CrimeNEWSನಮ್ಮರಾಜ್ಯ

ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಾಸನ ಸಂಸದ, ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವುದಕ್ಕೂ ನನಗೂ ಸಂಬಂಧವಿಲ್ಲ. ಅವರು ವಿದೇಶಕ್ಕೆ ಹೋಗಿದ್ದರೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಬರುತ್ತಾರೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಪ್ರಕರಣ ಆರೋಪವನ್ನು ಈಗಾಗಲೇ ಮುಖ್ಯಮಂತ್ರಿಗಳು ಎಸ್‌ಐಟಿಗೆ ತನಿಖೆಗೆ ಆದೇಶ ಮಾಡಿದ್ದಾರೆ ಅದರಲ್ಲಿ ಸತ್ಯ ಬಹಿರಂಗವಾಗಿ ಪ್ರಜ್ವಲ್‌ ತಪ್ಪು ಮಾಡಿರುವುದು ಸಾಬೀತಾದರೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.

ಇನ್ನು ನಾನು ಮತ್ತು ದೇವೇಗೌಡ ಅವರು ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವದಿಂದ ನಡೆದುಕೊಂಡಿದ್ದೇವೆ. ಕಷ್ಟದಲ್ಲಿ ಬರುವ ಹೆಣ್ಣು ಮಕ್ಕಳಿಗೆ ಸಹಾಯ ಮಾಡಿ ಗೌರವದಿಂದ ಕಂಡಿದ್ದೇವೆ. ಹಾಸನದ ಚುನಾವಣೆ ಸಂದರ್ಭದಲ್ಲಿ ಈ ಪ್ರಕರಣವು ಹೊರ ಬಂದಿದೆ. ಈ ಬಗ್ಗೆ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿದ್ದು, ಅದರ ಸಂಪೂರ್ಣ ವರದಿ ಬರಲಿ ಎಂದರು.

ಈ ನೆಲದ ಕಾನೂನಿನಲ್ಲಿ ಅವರಿಗೆ ಶಿಕ್ಷೆಯಾಗಬೇಕು. ತನಿಖೆಯ ವರದಿ ಬಂದ ನಂತರ ನಾನು ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣಾ ಅಖಾಡ ಅಣಿಯಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ರಾಜ್ಯಾದ್ಯಂತ ವಿಶೇಷವಾಗಿ, ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದವು.

ಈ ವಿಡಿಯೋ ತುಣುಕುಗಳು ಚುನಾವಣಾ ಪ್ರಚಾರ ಕಣದಲ್ಲಿ ದೊಡ್ಡ ಸದ್ದು ಮಾಡಿದ್ದವು. ಖಾಸಗಿ ಮೊಬೈಲ್‌ನಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾದ ವಿಡಿಯೋ ತುಣುಕುಗಳು ಸಾವಿರಾರು ಪೆನ್‌ಡ್ರೈವ್‌ಗಳ ಮೂಲಕ ಜನಸಾಮಾನ್ಯರನ್ನು ತಲುಪಿದ್ದರಲ್ಲಿ ಕೆಲವು ಪ್ರಮುಖ ನಾಯಕರ ಪಾತ್ರ ಇರುವ ಗುಮಾನಿಯ ಕೇಳಿಬಂದಿದೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ