NEWSನಮ್ಮರಾಜ್ಯ

ಗೃಹಲಕ್ಷ್ಮಿ ಯೋಜನೆಯಲ್ಲಿ  ಯಾವುದೇ ಗೋಲ್‌ಮಾಲ್ ಆಗಿಲ್ಲ:  ಡೇಟಾ ಸಹಿತ ಮಹಿಳಾ ಇಲಾಖೆ  ಸ್ಪಷ್ಟನೆ 

ಫಲಾನುಭವಿಗಳು ಖಾತೆ ಹೊಂದಿರುವ ಬ್ಯಾಂಕ್‌ನ ತಾಂತ್ರಿಕ ದೋಷದಿಂದ ತಪ್ಪಾದ ಬ್ಯಾಂಕ್ ಖಾತೆ ವಿವರ ಕಡತದಲ್ಲಿ ಹಂಚಿಕೆಯಾಗಿರಬಹುದು. ಜಂಟಿ ಬ್ಯಾಂಕ್ ಖಾತೆಯಿದ್ದಲ್ಲಿ ಒಂದೇ ಬ್ಯಾಂಕ್ ಖಾತೆಗೆ ಒಂದಕ್ಕಿಂತ ಹೆಚ್ಚು ಫಲಾನುಭವಿಗಳ ಸರ್ಕಾರಿ ಸೌಲಭ್ಯ ಜಮೆಯಾಗಿರಬಹುದು. ಆದರೆ ಗೋಲ್‌ಮಾಲ್ ಆಗಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ ವರದಿ ಹೇಳಿದ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆ ಇಲ್ಲ ಈ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ ಎಂದು ಡೇಟಾ ಸಮೇತ ಸ್ಪಷ್ಟನೆ ನೀಡಿದೆ.

ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಒಟ್ಟು 2,88,376 ಫಲಾನುಭವಿಗಳು ಸಾವನ್ನಪ್ಪಿದ್ದಾರೆ. ಆ ಪೈಕಿ 1,03,922 ಮೃತ ಫಲಾನುಭವಿಗಳ ಕುಟುಂಬದಲ್ಲಿ ಯಜಮಾನಿಯ ಹೆಸರು ಬದಲಾವಣೆ ಆಗಿ, ಮರು ನೋಂದಣಿ ಮಾಡಿಕೊಂಡಿದ್ದಾರೆ.

ಇನ್ನು 1,08,755 ಮೃತ ಫಲಾನುಭವಿಗಳ ಮರಣದ ವಿವರ ಸಕಾಲಕ್ಕೆ ಲಭ್ಯವಾಗಿಲ್ಲ. ಹೀಗಾಗಿ ಇಲ್ಲಿ ಯಾವುದೇ ತಾಂತ್ರಿಕ ದೋಷವಾಗಿಲ್ಲ. ಆಧಾರ್ ಬೇಸ್ಡ್ ಪೇಮೆಂಟ್ ಸಿಸ್ಟಮ್‌ನಲ್ಲಿ ಬ್ಯಾಂಕ್ ಖಾತೆ ವಿವರ ಲಭ್ಯವಾಗುತ್ತದೆ. ಮೃತ ಫಲಾನುಭವಿಗಳ ಅಕೌಂಟ್‌ಗೆ 115 ಕೋಟಿ ರೂ. ಪಾವತಿಯಾಗಿದ್ದು, ಈ ಪೈಕಿ 15.24 ಕೋಟಿ ರೂ. ರಿಕವರಿ ಮಾಡಿದ್ದೇವೆ. ಉಳಿದ ಹಣವನ್ನು ರಿಕವರಿ ಮಾಡಿಕೊಳ್ಳಲಾಗುತ್ತಿದೆ ಅಂತ ಹೇಳಿದೆ.

ಫಲಾನುಭವಿಗಳು ಖಾತೆ ಹೊಂದಿರುವ ಬ್ಯಾಂಕ್‌ನ ತಾಂತ್ರಿಕ ದೋಷದಿಂದ ತಪ್ಪಾದ ಬ್ಯಾಂಕ್ ಖಾತೆ ವಿವರ ಕಡತದಲ್ಲಿ ಹಂಚಿಕೆಯಾಗಿರಬಹುದು. ಜಂಟಿ ಬ್ಯಾಂಕ್ ಖಾತೆಯಿದ್ದಲ್ಲಿ ಒಂದೇ ಬ್ಯಾಂಕ್ ಖಾತೆಗೆ ಒಂದಕ್ಕಿಂತ ಹೆಚ್ಚು ಫಲಾನುಭವಿಗಳ ಸರ್ಕಾರಿ ಸೌಲಭ್ಯ ಜಮೆಯಾಗಿರಬಹುದು.

ಜಂಟಿ ಖಾತೆ ಇರುವಂತಹ ಫಲಾನುಭವಿಗಳ ಅತ್ತೆ-ಸೊಸೆ, ಅಮ್ಮ-ಮಗಳ ಬ್ಯಾಂಕ್ ಖಾತೆಗೆ ದುಡ್ಡು ಪಾವತಿಯಾಗಿದೆ. ಬೇರೆ ಬೇರೆ ಪಡಿತರ ಚೀಟಿ ಹೊಂದಿದ್ದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿರೋದ್ರಿಂದ ಎರಡೂ ಫಲಾನುಭವಿಗಳ ಮೊತ್ತ ಒಂದೇ ಖಾತೆಗೆ ಪಾವತಿ ಆಗಿರಬಹುದು ಅಂತ ಇಲಾಖೆ ಹೇಳಿದೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ ಯೋಜನೆಯಲ್ಲಿ  ಯಾವುದೇ ಗೋಲ್‌ಮಾಲ್ ಆಗಿಲ್ಲ:  ಡೇಟಾ ಸಹಿತ ಮಹಿಳಾ ಇಲಾಖೆ  ಸ್ಪಷ್ಟನೆ  ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಡಿಐಜಿ ಅನುಚೇತ್ ಅಧಿಕಾರ ಸ್ವೀಕಾರ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮೆ ಮಾಡಿಸಲು ಅನ್ನದಾತರಿಗೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ಕರೆ ಜೂ.27ರಂದು ನಾಡಪ್ರಭು ಕೆಂಪೇಗೌಡರ ಮೂಲಸ್ಥಳ ಆವತಿಯಿಂದ ಜ್ಯೋತಿ ರಥ ಯಾತ್ರೆ ಆರಂಭ KSRTC- BMTC ನೂತನ ಎಂಡಿಗಳ ಭೇಟಿ ಮಾಡಿದ ಕೂಟದ ಪದಾಧಿಕಾರಿಗಳು: ನೌಕರರ ಬೇಡಿಕೆ ಈಡೇರಿಕೆಗೆ ಸಭೆ ಕರೆಯಲು ಒತ್ತಾಯ ​NWKRTC ಸಂಸ್ಥೆಗೆ ಪ್ರಾಮಾಣಿಕ ಸೇವೆ ಸಲ್ಲಿಸಿ ನೂತನವಾಗಿ ನೇಮಕಗೊಂಡ ದರ್ಜೆ-2ರ ಅಧಿಕಾರಿಗಳಿಗೆ ಎಂಡಿ ಪ್ರಿಯಾಂಗಾ ಕರೆ BMTC ಘಟಕ-29ರ ಆವರಣದಲ್ಲೇ ನಡೆದ ಅಪಘಾತ: ಗಾಯಾಳು ಚಾಲಕನಿಗೆ 6 ಸಾವಿರ ಕೊಟ್ಟು ಸುಮ್ಮನಾದ ಅಧಿಕಾರಿಗಳು- ಬಸ್‌ ನಿಲ್ಲಿಸಿ... KSRTC ಪುತ್ತೂರು: ಬಿದ್ದು ಎರಡೂ ಕಾಲುಗಳ ಮುರಿದುಕೊಂಡಿದ್ದ ಚಾಲಕನಿಗೆ 71 ಸಾವಿರ ರೂ. ನೆರವು- ಧೈರ್ಯ ತುಂಬಿದ ಡಿಎಂ KSRTC ಅರಸೀಕೆರೆ: ಚಾಲನಾ ಸಿಬ್ಬಂದಿ ಒಗ್ಗಟ್ಟಿಗೆ ಮಣಿದು ಎಂಡಿಗೆ ನೋಟಿಸ್‌ ಜಾರಿ ಮಾಡಿದ ಕಾರ್ಮಿಕ ಆಯುಕ್ತರು ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು