NEWSನಮ್ಮಜಿಲ್ಲೆರಾಜಕೀಯ

ಇದೊಂದು ದಂಧೆ ಸರ್ಕಾರ : ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ನಾನು ಸಹ ತುಮಕೂರು ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಯಾಗಿದ್ದು 1968 ರಿಂದ ಐದು ವರ್ಷಗಳ ಕಾಲ ವಿದ್ಯಾಭ್ಯಾಸ ನಡೆಸಿದ್ದೆ. ಹಿರಿಯ ಶ್ರೀಗಳ ಮಾರ್ಗದರ್ಶನದಲ್ಲಿ ಬೆಳೆದ ನಾನು ಸಾಮಾನ್ಯ ಜ್ಞಾನ ಹಾಗೂ ಮಾನವೀಯ ಗುಣಗಳನ್ನು ಪಡೆದುಕೊಂಡಿದ್ದೇನೆ ” ಎಂದು ಹಿರಿಯ ಶ್ರೀಗಳನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ನೆನಪಿಸಿಕೊಂಡರು.

ತುಮಕೂರಿಗೆ ಭೇಟಿ ನೀಡಿದದ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದರು. ಬಳಿಕ ತುಮಕೂರಿನ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯು ಮೋದಿ ವಿರೋಧಿ ಅಲೆ, ಕೋಮುವಾದ, ಸರ್ವಾಧಿಕಾರಿ ಪ್ರವೃತ್ತಿಯಿಂದ ದೇಶವನ್ನು ಮುಕ್ತಗೊಳಿಸಲು ಈಗಾಗಲೇ ದೊಡ್ಡದಾದಂತಹ ವೇದಿಕೆ ಇಂಡಿಯಾ ಎಂಬ ಹೆಸರಿನಲ್ಲಿ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ಇನ್ನು ಏಕ ವ್ಯಕ್ತಿಯೇ ಮುಖ್ಯ , ಒಂದೇ ಧರ್ಮ, ಒಂದೇ ಭಾಷೆ ಇರಬೇಕೆಂಬ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಹ ಹಿಡನ್ ಅಜೆಂಡ ಹೊಂದಿರುವ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ 26 ವಿಪಕ್ಷಗಳು ಘಟಬಂಧನ್‌ನಲ್ಲಿ ಒಂದಾಗಿರುವುದು ಸ್ವಾಗತಾರ್ಹ ಸಂಗತಿ. ಆಮ್ ಆದ್ಮಿ ಪಕ್ಷವು ಸಹ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಘಟಬಂಧನ್‌ನಲ್ಲಿ ಪ್ರಮುಖ ಪಾತ್ರಧಾರಿ ಯಾಗುತ್ತದೆ ಎಂದು ಹೇಳಿದರು.

ಈಗ ಕರ್ನಾಟಕದಲ್ಲಿ ನಮ್ಮ ಮುಂದೆ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಹಾಗೂ ಅನೇಕ ಮುನ್ಸಿಪಲ್ ಚುನಾವಣೆಗಳು ಇವೆ. ಆ ಎಲ್ಲ ಕಡೆಗೂ ಅಮ್ ಆದ್ಮಿ ಪಕ್ಷವು ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಇಳಿಸುವ ಮೂಲಕ ಸ್ಪರ್ಧೆ ಮಾಡುತ್ತೇವೆ ಎಂದು ತಿಳಿಸಿದರು.

ಈಗಿನ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಆಳಂದ್ ಶಾಸಕ ಬಿ.ಆರ್. ಪಾಟೀಲರ ಪತ್ರ ನೋಡಿದದರೆ ಗೊತ್ತಾಗುತ್ತದೆ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಎಂದದು. ಶಾಸಕರನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ, ವರ್ಗಾವಣೆ ಪತ್ರಗಳಿಗೆ ಬೆಲೆ ಇಲ್ಲ, ಉಸ್ತುವಾರಿ ಸಚಿವರು ವರ್ಗಾವಣೆ ದಂಧೆಗೆ ಮೂರನೇ ವ್ಯಕ್ತಿಯನ್ನು ನೇಮಿಸಿಕೊಂಡಿದ್ದಾರೆ ಎಂಬುದು ಈ ಪತ್ರದ ಸಾರಾಂಶವಾಗಿದೆ.

ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವುದು, ವರ್ಗಾವಣೆ ದಂಧೆಗಳಲ್ಲಿ ತೊಡಗಿರುವುದನ್ನು ಗಮನಿಸಿದರೆ ಇದೊಂದು ದಂಧೆ ಸರ್ಕಾರ ಎಂಬುದು ಸಾಬೀತಾಗುತ್ತಿದೆ. ಗ್ಯಾರೆಂಟಿಗಳನ್ನು ಒದಗಿಸಲು ಹಣ ಸಾಕಾಗುತ್ತಿಲ್ಲ, ಇನ್ನು ಕಾಮಗಾರಿಗಳಿಗೆ ಎಲ್ಲಿಂದ ಹಣ ತರಬೇಕೆಂದು ಉಪಮುಖ್ಯಮಂತ್ರಿಗಳು ಪ್ರಶ್ನಿಸುತ್ತಾರೆ.

ಹೀಗಿರುವಾಗ ಯಾವುದೇ ಪರಿಜ್ಞಾನವಿಲ್ಲದೆ, ಕೇವಲ ಮತಗಳಿಗೋಸ್ಕರ ಗ್ಯಾರೆಂಟಿಯನ್ನು ಘೋಷಣೆ ಮಾಡಿ, ಈಗ ಎಲ್ಲ ಗ್ಯಾರೆಂಟಿಗಳಿಗೂ ಈಗ ಕಂಡೀಶನ್‌ಗಳನ್ನು ಹಾಕುತ್ತಾ, ರಾಜ್ಯದ ನೀರಾವರಿ, ಕೃಷಿ, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಂಚಕಾರವನ್ನು ತಂದಿರುವುದು ನಾಚಿಕೆಗೇಡಿನ ಸಂಗತಿ ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ ನಾಗಣ್ಣ, ಉಪಾಧ್ಯಕ್ಷ ಸುರೇಶ್ ರಾಥೋಡ್ , ಮಹಿಳಾ ಘಟಕದ ಅಧ್ಯಕ್ಷ ಕುಶಲ ಸ್ವಾಮಿ , ತುಮಕೂರು ಜಿಲ್ಲಾಧ್ಯಕ್ಷ ಪ್ರೇಮ್ ಕುಮಾರ್, ಜಯರಾಮೇಗೌಡ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಪತ್ರಿಕಾಗೋಷ್ಠಿಯ ಬಳಿಕ ಸಿದ್ದಗಂಗಾ ಕ್ಷೇತ್ರಕ್ಕೆ ಭೇಟಿ ನೀಡಿ ಹಿರಿಯ ಶ್ರೀಗಳ ಗದ್ದುಗೆಯ ದರ್ಶನ ಮಾಡಿ, ಸಿದ್ದಗಂಗಾ ಶ್ರೀಗಳ ಆಶೀರ್ವಾದವನ್ನು ಪಡೆದರು.

Leave a Reply

error: Content is protected !!
LATEST
KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!? ಪಿರಿಯಾಪಟ್ಟಣ: ಲಂಚ ಸ್ವೀಕಾರ- ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಗುಮಾಸ್ತ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ