NEWSನಮ್ಮಜಿಲ್ಲೆರಾಜಕೀಯ

ಸಚಿವ ಸ್ಥಾನ ಭರವಸೆ ಕೊಟ್ಟು ನನ್ನ ಕಾಂಗ್ರೆಸ್ ಪಕ್ಷಕ್ಕೆ ಕರೆತಂದರು: ಶಾಸಕ ಶಿವಲಿಂಗೇಗೌಡ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ನೀಡುತ್ತೇನೆ ಎಂದು ನನ್ನನ್ನು ಜೆಡಿಎಸ್‌ನಿಂದ ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡು ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಕಾಂಗ್ರೆಸ್‌ಗೆ ಕರೆತರುವಾಗ ನೀಡಿದ್ದ ಭರವಸೆಯಲ್ಲಿ ಮುಚ್ಚುಮರೆ ಏನಿಲ್ಲ. ಸಚಿವರನ್ನಾಗಿ ಮಾಡುವುದಾಗಿ ಸಿದ್ದರಾಮಯ್ಯನವರು ಭರವಸೆ ಕೊಟ್ಟಿದ್ದರು. ಎರಡೂವರೆ ವರ್ಷದ ಬಳಿಕ ಸಚಿವನನ್ನಾಗಿ ಮಾಡುವುದಾಗಿ ಸಾರ್ವಜನಿಕ ವೇದಿಕೆಗಳಲ್ಲೂ ತಿಳಿಸಿದ್ದಾರೆ ಎಂದರು.

ಜಿಲ್ಲೆಗೆ ಪಕ್ಷದ ಹಿತದೃಷ್ಟಿಯಿಂದ ಸಚಿವ ಸ್ಥಾನ ನೀಡಬೇಕು ಎಂಬ ರಾಜಕೀಯ ಲೆಕ್ಕಾಚಾರಗಳು ಇವೆ. ಗೆದ್ದಿರುವುದು ನಾನೊಬ್ಬನೇ. ಹೀಗಾಗಿ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ. ಸದ್ಯಕ್ಕೆ ಸಮಯ ಕೂಡಿಬಂದಿಲ್ಲ. ಸಂಪುಟ ಪುನ‌ರ್ರರಚನೆಯಾಗಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯನವರ ವಿರುದ್ಧ ಯಾರು, ಎಷ್ಟೇ ಬಾಯಿ ಬಡಿದುಕೊಂಡರೂ ಏನೂ ಮಾಡಲಾಗುವುದಿಲ್ಲ. 5 ವರ್ಷ ಸಿದ್ದರಾಮಯ್ಯ ಸುಭದ್ರ ಸರ್ಕಾರ ನಡೆಸುತ್ತಾರೆ. ಹಣಕಾಸಿನ ಕೊರತೆ ಇದೆ ಎಂಬುದಲ್ಲೇ ಸುಳ್ಳು ಎಂದರು.

ಇನ್ನು ಅರಸೀಕೆರೆ ಕ್ಷೇತ್ರವೊಂದಕ್ಕೆ ಕೋಟ್ಯಂತರ ರೂಪಾಯಿ ಅನುದಾನ ನೀಡಲಾಗಿದೆ. ಯಾವ ಅಭಿವೃದ್ಧಿ ಕೆಲಸಗಳೂ ನಿಂತಿಲ್ಲ. 56 ಸಾವಿರ ಕೋಟಿ ರೂ.ಗಳ ಗ್ಯಾರಂಟಿ ಯೋಜನೆಗಳನ್ನೂ ಯಶಸ್ವಿಯಾಗಿ ಜಾರಿಗೆ ತರಲಾಗಿದೆ. ಪ್ರತಿ ಮನೆಗೆ ತಿಂಗಳಿಗೆ 5 ಸಾವಿರ ರೂ.ಗಳು ಮನೆ ಬಾಗಿಲಿಗೆ ತಲುಪುತ್ತಿವೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ... ಹಣ ದುರುಪಯೋಗ, ಕರ್ತವ್ಯ ಲೋಪ ಎಸಗಿದ ಆರೋಪ ಸಾಬೀತು: ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ರದ್ದು ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು...