಷಗಳ ಕಲಾಸೇವೆ ಮತ್ತು 200 ಕನ್ನಡ ಚಲನಚಿತ್ರದಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದ ಡಾ.ವಿಷ್ಣುವರ್ಧನ್‌ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ್‌ ಸ್ಟುಡಿಯೋ ಆವರಣದಲ್ಲಿ ನಡೆಸಲಾಗಿತ್ತು.

ನಂತರದಲ್ಲಿ ವಿಷ್ಣು ಸಮಾಧಿಯನ್ನು ಸಂರಕ್ಷಿಸಿ, ಅದನ್ನು ಸ್ಮಾರಕವಾಗಿ ಘೋಷಿಸಬೇಕೆಂಬ ಹೋರಾಟ ನಡೆಯುತ್ತಲೇ ಇತ್ತು. ಆದ್ರೆ ಹೈಕೋರ್ಟ್‌ ಸೂಚನೆ ಮೇರೆ ರಾತ್ರೋರಾತ್ರಿ ಸಮಾಧಿಯನ್ನು ತೆರವುಗೊಳಿಸಲಾಗಿದ್ದು, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ 100ಕ್ಕೂ ಹೆಚ್ಚು ಆರಕ್ಷಕರನ್ನು ನಿಯೋಜನೆ ಮಾಡಲಾಗಿದೆ.

ಇನ್ನು ಮೈಸೂರಿನಲ್ಲುಂಟು ವಿಷ್ಣು ಸ್ಮಾರಕ: ಸದ್ಯ ಮೈಸೂರಿನಲ್ಲಿ ಈಗಾಗಲೇ ಒಟ್ಟು 2.75 ಎಕ್ರೆ ಪ್ರದೇಶದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಆಗಿದೆ. ವಿಷ್ಣು ಸಿನಿಮಾದಲ್ಲಿನ ಪ್ರಶಸ್ತಿಗಳೂ ಸ್ಮಾರಕದ ಮ್ಯೂಸಿಯಂನಲ್ಲಿದೆ. ವಿಶೇಷವಾದ ವಿಷ್ಣು ಪುತ್ಥಳಿಯನ್ನೂ ನಿರ್ಮಿಸಲಾಗಿದೆ. ನಟನ ಚಲನಚಿತ್ರ ಪ್ರಯಾಣದ ಗ್ಯಾಲರಿ, ವಿಷ್ಣು ಅವರ ಅಪರೂಪದ 600ಕ್ಕೂ ಹೆಚ್ಚು ಫೋಟೋಗಳು, ವಿಷ್ಣು ಬಳಸುತ್ತಿದ್ದ ವಸ್ತುಗಳು, ಬಟ್ಟೆ ಇಲ್ಲಿ ನೋಡಬಹುದಾಗಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಷ್ಣುವರ್ಧನ್ ಸ್ಮಾರಕಕ್ಕೆ ಸೆಪ್ಟೆಂಬರ್ 15, 2020 ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ವಿಷ್ಣು ಸ್ಮಾರಕದಲ್ಲಿ ಎರಡು ಕ್ಲಾಸ್ ರೂಮ್ ಕೂಡ ನಿರ್ಮಾಣ ಮಾಡಲಾಗಿದೆ. ಆಡಿಟೋರಿಯಂ ಕೂಡ ಇಲ್ಲಿ ನಿರ್ಮಿಸಲಾಗಿದೆ.

Megha
the authorMegha

Leave a Reply

error: Content is protected !!