CrimeNEWSನಮ್ಮರಾಜ್ಯ

ಕೇರಳ ಗಡಿಭಾಗ ಪಲ್ಲೇರಿ ಗ್ರಾಮದಲ್ಲಿ ಇಬ್ಬರು ಕೂಲಿ ಕಾರ್ಮಿಕರ ಬಲಿ ಪಡೆದ ಹುಲಿ- ಗ್ರಾಮಸ್ಥರಲ್ಲಿ ಆತಂಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕೊಡಗು: ನಾಡಿನಲ್ಲಿ ಚಿರತೆ, ಹುಲಿ ದಾಳಿಗಳು ಹೆಚ್ಚಾಗುತ್ತಿದ್ದು ಇಂದು ಬೆಳಗ್ಗೆ ಹುಲಿ ದಾಳಿಗೆ ಕೇರಳ ಗಡಿಭಾಗ ಪಲ್ಲೇರಿ ಗ್ರಾಮದಲ್ಲಿ ಕೃಷಿ ಕಾರ್ಮಿಕ ರಾಜು (75) ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳ ಹುಲಿ ದಾಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 2ಕ್ಕೇರಿದೆ. ಸೋಮವಾರ ಬೆಳಗ್ಗೆ ತನ್ನ ಮನೆಯಿಂದ ಹೊರ ಬಂದ ರಾಜು ಅವರ ಮೇಲೆ ಕಾಫಿ ತೋಟದಲ್ಲಿ ಅಡಗಿದ್ದ ಹುಲಿ ಕ್ಷಣಾರ್ಧದಲ್ಲೇ ದಾಳಿ ನಡೆಸಿ, ತಲೆ ಹಾಗೂ ಕುತ್ತಿಗೆ ಭಾಗವನ್ನು ತೀವ್ರವಾಗಿ ಗಾಯಗೊಳಿಸಿದ್ದರಿಂದ ರಾಜು ಸ್ಥಳದಲ್ಲಿಯೇ ಒದ್ದಾಡಿ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಾಗರಹೊಳೆ ಎಸಿಎಫ್ ಗೋಪಾಲ್ ಮತ್ತು ಹುಲಿ ಕಾರ್ಯಾಚರಣೆ ಪಡೆಯ ಸಿಬ್ಬಂದಿ ತೆರಳಿದ್ದಾರೆ. ರಾಜು ಅವರನ್ನು ಕೊಂದ ಹುಲಿ ಕಾಫಿ ತೋಟದಲ್ಲಿ ಅಡಗಿರುವುದಕ್ಕೆ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸೆರೆ ಹಿಡಿಯಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಇನ್ನು ಭಾನುವಾರ ಸಂಜೆ ಹುಲಿ ದಾಳಿಗೆ ಯುವ ಕಾರ್ಮಿಕ ಚೇತನ್ (18) ಬಲಿಯಾಗಿದ್ದಾರೆ. ಅನತಿ ದೂರದಲ್ಲಿಯೇ ಈ ಘಟನೆ ನಡೆದಿದ್ದು, ಮನುಷ್ಯರ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿರುವ ಹುಲಿ ಕಾಫಿ ತೋಟದಲ್ಲಿಯೇ ಸುಳಿದಾಡುತ್ತಿದೆ ಎಂದು ಕಾರ್ಮಿಕರು ಆತಂಕ ಪಡುತ್ತಿದ್ದು ಮನೆಯಿಂದ ಹೊರಬರುವುದಕ್ಕೂ ಹೆದರುತ್ತಿದ್ದಾರೆ.

ಸ್ಥಳೀಯರ ಆಕ್ರೋಶ: ದಕ್ಷಿಣ ಕೊಡಗಿನಲ್ಲಿ 5 ವರ್ಷಗಳಿಂದ ನಿರಂತರವಾಗಿ ಜಾನುವಾರುಗಳನ್ನು ಬಲಿ ತೆಗೆದುಕೊಳ್ಳುತಿದ್ದ ಹುಲಿಗಳು ಇದೀಗ ಮನುಷ್ಯರ ಮೇಲೆ ದಾಳಿ ಮಾಡುತ್ತಿವೆ. ಜಾನುವಾರುಗಳ ಸಂಖ್ಯೆ ಕ್ಷೀಣಿಸಿದ್ದರಿಂದ ಅವುಗಳು ಸಿಗದಿರುವುದಕ್ಕೆ ಈಗ ಮನುಷ್ಯರ ಮೇಲೆ ಎರಗುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಲಿಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ