Friday, November 1, 2024
NEWSನಮ್ಮರಾಜ್ಯ

ರಾಜ್ಯದಲ್ಲಿ ಸಾವಿರಾರು ಕೋಟಿ ರೂ. ಕಸ ನಿರ್ವಹಣೆ ಮಾಫಿಯಾವೇ ಎನ್‌ಜಿಟಿ ದಂಡಕ್ಕೆ ಕಾರಣ : ಎಎಪಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಘನ ಹಾಗೂ ದ್ರವ ತ್ಯಾಜ್ಯ ವಿಲೇವಾರಿಯಲ್ಲಿ ವಿಫಲವಾಗಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ಪೀಠವು (ಎನ್‌ಜಿಟಿ) 2,900 ಕೋಟಿ ರೂಪಾಯಿ ದಂಡ ವಿಧಿಸಿದ್ದು, ಬಿಜೆಪಿ ಸರ್ಕಾರವು ಕರ್ನಾಟಕದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದೆ ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಕಿಡಿಕಾರಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್ ದಾಸರಿ , “ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ 2014ರಲ್ಲೇ ಹಲವು ಕ್ರಮಗಳನ್ನು ಸೂಚಿಸಿದ್ದರೂ ಸರ್ಕಾರ ಅವುಗಳನ್ನು ಪಾಲಿಸಿಲ್ಲ. ಆದ್ದರಿಂದ ಈಗ ಬರೋಬ್ಬರಿ 2,900 ರೂಪಾಯಿ ದಂಡವನ್ನು ಸರ್ಕಾರ ಕಟ್ಟಬೇಕಾಗಿದೆ.

ಎನ್‌ಜಿಟಿಯು ರಾಜ್ಯ ಸರ್ಕಾರಕ್ಕೆ ಈಗ ವಿಧಿಸಿರುವ ದಂಡದ ಜೊತೆಗೆ, ಈ ಹಿಂದೆ ಚಂದಾಪುರದ ಕೆರೆ ಹಾಳುಗೆಡವಿರುವುದಕ್ಕೆ ಹಾಕಿದ್ದ ದಂಡ ಮೊತ್ತದ ಸೇರಿಸಿದರೆ ಒಟ್ಟು 3,400 ಕೋಟಿ ರೂಪಾಯಿ ಆಗುತ್ತದೆ. ಬಿಜೆಪಿ ಸರ್ಕಾರದ ಎಡವಟ್ಟಿನಿಂದಾಗಿ ಜನರ ಅಪಾರ ತೆರಿಗೆ ಹಣವು ವ್ಯರ್ಥವಾಗುತ್ತಿದೆ” ಎಂದು ಹೇಳಿದರು.

“ರಾಜ್ಯದಲ್ಲಿ ಪ್ರತಿದಿನ ಸರಾಸರಿ 15,000 ಟನ್‌ ಘನ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಈ ಪೈಕಿ ಸುಮಾರು 6,000 ಟನ್‌ ತ್ಯಾಜ್ಯವು ಸಮರ್ಪಕವಾಗಿ ವಿಲೇವಾರಿ ಆಗುತ್ತಿಲ್ಲ. ಇದನ್ನು ಬಯಲಿನಲ್ಲಿ ಸುರಿದು ನಿರ್ಲಕ್ಷ್ಯ ತೋರಲಾಗುತ್ತಿದೆ. ಸುಮಾರು 200 ಬಯಲಿನಲ್ಲಿ ವಿಲೇವಾರಿಯಾಗದೇ ಉಳಿದಿರುವ 180 ಲಕ್ಷ ಟನ್‌ ಕಸವು ಪರ್ವತಾಕಾರದ ರಾಶಿಯಾಗಿದೆ. ಜೊತೆಗೆ, ಪ್ರತಿದಿನ ಸುಮಾರು 1,400 ಲೀಟರ್‌ ಕೊಳಚೆಯು ಶುದ್ಧೀಕರಣಗೊಳ್ಳದೇ ನೀರಿನ ಮೂಲಗಳನ್ನು ಸೇರುತ್ತಿದೆ” ಎಂದು ಮೋಹನ್ ದಾಸ್ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ವಕೀಲರ ಘಟಕದ ಸದಸ್ಯ ಗಂಗಾಧರ್ ಮಾತನಾಡಿ, “ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಕಸ ನಿರ್ವಹಣೆಯು 1,500 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ದಂಧೆಯಾಗಿ ಪರಿವರ್ತನೆಗೊಂಡಿದೆ. ಇದರಿಂದಾಗಿ ಕರ್ನಾಟಕವು ಎನ್‌ಜಿಟಿಯಿಂದ ಛೀಮಾರಿ ಹಾಕಿಸಿಕೊಳ್ಳಬೇಕಾಗಿದೆ.

ಎನ್‌ಜಿಟಿಯು ರಾಜ್ಯ ಸರ್ಕಾರಕ್ಕೆ ದಂಡ ವಿಧಿಸಿದ್ದಲ್ಲದೇ, ಕಸ ವಿಲೇವಾರಿಗೆ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿವರವಾಗಿ ಹಾಗೂ ಸ್ಪಷ್ಟವಾಗಿ ಹೇಳಬೇಕೆಂದು ಆದೇಶಿಸಿದೆ. ಸರ್ಕಾರವು ಎನ್‌ಜಿಟಿಯ ನಂಬಿಕೆಯನ್ನು ಕಳೆದುಕೊಂಡಿರುವುದು ಇದರಿಂದಲೇ ತಿಳಿಯುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಾವೇ ಸ್ವತಃ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಹೊಣೆಯನ್ನು ಹೊತ್ತಿದ್ದಾರೆ.

ಬೆಂಗಳೂರು ನಗರದ ಕಸ ನಿರ್ವಹಣೆಯನ್ನು ಸಮರ್ಪಕವಾಗಿ ಸಮರ್ಪಕವಾಗಿ ಮಾಡದ ಮುಖ್ಯಮಂತ್ರಿಗಳು ಕೂಡಲೇ ತಮ್ಮ ಖಾತೆಯನ್ನು ತೆರೆಯಬೇಕೆಂದು ಒತ್ತಾಯಿಸಿದರು. ರಾಜ್ಯದ ಜನತೆಗೆ ಈ ಕೂಡಲೇ ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕು ” ಎಂದು ಗಂಗಾಧರ್ ಆಗ್ರಹಿಸಿದರು

ಆಮ್‌ ಆದ್ಮಿ ಪಾರ್ಟಿಯ ವಕ್ತಾರರಾದ ಉಷಾ ಮೋಹನ್‌ ಸೇರಿದಂತೆ ಅನೇಕ ಮುಖಂಡರುಗಳು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...