NEWSನಮ್ಮಜಿಲ್ಲೆರಾಜಕೀಯ

ಬಿಜೆಪಿಗರಿಗೆ ರಾಮನೇ ದೊಡ್ಡ ಅಸ್ತ್ರ: ಸಂಗೋಪನಾ ಸಚಿವ ಕೆ.ವೆಂಕಟೇಶ್

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ರಾಮನನ್ನು ಬಿಜೆಪಿಯವರು ದೊಡ್ಡ ಅಸ್ತ್ರ ಮಾಡಿಕೊಂಡು ಜನರ ಭಾವನೆ ಕೆರಳಿಸುತ್ತಿದ್ದಾರೆ ಎಂದು ರೇಷ್ಮೆ ಹಾಗೂ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಆರೋಪಿಸಿದ್ದಾರೆ.

ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ರಾಮನ ಮೇಲೆ ನಮ್ಮ ಅಭ್ಯಂತರವಿಲ್ಲ. ನಮ್ಮ ಅಭ್ಯಂತರ ಇರೋದು ಬಿಜೆಪಿ ನಡವಳಿಕೆ ಮೇಲೆ. ರಾಮಮಂದಿರ ನಿರ್ಮಾಣದ ಬಗ್ಗೆ ನಮ್ಮ ತಕರಾರಿಲ್ಲ, ಆದರೆ ರಾಮ ನಮ್ಮವನೇ ಅಂತಾ ಬಿಜೆಪಿಯವರು ಹೇಳುವ ವಿಚಾರದಲ್ಲಿ ನಮ್ಮ ತಕರಾರಿದೆ ಎಂದರು.

ಎಲ್ಲರಿಗೂ ಬೇಕಾದವನು ರಾಮ, ಹನುಮಂತ, ಸೀತೆಯನ್ನು ಎಲ್ಲರೂ ಪೂಜೆ ಮಾಡ್ತಾರೆ. ಆದರೆ ಬಿಜೆಪಿಯವರು ರಾಮ ತಮಗೆ ಸೇರಿದವನೆಂದು ಪ್ರತಿಬಿಂಬಿಸುತ್ತಿದ್ದಾರೆ. ಇದು ಸರಿಯಾದ ವರ್ತನೆಯಲ್ಲ. ಆ ದೃಷ್ಟಿಯಿಂದ ಸಿದ್ದರಾಮಯ್ಯ ನಮ್ಮ ನಾಯಕರು. ಆದ್ದರಿಂದ ರಾಮ ನಮ್ಮಲ್ಲಿ ಇದ್ದಾರೆಂದು ಮಾಜಿ ಸಚಿವ ಆಂಜನೇಯ ಹೇಳಿದ್ದಾರಷ್ಟೇ. ರಾಮನನ್ನು ತುಚ್ಛೀಕರಿಸುವ ರೀತಿ ಅವರು ಹೇಳಿಲ್ಲ ಎಂದು ಸಮರ್ಥಿಸಿಕೊಂಡರು.

ರಾಮಮಂದಿರ ನಮ್ಮದೇ ಎಂದು ಬಿಜೆಪಿ ಬಿಂಬಿಸಿಕೊಳ್ಳುವುದು ಬೇಸರದ ಸಂಗತಿ. ಅಯೋಧ್ಯೆ ವಿಚಾರ ಬಿಟ್ಟು ಇವರಿಗೆ ಬೇರೆ ಏನೂ ಇಲ್ಲ. ಈ ದೇಶದ ಸಮಸ್ಯೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಕುಡಿಯುವ ನೀರು, ಮನೆಯಿಲ್ಲದವರು ಈ ದೇಶದಲ್ಲಿ ಎಷ್ಟೋ ಜನರಿದ್ದಾರೆ.

ಸೂರಿಲ್ಲ ಈ ಜನರ ಬಗ್ಗೆ ಮೋದಿ ಅವರಿಗೆ ಏನೂ ಗೊತ್ತಾಗಲ್ಲ. ವರ್ಷದಲ್ಲಿ ಆರು ತಿಂಗಳು ಫಾರಿನ್‌ ಸುತ್ತುತ್ತಾರೆ. ಎಲ್ಲೋ ಒಂದು ಕಡೆ ಬಂದು ಭಾಷಣ ಮಾಡಿ ಹೋಗ್ತಾರೆ. ಬಿಹಾರ, ಮಧ್ಯಪ್ರದೇಶ, ಯುಪಿಯ ಹಳ್ಳಿಗಳಿಗೆ ಹೋಗಿ ನೋಡಿದ್ರೆ ಜನರ ಪರಿಸ್ಥಿತಿ ತಿಳಿಯುತ್ತೆ ಎಂದು ಸಚಿವ ವೆಂಕಟೇಶ್ ಹೇಳಿದರು.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ