NEWSಆರೋಗ್ಯನಮ್ಮಜಿಲ್ಲೆ

ಮಕ್ಕಳ ಆರೋಗ್ಯಯುತ ಬೆಳವಣಿಗೆಗೆ ಸಾವಿರ ದಿನದ ಅರಿವು ಬಹು ಮುಖ್ಯ: ಜಿಲ್ಲಾಧಿಕಾರಿ ಲತಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ತಾಯಿ ಗರ್ಭಧರಿಸಿದಾಗಿನಿಂದ ಮಗುವಿಗೆ ಎರಡು ವರ್ಷ ಪೂರ್ಣವಾಗುವವರೆಗೂ ಮಕ್ಕಳ ಆರೋಗ್ಯಯುತ ಬೆಳವಣಿಗೆಯಲ್ಲಿ1000 ದಿನಗಳ ಅರಿವು ಬಹುಮುಖ್ಯ ಪಾತ್ರವಹಿಸುವುದರಿಂದ ಎಲ್ಲಾ ತಾಯಂದಿರಿಗೆ ಜನಜಾಗೃತಿ ಮೂಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್‌ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸ್ವಿರುಲಿನಾ ಸಂಸ್ಥೆ ಸಹಯೋಗದಲ್ಲಿ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ಏರ್ಪಡಿಸಲಾದ “ಅಪೌಷ್ಟಿಕತೆ ನಿವಾರಣೆ ಹಾಗೂ 100 ದಿನಗಳ ಮಹತ್ವ ಕುರಿತು ಸಭೆ ಹಾಗೂ ಅಪೌಷ್ಠಿಕತೆ ನಿವಾರಣೆಗಾಗಿ ಹಾಗೂ 1000 (ತಾಯಿ ಗರ್ಭಧರಿಸಿದಾಗಿನಿಂದ ಮಗುವಿನ 2 ವರ್ಷ ತುಂಬುವ ತನಕ) ದಿನಗಳ ಮಹತ್ವದ ವಿಶೇಷ ಅಭಿಯಾನವನ್ನು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತುದಾರರ ತರಬೇತಿ ಕಾರ್ಯಕ್ರಮ”ವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಂದು ಮಗುವಿಗೂ ಮೂರು ವರ್ಷ ಪೂರ್ಣವಾಗುವವರೆಗೂ ಮಕ್ಕಳನ್ನು ಆರೋಗ್ಯಯುತವಾಗಿ ಬೆಳೆಸುವುದು ಅವಶ್ಯಕ ಇಲ್ಲವಾದಲ್ಲಿ ಮಕ್ಕಳ ಸರ್ವಾಂಗೀಣ ಬೆಳವಣಿಗೆ ಕುಂಠಿತವಾಗಿ ಭವಿಷ್ಯದಲ್ಲಿ ಮೆದುಳಿನ ಬೆಳವಣಿಗೆ ಕೊರತೆಯೊಂದಿಗೆ ಅಪೌಷ್ಟಿಕತೆಯಿಂದ ಬಳಲುತ್ತಾರೆ.

ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯ ಅಡಿಯಲ್ಲಿ ಜಿಲ್ಲೆಯ ಪ್ರತಿಯೊಂದು ಗ್ರಾಮಗಳಲ್ಲಿ ತಾಯಿ ಗರ್ಭಧರಿಸಿದಾಗಿನಿಂದ ಅವಶ್ಯವಿರುವ ಸೌಲಭ್ಯಗಳು ಸಾಂಪ್ರದಾಯಿಕ ಮತ್ತು ಪೌಷ್ಟಿಕಾಂಶವುಳ್ಳ ಆಹಾರ ಪದ್ಧತಿ ಮತ್ತು ಜೀವನಶೈಲಿ, ಮಹಿಳೆಯರ ಸ್ವಾಸ್ಥ್ಯ, ಲಿಂಗತ್ವ ಕುರಿತು ಹಾಗೂ ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಪೂರಕವಾಗುವಂತಹ ಸರ್ಕಾರಿ ಯೋಜನೆಗಳ ಪರಿಪೂರ್ಣ ಮಾಹಿತಿಯನ್ನು, ಪೋಷಣೆ ಮಾಸಾಚರಣೆ ಮಹತ್ವ ಮತ್ತು ಪೌಷ್ಟಿಕ ಆಹಾರ ಪದ್ಧತಿಯನ್ನು ಎಲ್ಲಾ ತಾಯಂದಿರಿಗೆ ಜಿಲ್ಲೆಯ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ತಿಳಿಸಬೇಕು ಎಂದು ಹೇಳಿದರು.

ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ವೈದ್ಯಕೀಯ ಸೇವೆ ಒದಗಿಸುವ ಜೊತೆಗೆ ಅವರ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಪರಿಸರವನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು ಹಾಗೂ ಆರೋಗ್ಯವಂತ ಮಹಿಳೆ ಮಾತ್ರ ಆರೋಗ್ಯವಂತ ಶಿಶುವಿಗೆ ಜನ್ಮ ನೀಡಬಲ್ಲಳು. ಹೀಗಾಗಿ ಗರ್ಭಿಣಿಯರು ಯಾವುದೇ ರೀತಿಯ ತಪ್ಪು ಕಲ್ಪನೆಗಳನ್ನು ನಂಬದೇ ಉತ್ತಮ ಆರೋಗ್ಯ ಜೀವನ ಶೈಲಿ ರೂಪಿಸಿಕೊಂಡು ಶಿಶುವಿನ ಜನನದ ನಂತರ ತಾಯಿ ಎದೆಹಾಲು ಮತ್ತು ಪೌಷ್ಟಿಕ ಆಹಾರಗಳನ್ನು ಸಮರ್ಪಕವಾಗಿ ಪೂರೈಸಿದರೇ ಮಾತ್ರ ಮಗು ಹಲವಾರು ರೋಗ ರುಜಿನಗಳಿಂದ ಮುಕ್ತವಾಗಿ ಸದೃಢ ದೇಹ ಆರೋಗ್ಯ ಪಡೆಯಲು ಸಾಧ್ಯ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ ಅವರು ಮಾತನಾಡಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸೌಲಭ್ಯಗಳನ್ನು ಬಳಸಿಕೊಳ್ಳುವ ಮೂಲಕ ಅಪೌಷ್ಟಿಕತೆ ನಿವಾರಣೆಗೆ ಮುಂದಾಗಬೇಕು. ಮಕ್ಕಳ ತೂಕವನ್ನು ಡಿಜಿಟಲ್ ಯಂತ್ರದ ಮೂಲಕ ಅಳತೆ ಮಾಡಬೇಕು.

ನಿಖರವಾದ ತೂಕವನ್ನು ನಮೂದಿಸಿ ಒಂದು ವೇಳೆ ಅಪೌಷ್ಟಿಕತೆಯಿಂದ ಬಳಲುತ್ತಿದ್ದಲ್ಲಿ ಆರೋಗ್ಯ ಸುಧಾರಣೆಗೆ ಹೆಚ್ಚಿನ ಆರೈಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಅಪೌಷ್ಟಿಕತೆ ನಿವಾರಣೆಗಾಗಿ ಇರುವ ಸೌಲಭ್ಯಗಳ ಕುರಿತು ಅನುಷ್ಠಾನಾಧಿಕಾರಿಗಳು ಕೆಳಹಂತದ ಅಧಿಕಾರಿ ಹಾಗೂ ಸಿಬ್ಬಂದಿಗೆ ಮಾಹಿತಿ ತರಬೇತಿ ನೀಡುವಂತೆ ನಿರ್ದೇಶನ ನೀಡಿದರು.

ಸ್ವಿರುಲಿನಾ ಫೌಂಡೇಶನ್ ಅಧ್ಯಕ್ಷರಾದ ಮಹೇಶ್ ಅವರು ಸಾವಿರ ದಿನಗಳ ಮಹತ್ವದ ಕುರಿತು ಮಾತನಾಡಿ ಮೂರು ವರ್ಷದೊಳಗಿನ ಮಕ್ಕಳಲ್ಲಿ ಆಗುವಂತಹ ಮೆದುಳಿನ ಬೆಳವಣಿಗೆಯ ಕಾಲಘಟ್ಟ ಅತಿ ಸೂಕ್ಷ್ಮವಾದದ್ದು, ಆದ್ದರಿಂದ ಕಡ್ಡಾಯವಾಗಿ ಎಲ್ಲಾ ತಾಯಂದಿರು ಮಗುವಿನ ಮೆದುಳಿನ ಬೆಳವಣಿಗೆಗೆ ಪೂರಕವಾಗುವಂತಹ ಆಹಾರ ಪದ್ಧತಿ ಮತ್ತು ಉತ್ತಮ ಆರೋಗ್ಯದ ಜೀವನ ಶೈಲಿಯನ್ನು ಮಕ್ಕಳಿಗೆ ರೂಪಿಸಬೇಕು ಎಂದು ತಿಳಿಸಿದರು.

ಅಪೌಷ್ಟಿಕತೆ ಹೋಗಲಾಡಿಸುವಲ್ಲಿ ಅಂಗನವಾಡಿ ಶಿಕ್ಷಕಿಯರು ಮತ್ತು ಶಾಲಾ-ಕಾಲೇಜಿನ ಶಿಕ್ಷಕರ ಪಾತ್ರ ಅಗತ್ಯವಾದದ್ದು ಪೌಷ್ಟಿಕ ಆಹಾರಗಳು ಮತ್ತು ಸೇವನೆಯಿಂದಾಗುವ ಉಪಯೋಗಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಬೇಕು ಎಂದರು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ತಮ್ಮ ಮನೆಗಳಲ್ಲಿ ಪೌಷ್ಟಿಕ ಆಹಾರ ಸೇವನೆಯಿಂದ ಸದೃಢ ದೇಹ ಉತ್ತಮ ಆರೋಗ್ಯಯುತ ಜೀವನ ನಡೆಸಬಹುದು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಕಂಠಯ್ಯ , ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಿ.ಕೆ.ವಿಜಯೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ನಟರಾಜ್.ಎಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶಾಲಿನಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ