NEWSನಮ್ಮಜಿಲ್ಲೆನಮ್ಮರಾಜ್ಯ

ಬಸ್‌ಗಳಿಗೆ ಆಯುಧ ಪೂಜೆ ಹಬ್ಬಕ್ಕೆ ಪೂಜೆ ಸಲ್ಲಿಸಲು ಬೇಕಾದಷ್ಟು ಹಣ ಕೊಡಲಾರದಷ್ಟು ಬಡವಾಯಿತೆ ಸಾರಿಗೆ ಇಲಾಖೆ !

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಿಗೆ ಆಯುಧ ಪೂಜೆ ಹಬ್ಬಕ್ಕೆ ಪೂಜೆ ಸಲ್ಲಿಸಲು ಸಾರಿಗೆ ಇಲಾಖೆಯಿಂದ ಒಂದು ಬಸ್‌ಗೆ ಕೇವಲ 150 ರೂ. ಹಣ ಬಿಡುಗಡೆ ಮಾಡಲಾಗಿದ್ದು, ಈ ಪ್ರತಿ ಬಸ್‌ಗೆ ಬಿಡುಗಡೆ ಮಾಡಿರುವ 150 ರೂ. ಯಾವುದಕ್ಕೆ ಸಾಲುತ್ತದೆ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೌದು! ಪ್ರತಿ ವರ್ಷ ದಸರಾ ಹಿನ್ನೆಲೆಯಲ್ಲಿ ಆಯುಧ ಪೂಜೆ ಹಬ್ಬದಲ್ಲಿ ಸಾರಿಗೆ ಬಸ್‌ಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಅದಕ್ಕಾಗಿ ಸಾರಿಗೆ ಇಲಾಖೆಯು ಪ್ರತಿ ಬಸ್‌, ಇಲಾಖಾ ವಾಹನಕ್ಕೆ ಹಣ ಬಿಡುಗಡೆ ಮಾಡಲಿದೆ. ಈ ಬಾರಿ ಕೇವಲ 150 ರೂ. ಬಿಡುಗಡೆ ಮಾಡಿದೆ. ಇದಕ್ಕೆ ಸಿಬ್ಬಂದಿ ಭಾರಿ ಅಸಮಾಧಾನ ಹೊರಹಾಕಿದ್ದಾರೆ.

ಹಬ್ಬದ ದಿನಗಳಲ್ಲಿ ಹೂ-ಹಣ್ಣು, ಹಾರ ಎಲ್ಲದರ ಬೆಲೆಯೂ ಏರಿಕೆ ಆಗುವುದು ಸಾಮಾನ್ಯ. ಒಂದು ಮಾರು ಹೂವಿಗೇ ಹಬ್ಬದಲ್ಲಿ 100 ರೂ. ದಾಟಲಿದೆ. ಕೇವಲ 150 ರೂಪಾಯಿಯಲ್ಲಿ ಒಂದು ವಾಹನಕ್ಕೆ ಪೂಜೆ ಮಾಡಲು ಸಾಧ್ಯವೇ ಎಂಬ ಪ್ರಶ್ನೆ ವ್ಯಕ್ತವಾಗಿದೆ.

ವಿಭಾಗೀಯ ಕಾರ್ಯಾಗಾರಕ್ಕೆ 2000 ರೂ. ಹಾಗೂ ಪ್ರಾದೇಶಿಕ ಕಾರ್ಯಾಗಾರಕ್ಕೆ 4000 ರೂ. ಹಣವನ್ನು ಸಾರಿಗೆ ಇಲಾಖೆ ಬಿಡುಗಡೆ ಮಾಡಿದೆ. ರಾಜ್ಯದ ನಾಲ್ಕೂ ನಿಗಮಗಳಿಗೆ ಒಂದು ಬಸ್‌ಗೆ 150 ರೂ. ಸಿಗಲಿದೆ. ಇದುಸಾಲುವುದಿಲ್ಲ. ಹೀಗಾಗಿ ಸಿಬ್ಬಂದಿಯೇ ಹಣ ಹಾಕಿ ಹಬ್ಬ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

ಇದು ಪ್ರತಿವರ್ಷವು ನಡೆಯುತ್ತಲೇ ಇರುತ್ತದೆ. ಸಂಸ್ಥೆಗೆ ಆದಾಯದ ಮೂಲವಾಗಿರುವ ಬಸ್‌ಗಳಿಗೆ ಕನಿಷ್ಠಪಕ್ಷ 500 ರೂಪಾಯಿಯನ್ನಾದರೂ ಖರ್ಚು ಮಾಡುವುದಿಲ್ಲ ಎಂದರೆ ಹೇಗೆ. ಈ ಅಧಿಕಾರಿಗಳು ತಮ್ಮ ಕಾರುಗಳಿಗೆ 150 ರೂಪಾಯಿ ಖರ್ಚನ್ನಷ್ಟೇ ಮಾಡಿ ಪೂಜೆ ಸಲ್ಲಿಸುತ್ತಾರೆ ಎಂದು ಸಾಮಾನ್ಯ ಜನರೆ ಪ್ರಶ್ನಿಸುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ