NEWSಸಂಸ್ಕೃತಿ

ಸಂತ ಕವಿ ಸರ್ವಜ್ಞರ ತ್ರಿಪದಿಗಳು ಸಾರ್ವಕಾಲಿಕ: ಎಡಿಸಿ ಸೈಯಿದಾ ಆಯಿಷಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 16ನೇ ಶತಮಾನದ ಪ್ರಸಿದ್ದ ಕನ್ನಡ ತ್ರಿಪದಿ ಕವಿ ದಾರ್ಶನಿಕ ಮತ್ತು ವಾಸ್ತವಿಕವಾದಿ ಸರ್ವಜ್ಞರು ರಚಿಸಿದ ತ್ರಿಪದಿಗಳು ಸಾರ್ವಕಾಲಿಕ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಂದು ಹಮ್ಮಿಕೊಂಡಿದ್ದ ಸಂತ ಕವಿ ಸರ್ವಜ್ಞರ ಜಯಂತಿಯಲ್ಲಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಜಾತಿ ಪದ್ಧತಿ, ಮೂಢನಂಬಿಕೆ ಮತ್ತು ಸಾಮಾಜಿಕ ಅಸಮಾನತೆಯ ವಿರುದ್ಧ ಅವರು ತಮ್ಮ ಕವಿತೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಅವರ ಕೊಡುಗೆ ಅಪಾರ ಎಂದು ಹೇಳಿದರು.

ಇನ್ನು ಕಠಿಣವಾದ ಭಾಷೆಯನ್ನು ಬಳಸದೆ, ಜನಸಾಮಾನ್ಯರಿಗೆ ಅರ್ಥವಾಗುವ ಅಚ್ಚಗನ್ನಡದಲ್ಲಿ ಜೀವನದ ಮೌಲ್ಯಗಳನ್ನು ಬೋಧಿಸಿದವರು ಅವರು, ಹಾಗಾಗಿ ಅವರನ್ನು ತ್ರಿಕಾಲ‌ ಜ್ಞಾನಿ ಎಂದು ಕರೆಯುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಯೋಜನಾಧಿಕಾರಿ ರಾಮಕೃಷ್ಣ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ರಮೇಶ್, ಪಶು ಇಲಾಖೆ ಉಪನಿರ್ದೇಶಕ ಡಾ.ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...