NEWSನಮ್ಮಜಿಲ್ಲೆಬೆಂಗಳೂರುರಾಜಕೀಯ

ಬೆಂಗಳೂರಲ್ಲಿದ್ದಾರೆ 98,43,577 ಮತದಾರರು: ಬಿಬಿಎಂಪಿಯ ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರ ಸೇರಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 98,43,577 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ತಿಳಿಸಿದ್ದಾರೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಚೇರಿಯ ಸಭಾಂಗಣ-01ರಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 50,78,525 ಪುರುಷ ಮತದಾರರರು, 47,63,268 ಮಹಿಳಾ ಮತದಾರರು ಹಾಗೂ 1,784 ಇತರೆ ಮತದಾರರು ಸೇರಿ ಒಟ್ಟು 98,43,577 ಮತದಾರರಿದ್ದಾರೆ ಎಂದು ವಿವರ ನೀಡಿದರು.

ನಗರದಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರದ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಎಲ್ಲ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ವಾರ್ಡ್ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಮತದಾರರು ತಮ್ಮ ಮತದಾರರ ಮಾಹಿತಿಯನ್ನು (ಹೆಸರು, ತಂದೆಯ ಹೆಸರು, ಸಂಬಂಧ, ಲಿಂಗ, ಜನ್ಮ ದಿನಾಂಕ ವಿಳಾಸ ಮತ್ತು ಪೋಟೊ) ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಮುಖ್ಯ ಚುನಾವಣಾಧಿಕಾರಿ ರವರ www.ceokarnataka.kar.nic.in ಮತ್ತು ಬಿಬಿಎಂಪಿ www.bbmp.gov.in ವೆಬ್‌ಸೈಟ್‌ನಲ್ಲೂ ಸಹ ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಲಾಗುವುದು ಎಂದರು.

ಸಾರ್ವಜನಿಕರು/ ಮತದಾರರು ಮತದಾರರ ಪಟ್ಟಿ ಕಾರ್ಯ ಚಟುವಟಿಕೆಗಳ ಲಾಭವನ್ನು ಪಡೆದುಕೊಂಡು ಯಾವುದೇ ಕಚೆರಿಗೆ ಹೋಗದೆ ಅವರಿರುವ ಸ್ಥಳದಿಂದಲೆ Web Portal-Voters.eci.gov.in, Voter Helpline Mobile App ಹಾಗೂ 1950 Voter Helpline ಮುಖಾಂತರ ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಆಗಿರುವ ತಪ್ಪುಗಳಿಗೆ ಸಂಬಂಧಪಟ್ಟ ನಮೂನೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ದಯಾನಂದ, ಸ್ನೇಹಲ್, ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ