NEWSನಮ್ಮಜಿಲ್ಲೆರಾಜಕೀಯ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ದೇವನಹಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ನೇರವಾಗಿ ಭಾಗಿಯಾಗಿರುವ ಕಾರಣ ಸಿಎಂ ನಿಶ್ಚಿತವಾಗಿ ರಾಜೀನಾಮೆ ಕೊಡಲಿದ್ದಾರೆ ಎಂದರು.

ಇನ್ನು ಈ ಮಧ್ಯೆ ದಿನ ಬೆಳಗಾದರೆ, ನಾನೂ ಮುಖ್ಯಮಂತ್ರಿ ಆಗ್ಬೇಕು. ನನಗೂ ಆಸೆ ಇದೆ. ನಾನೇನೂ ಸನ್ಯಾಸಿ ಅಲ್ಲ ಎಂದು ಅನೇಕ ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಎಂ.ಬಿ.ಪಾಟೀಲ್, ಬಸವರಾಜ ರಾಯರೆಡ್ಡಿ, ಆರ್.ವಿ.ದೇಶಪಾಂಡೆ ಮೊದಲಾದವರು ಹೇಳಿಕೆ ಕೊಟ್ಟಿದ್ದಾರೆ.

ಇತ್ತ ಕಡೆ ಇಂಥ ಹೇಳಿಕೆ ನೀಡಬಾರದು ಅದನ್ನು ನಿಲ್ಲಿಸುವಂತೆ ಸೂಚನೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರೇ ಅವರ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಇದನ್ನು ಗಮನಿಸಿದರೆ ಗೊತ್ತಾಗುತ್ತದೆ ಸಿಎಂ ಬದಲಾವಣೆಗೆ ಕಾಂಗ್ರೆಸ್‌ ಕೂಡ ಸಿದ್ಧತೆಯಲ್ಲಿ ತೊಡಗಿದೆ ಎಂಬುವುದು ಎಂದು ತಿಳಿಸಿದರು.

ಇನ್ನು ಮುಖ್ಯವಾಗಿ ಗಮನಿಸಲೇಬೇಕಾದ ವಿಚಾರವೆಂದರೆ ಕಾಂಗ್ರೆಸ್ ಹೈಕಮಾಂಡ್ ಆಶೀರ್ವಾದದಿಂದಲೇ ಕಾಂಗ್ರೆಸ್ಸಿನ ಹಿರಿಯ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಈಗಾಗಲೇ ಹಗ್ಗಜಗ್ಗಾಟ ಶುರುವಾಗಿದೆ. ಯಾವುದೇ ಸಂದರ್ಭದಲ್ಲಿ ಬೇಕಾದರೂ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ