NEWSದೇಶ-ವಿದೇಶರಾಜಕೀಯ

ಅದೃಷ್ಟ ಅಂದರೆ ಇದೇ ಅಲ್ವಾ- ನಾಲ್ಕಾರು ಮನೆಗೆಲಸ ಮಾಡಿ ಜೀವನ ಸಾಗಿಸುತ್ತಿದ್ದಾಕಿ ಈಗ ಪಶ್ಚಿಮ ಬಂಗಾಳದ ಮಂತ್ರಿ !

ಕೇವಲ 3 ಸಾವಿರ ರೂ. ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಪಶ್ಚಿಮ ಬಂಗಾಳದ ಆಸ್‌ಗ್ರಾಮ್ ವಿಧಾನ ಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದು, ಈಗ ಸಚಿವೆಯಾಗಿಯೂ ಪ್ರಮಾಣವಚನ ಸ್ವೀಕರಿಸಿದ್ದು, ಎಲ್ಲರ ಕೇಂದ್ರ ಬಿಂದುವಾಗಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಕೋಲ್ಕತ್ತಾ: ಜೀವನ ಸಾಗಿಸುವುದಕ್ಕೆ ಮನೆ ಕೆಲಸಕ್ಕೆ ಸೇರಿಕೊಂಡು ಕೇವಲ 3 ಸಾವಿರ ರೂಪಾಯಿಗಾಗಿ ಕಷ್ಟಪಡುತ್ತಿದ್ದ ಮಹಿಳೆಯೊಬ್ಬರು ಇಂದು ಸಚಿವರಾಗಿ ರಾಜ್ಯದ ಚುಕ್ಕಾಣಿ ಹಿಡಿದು ನಿಂತಿರುವುದು ಹೇಳಿಕೊಳ್ಳುವುದಕ್ಕೆ ಪದವೇ ಸಿಗದಷ್ಟು ಹೆಮ್ಮೆಯ ವಿಷಯವಾಗಿದೆ.

ಹೌದು! ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಈ ಕಮಲ್‌ ನಡೆದಿದ್ದು, ಬಡುವರು ಈಗಲೂ ಚುನಾವಣೆಯಲ್ಲಿ ನಿಂತು ಗೆಲ್ಲಬಹುದು ಎಂಬುದಕ್ಕೆ ತಾಜಾ ನಿದರ್ಶನವಾಗಿದೆ.

ತಿಂಗಳಿಗೆ 3,000 ರೂ. ವೇತನಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಎಂಬುವರು ಆ ಬಡತನವನ್ನು ಮೆಟ್ಟಿ ನಿಂತು ಶಾಸಕಿಯಾಗಿ ಆಯ್ಕೆಯಾಗಿದ್ದು ಅಲ್ಲದೆ, ಇದೀಗ ಸುವೇಂದು ಅಧಿಕಾರಿ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಕೇವಲ 3 ಸಾವಿರ ರೂ. ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಪಶ್ಚಿಮ ಬಂಗಾಳದ ಆಸ್‌ಗ್ರಾಮ್ ವಿಧಾನ ಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದು, ಈಗ ಸಚಿವೆಯಾಗಿಯೂ ಪ್ರಮಾಣವಚನ ಸ್ವೀಕರಿಸಿ, ಎಲ್ಲರ ಕೇಂದ್ರ ಬಿಂದುವಾಗಿದ್ದಾರೆ.

2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಿರ್ಣಾಯಕ ಗೆಲುವು ಸಾಧಿಸಿದ್ದು, ಮಾಝಿ 1,07,692 ಮತಗಳನ್ನು ಗಳಿಸಿ, ತಮ್ಮ ಪ್ರತಿಸ್ಪರ್ಧಿ ಶ್ಯಾಮ ಪ್ರಸನ್ನ ಲೋಹರ್ ಅವರನ್ನು 12,535 ಮತಗಳ ಅಂತರದಿಂದ ಸೋಲಿಸಿರುವುದು ಇವರ ಹೋರಾಟಕ್ಕೆ ಮತದಾರರು ನೀಡಿದ ಅಂತಿಮ ತೀರ್ಪಾಗಿದೆ.

ಗುಸ್ಕಾರ ಪುರಸಭೆ ನಿವಾಸಿಯಾಗಿರುವ ಮಾಝಿ, ಸಕ್ರಿಯ ರಾಜಕೀಯಕ್ಕೆ ಕಾಲಿಡುವ ಮೊದಲು ನಾಲ್ಕು ಮನೆಗಳಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಸಾಧಾರಣ ಹಿನ್ನೆಲೆ ಮತ್ತು ಬಲವಾದ ಸ್ಥಳೀಯ ಸಂಪರ್ಕಗಳಿಂದಾಗಿ ಪ್ರಚಾರದ ಸಮಯದಲ್ಲಿ ಅವರ ಉಮೇದುವಾರಿಕೆ ಗಮನ ಸೆಳೆಯಿತು.

ಮಾಝಿ ಈ ಹಿಂದೆ 2021ರ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದರು. ಆಗ ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ನ ಅಭ್ಯರ್ಥಿ ವಿರುದ್ಧ 11,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದರು. ಈ ಬಾರಿಯೂ ಬಿಜೆಪಿ ಅವರಿಗೆ ಟಿಕೆಟ್ ನೀಡಿತ್ತು. ಭರವಸೆಯಂತೆ ಈಗ ಕಮಲವನ್ನು ಅರಳಿಸಿದ್ದಾರೆ.

ಇನ್ನು ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಮಾಝಿ, ನಾನು ತುಂಬಾ ಸಂತೋಷವಾಗಿದ್ದೇನೆ ಮತ್ತು ಪ್ರಧಾನಿ ನರೇಂದ್ರ ಮೋದಿ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಾನು ಕೃತಜ್ಞಳಾಗಿದ್ದೇನೆ. ನಾನು ಇಂದು ನನ್ನ ಈ ಗೆಲುವನ್ನು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಅಲ್ಲೆ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೆಲಸ ಮಾಡುವುದು ಮತ್ತು ಸರಿಯಾದ ರಸ್ತೆಗಳು ಮತ್ತು ಕುಡಿಯುವ ನೀರು ಎಲ್ಲರ ಮನೆಗಳಿಗೆ ತಲುಪುವಂತೆ ನೋಡಿಕೊಳ್ಳುವುದು ನನ್ನ ಮುಖ್ಯ ಗುರಿಯಾಗಿದೆ. ಮೂಲಭೂತ ಸೌಕರ್ಯ ಸೇರಿದಂತೆ ಯುವಕರು ಮುಂದೆ ಬರುವುದುಕ್ಕೆ ಉತ್ತೇಜನ ನೀಡುವ ಜತೆಗೆ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗಾಗಿಯೂ ನಾನು ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಒಟ್ಟಾರೆ, ಒಂದು ಕಾಲದಲ್ಲಿ ಮೆನೆಗೆಲಸ ಮಾಡಿಕೊಂಡಿದ್ದ ಸಾಧಾರಣ ಬಡ ಕುಟುಂಬದಿಂದ ಬಂದ ಮಹಿಳೆಯೊಬ್ಬರು ಇಂದು ಶಾಸಕಿಯಾಗಿ ಸಚಿವೆಯಾಗಿ ರಾಜ್ಯದ ಜನರ ಸೇವೆ ಮಾಡಲು ಹೊರಟಿರುವುದು ತುಂಬಾ ಖುಷಿಯ ವಿಷಯ ಅವರಿಗೆ ಶುಭವಾಗಲಿ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ