NEWSಕೃಷಿನಮ್ಮರಾಜ್ಯ

ಇದು ಚುನಾವಣಾ ಆಕರ್ಷಣೆ ಬಜೆಟ್: ರೈತ ಮುಖಂಡ ಕುರುಬೂರ್ ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಹಕಾರ ಸಂಘಗಳಲ್ಲಿ ನೀಡುತ್ತಿರುವ ಬಡ್ಡಿ ರಹಿತ ಕೃಷಿ ಸಾಲ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿರುವುದು ಸ್ವಾಗತಾರ್ಹ ಈ ಯೋಜನೆಯನ್ನು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಿಗೂ ವಿಸ್ತರಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳು ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

2023-24ನೇ ಸಾಲಿನ ರಾಜ್ಯ ಬಜೆಟ್‌ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ ಬಂಡೂರಿ ಯೋಜನೆ ಆರಂಭಕ್ಕೆ 80 ಕೋಟಿ ರೂಪಾಯಿ ನೀಡುವುದನ್ನು ಕನಿಷ್ಠ 300 ಕೋಟಿ ರೂ.ಗಳಿಗೆ ಏರಿಕೆ ಮಾಡಬೇಕು ಎಂದರು.

ಇನ್ನು ಭೂ ರಹಿತ ಕೃಷಿ ಮಹಿಳಾ ಕಾರ್ಮಿಕರಿಗೆ ಮಾಸಿಕ 500 ರೂಪಾಯಿ ಸಹಾಯಧನ ನೀಡುವ ಘೋಷಣೆ ಒಳ್ಳೆಯ ಯೋಜನೆ ಆಗಿದೆ ಎಂದು ಹೇಳಿದರು.

50 ಲಕ್ಷ ರೈತರಿಗೆ ಬಿತ್ತನೆ ಬೀಜ, ರಸ ಗೊಬ್ಬರ ಖರೀದಿಸಲು ಸಹಾಯಧನ ನೆರವು ನೀಡುವ ಯೋಜನೆ, ತೆಲಂಗಾಣ ರಾಜ್ಯ ಮಾದರಿಯಲ್ಲಿ ಜಾರಿ ಮಾಡಬೇಕು. ಪ್ರತಿ ವರ್ಷ, ಪ್ರತಿ ತಿಂಗಳು ಎಕರೆಗೆ 10,000 ರೂಪಾಯಿ ನೀಡುತ್ತಿರುವ ರೀತಿ ನಮ್ಮ ರಾಜ್ಯದಲ್ಲೂ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ಕಾಡುಪ್ರಾಣಿಗಳ ದಾಳಿಯಿಂದ ಜೀವ ಹಾನಿ ಆದವರಿಗೆ ಪರಿಹಾರ 15 ಲಕ್ಷ ರೂಪಾಯಿಗೆ ಏರಿಕೆ ಮಾಡಿರುವುದು ಸಾಲದು. 50 ಲಕ್ಷ ರೈತ ಕುಟುಂಬಗಳಿಗೆ ಜೀವನ್‌ ಜ್ಯೋತಿ ವಿಮಾ ಯೋಜನೆ ಜಾರಿ, ತೆಲಂಗಾಣ ಮಾದರಿಯಲ್ಲಿ ಜಾರಿಗೆ ತರುವುದು ಒಳ್ಳೆಯ ಬೆಳವಣಿಗೆ ಎಂದರು.

ಇನ್ನು ಕೃಷ್ಣ ಮೇಲ್ದಂಡೆ ಅಭಿವೃದ್ಧಿ ಯೋಜನೆಗೆ 5000 ಕೋಟಿ ರೂಪಾಯಿ ಅನುದಾನ, 2000 ಕೆರೆಗಳ ಅಭಿವೃದ್ಧಿ ಯೋಜನೆ ಅನುಷ್ಠಾನ ಕಾರ್ಯಗತವಾದರೆ ಒಳ್ಳೆಯ ನಿರ್ಧಾರ. ಕೊರೊನಾ ಸಂಕಷ್ಟದಿಂದ ಸಮಸ್ಯೆ ಎದುರಿಸುತ್ತಿರುವ ರೈತ ಉತ್ಪಾದಕ ಸಂಸ್ಥೆಗಳಿಗೆ ಆರ್ಥಿಕ ನೆರವು 10 ಲಕ್ಷ ರೂ. ಸಹಾಯಧನ ಘೋಷಣೆ ಮಾಡಿರುವುದನ್ನು ಸ್ವಾಗತಿಸಿದರು.

ಮಂಡ್ಯ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಉನ್ನತೀಕರಣಗೊಳಿಸಿ ಎಥನಾಲ್ ಉತ್ಪಾದನಾ ಘಟಕವನ್ನು ಆರಂಭಿಸಲು ಬಜೆಟ್ ನಲ್ಲಿ ತೀರ್ಮಾನ ಕೈಗೊಂಡಿರುವುದು, ಕಬ್ಬು ಬೆಳೆಗಾರರಿಗೆ ಸ್ವಲ್ಪ ಮಟ್ಟಿಗೆ ಸಹಕಾರಿ. ರಾಜ್ಯದ ಕಬ್ಬು ಬೆಳೆಗಾರಿಗೆ ಸಕ್ಕರೆ ಕಾರ್ಖಾನೆಗಳಿಂದ ತೂಕದಲ್ಲಿ ಮೋಸ, ಸಕ್ಕರೆ ಇಳುವರಿಯಲ್ಲಿ ಮೋಸ ತಪ್ಪಿಸಲು, ಯಾವುದೇ ಕಾರ್ಯಯೋಜನೆ ಪ್ರಕಟಿಸಿಲ್ಲ ಇದು ನಮಗೆ ಬೇಸರ ತಂದಿದೆ ಎಂದು ಹೇಳಿದರು.

ಇನ್ನು ಬಹುತೇಕ ಎಲ್ಲ ಯೋಜನೆಗಳು ಚುನಾವಣೆ ದೃಷ್ಟಿಯಲ್ಲಿ ಬಜೆಟ್‌ನಲ್ಲಿ ಮಾತ್ರ ಘೋಷಣೆ ಆಗಬಾರದು, ಕಾರ್ಯರೂಪಕ್ಕೆ ಬರಬೇಕು ಈ ದಿಕ್ಕಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುವುದು ಸೂಕ್ತ ಎಂದು ಪ್ರತಿಕ್ರಿಯೆ ನೀಡಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!?