NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಬಸ್‌ಗಳಲ್ಲಿ ಟಿಕೆಟ್‌ ರಹಿತ ಪ್ರಯಾಣ: 5.39 ಲಕ್ಷ ರೂ. ದಂಡ ಕಟ್ಟಿದ ಪ್ರಯಾಣಿಕರು- ಜನರು ಮಾಡಿದ ತಪ್ಪಿಗೆ ಕಂಡಕ್ಟರಿಗೂ ಶಿಕ್ಷೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ರಾಜ್ಯ ಸೇರಿದಂತೆ ಇತರ ನೆರೆಯ ರಾಜ್ಯಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 5.39 ಲಕ್ಷ ರೂಪಾಯಿ ದಂಡ ನಿಗಮದ ತನಿಖಾಧಿಕಾರಿಗಳು ವಸೂಲಿ ಮಾಡಿದ್ದಾರೆ.

ಡಿಸೆಂಬರ್‌ನಲ್ಲಿ 43,863 ಬಸ್‌ಗಳನ್ನು ತಪಾಸಣೆ ನಡೆಸಿದ ತನಿಖಾ ಸಿಬ್ಬಂದಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 3,340 ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ ಎಂದು ಗುರುವಾರ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದವರಿಂದ ನಿಗಮಕ್ಕೆ ಒಟ್ಟು ರೂ. 77, 577 ನಷ್ಟವಾಗಿತ್ತು. ಅಲ್ಲದೆ ಈ ಸಂಬಂಧ ತಪ್ಪಿತಸ್ಥ ಸಿಬ್ಬಂದಿ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುತ್ತಿದೆ.

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವಾಗ ಟಿಕೆಟ್‌/ ಪಾಸ್‌ಗಳನ್ನು ಪಡೆದುಕೊಂಡು ಸುರಕ್ಷಿತವಾಗಿ ಪ್ರಯಾಣಿಸಿ ಟಿಕೆಟ್‌ ರಹಿತ ಪ್ರಯಾಣದಿಂದ ದಂಡ ಕಟ್ಟಬೇಡಿ ಎಂದು ನಿಗಮ ಅಧಿಕಾರಿಗಳು ಪ್ರಯಾಣಿಕರಿಗೆ ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ