NEWSದೇಶ-ವಿದೇಶರಾಜಕೀಯ

ಬಿಹಾರದಲ್ಲಿ ಇನ್ನೆಂದಿಗೂ ಕಟ್ಟಾ ಸರ್ಕಾರ್‌ ಬರೋದಿಲ್ಲ: ಪ್ರಧಾನಿ ನರೇಂದ್ರ ಮೋದಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ/ಪಾಟ್ನಾ: ಬಿಹಾರದಲ್ಲಿ ಎನ್‌ಡಿಎ ಪ್ರಚಂಡ ವಿಜಯ ಸಾಧಿಸಿದ್ದು, ಬಿಹಾರದಲ್ಲಿ ಕಟ್ಟಾ ಸರ್ಕಾರ್‌ (ಬಂದೂಕು ಹಿಡಿದ ಸರ್ಕಾರ) ಇನ್ನೆಂದಿಗೂ ಬರೋದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿಜಯೋತ್ಸವ ಭಾಷಣದಲ್ಲಿ ಆರ್‌ಜೆಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ಷಷ್ಠಿ ದೇವತೆ ಛಠಿ ಮೈಯಾ ನೆನೆಯುತ್ತಾ ಮಾತನಾಡಿದರು. ನಾನು ಚುನಾವಣೆ ವೇಳೆ ʻಜಂಗಲ್‌ ರಾಜ್‌ʼ ಮತ್ತು ʻಕಟ್ಟಾ ಸರ್ಕಾರ್‌ʼ ಬಗ್ಗೆ ಮಾತನಾಡಿದಾಗೆಲ್ಲ ಆರ್‌ಜೆಡಿಯಿಂದ ಯಾವುದೇ ವಿರೋಧ ಕೇಳಿಬರುತ್ತಿರಲಿಲ್ಲ. ಆದ್ರೆ ಕಾಂಗ್ರೆಸ್‌ಗೆ ಮಾತ್ರ ನೋವುಂಟಾಗಿತ್ತು. ನಾನು ಮತ್ತೆ ಹೇಳುವೆ ಬಿಹಾರದಲ್ಲಿ ʻಕಟ್ಟಾ ಸರ್ಕಾರ್‌ʼ ಇನ್ನೆಂದಿಗೂ ಬರಲ್ಲ ಎಂದರು.

ʻಫಿರ್‌ ಏಕ್‌ ಬಾರ್‌ ಎನ್‌ಡಿಎ ಸರ್ಕಾರ್‌ʼ: ನಾವು ಜನರ ಸೇವಕರು, ನಮ್ಮ ಕಠಿಣ ಪರಿಶ್ರಮದಿಂದ ಜನರನ್ನು ಸಂತೋಷಪಡಿಸುತ್ತಲೇ ಇರುತ್ತೇವೆ. ಲಕ್ಷಾಂತರ ಜನರ ಹೃದಯ ಕದ್ದಿದ್ದೇವೆ. ಅದಕ್ಕಾಗಿಯೇ ಇಡಿ ಬಿಹಾರ ʻಫಿರ್‌ ಏಕ್‌ ಬಾರ್‌ ಎನ್‌ಡಿಎ ಸರ್ಕಾರ್‌ʼ (ಮತ್ತೊಮ್ಮೆ ಎನ್‌ಡಿಎ ಸರ್ಕಾರ) ಅಂತ ಹೇಳಿದೆ.

ಎನ್‌ಡಿಎಗೆ ಪ್ರಚಂಡ ಗೆಲುವು ನೀಡಬೇಕು ಅಂತ ಬಿಹಾರದ ಜನರನ್ನು ಕೇಳಿಕೊಂಡಿದ್ದೆ, ನನ್ನ ಒಂದು ಕೂಗಿಗೆ ಅವರು ಕಿವಿಗೊಟ್ಟಿದ್ದಾರೆ. 2010 ರಿಂದ ಈಚೆಗೆ ಮೈತ್ರಿಕೂಟಕ್ಕೆ ಅತಿದೊಡ್ಡ ಅಂತರದ ಗೆಲುವು ನೀಡಿದ್ದಾರೆ. ಅದಕ್ಕಾಗಿ ಇಡೀ ಎನ್‌ಡಿಎ ಕುಟುಂಬದ ಪರವಾಗಿ, ನಾನು ಬಿಹಾರದ ಎಲ್ಲ ಜನರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಭಾವುಕರಾದರು.

ಚುನಾವಣಾ ಆಯೋಗದ ಪರ ಮೋದಿ ಬ್ಯಾಟಿಂಗ್‌: ಈ ಚುನಾವಣೆಯು ಭಾರತೀಯ ಚುನಾವಣಾ ಆಯೋಗದ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಮತ್ತಷ್ಟು ಬಲಪಡಿಸಿದೆ. ಏಕೆಂದ್ರೆ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಮತದಾನದ ಪ್ರಮಾಣ ಹೆಚ್ಚಾಗಿದೆ. ಅವಕಾಶ ವಂಚಿತರು, ಶೋಷಿತರಿಂದಲೂ ಮತದಾನ ಪ್ರಮಾಣ ಹೆಚ್ಚಾಗಿರುವುದು ಚುನಾವಣಾ ಆಯೋಗದ ಗಮನಾರ್ಹ ಸಾಧನೆಯಾಗಿದೆ ಎಂದು ಹೊಗಳಿದರು.

ನಕ್ಸಲ್‌ ಪೀಡಿತ ಪ್ರದೇಶದಲ್ಲೂ ಶಾಂತಿಯುತ ಮತದಾನ: ಒಂದು ಕಾಲದಲ್ಲಿ ಮಾವೋವಾದಿ ಭಯೋತ್ಪಾದನೆಯಿಂದ ಪ್ರಾಬಲ್ಯ ಹೊಂದಿದ್ದ ಅದೇ ಬಿಹಾರ ಇದು. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮಧ್ಯಾಹ್ನ 3 ಗಂಟೆಗೆಲ್ಲ ಮತದಾನ ಕೊನೆಗೊಳ್ಳುತ್ತಿತ್ತು. ಆದರೆ ಈ ಚುನಾವಣೆಯಲ್ಲಿ, ಬಿಹಾರದ ಜನರು ಭಯವಿಲ್ಲದೇ ಉತ್ಸಾಹದಿಂದ ಮತ ಚಲಾಯಿಸಿದ್ದರು.

ʻಜಂಗಲ್‌ ರಾಜ್‌ʼ ಆಳ್ವಿಕೆ ಸಮಯದಲ್ಲಿ ಮತದಾನ ಕೇಂದ್ರಗಳಲ್ಲಿ ಹಿಂಸಾಚಾರ ಬಹಿರಂಗವಾಗಿ ನಡೆಯುತ್ತಿತ್ತು. ಮತಪೆಟ್ಟಿಗೆಗಳನ್ನು ಲೂಟಿ ಮಾಡಲಾಗುತ್ತಿತ್ತು. ಆದರಿಂದು ಅದೇ ಶಾಂತಿಯುತ ಮತದಾನ ಮಾಡುತ್ತಿದೆ, ದಾಖಲೆ ಪ್ರಮಾಣದ ಮತದಾನ ನೋಡುತ್ತಿದೆ. ಪ್ರತಿಯೊಬ್ಬರೂ ತಮ್ಮ ಆಯ್ಕೆಯ ಪ್ರಕಾರವೇ ಮತ ಚಲಾಯಿಸಿದ್ದಾರೆ ಎಂದು ಮೋದಿ ಶ್ಲಾಘಿಸಿದರು.

ಈ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಜೆಪಿ ನಡ್ಡಾ ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
KSRTC ನೌಕರರದ್ದು ಹಾವು ಸಾಯೊಲ್ಲ ಕೋಲು ಮುರಿಯೊಲ್ಲ ಎಂಬ ಸ್ಥಿತಿ: ಇಂದಿನ ರಾಜೀ ಸಂಧಾನ ಸಭೆ ಮತ್ತೆ ವಿಫಲ ಜೂ.10ಕ್ಕೆ ಮ... 11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ