NEWSನಮ್ಮಜಿಲ್ಲೆಸಂಸ್ಕೃತಿ

ದೇವನಹಳ್ಳಿ ಶ್ರೀ ವೇಣುಗೋಪಾಲ ಸ್ವಾಮಿ ಲಕ್ಷದೀಪೋತ್ಸವಕ್ಕೆ ಬಿಗಿ ಬಂದೋಬಸ್ತ್‌: ಜಿಲ್ಲಾಧಿಕಾರಿ ಆರ್.ಲತಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ಟೌನ್‌ನಲ್ಲಿರುವ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಲಕ್ಷದೀಪೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಡಿಸೆಂಬರ್ 1 ರಿಂದ ಆರಂಭಗೊಂಡಿದ್ದು ಡಿಸೆಂಬರ್ 8 ರವರೆಗೆ ನಡೆಯಲಿವೆ. ವೇಣುಗೋಪಾಲಸ್ವಾಮಿಯ ದೇವರ ಲಕ್ಷದೀಪೋತ್ಸವ ಡಿಸೆಂಬರ್ 08 ರಂದು ನಡೆಯಲಿದ್ದು ಅಂದಾಜು ಮೂರು ಲಕ್ಷ ಜನರು ಆಗಮಿಸಲಿರುವುದರಿಂದ ಬಿಗಿ ಬಂದೋಬಸ್ತ್‌ಗೆ ಹೆಚ್ಚು ಒತ್ತು ನೀಡಿ ಸೂಕ್ತ ಭದ್ರತೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ “ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಲಕ್ಷದೀಪೋತ್ಸವ ಕುರಿತು ಚರ್ಚಿಸುವ ಸಭೆ”ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಐದು ವರ್ಷಗಳಿಗೊಮ್ಮೆ ಶ್ರೀ ವೇಣುಗೋಪಾಲಸ್ವಾಮಿ ದೇವರ ಲಕ್ಷದೀಪೋತ್ಸವವನ್ನು ನಡೆಸಲಾಗುವುದು. ಈ ಹಿಂದೆ 2016ರಲ್ಲಿ ಲಕ್ಷದೀಪೋತ್ಸವ ನಡೆದಿತ್ತು. ಕೋವಿಡ್‌ ಕಾರಣದಿಂದಾಗಿ ಕಳೆದ ವರ್ಷ ಕಾರ್ಯಕ್ರಮವು ನಡೆಸಲಾಗಿಲ್ಲ ಎಂದು ಹೇಳಿದರು.

ಡಿಸೆಂಬರ್ 08 ಸಂಜೆ ನಡೆಯಲಿರುವ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಸಚಿವರು , ಜನಪ್ರತಿನಿಧಿಗಳು, ಮಠಾಧೀಶರು ಭಾಗವಹಿಸಲಿದ್ದಾರೆ ಹಾಗೂ ದೀಪೋತ್ಸವದಲ್ಲಿ ಮಹಿಳೆಯರು ಹೆಚ್ಚಾಗಿ ಭಾಗವಹಿಸಲಿರುವುದರಿಂದ ಬಿಗಿ ಭದ್ರತೆ ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕು ಎಂದರಲ್ಲದೆ ದೇವಾಲಯದ ಒಳಗೆ, ಹೊರಗೆ, ಮುಖ್ಯರಸ್ತೆಗಳಲ್ಲಿ ತಾತ್ಕಾಲಿಕವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ತಿಳಿಸಿದರು.

ನೆರೆಯ ರಾಜ್ಯ, ಜಿಲ್ಲೆ, ಗ್ರಾಮಗಳಿಂದ ಲಕ್ಷಾಂತರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಿನ್ನೆಲೆ ದರ್ಶನ ವ್ಯವಸ್ಥೆ, ಪ್ರಸಾದ, ಕುಡಿಯುವ ನೀರು, ಶೌಚಾಲಯಗಳು, ಪಾರ್ಕಿಂಗ್ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡುವಂತೆ ಹೇಳಿದರಲ್ಲದೆ ವೇಣುಗೋಪಾಲಸ್ವಾಮಿ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

ಸಂಚಾರ ದಟ್ಟಣೆ ಉಂಟಾಗದಂತೆ ತಡೆಯಲು ಕ್ರಮ ಕೈಗೊಳ್ಳಬೇಕು ಹಾಗೂ ನಾಲ್ಕೈದು ಕಡೆ ಪಾರ್ಕಿಂಗ್‌ಗಾಗಿ ಸ್ಥಳ ಗುರುತಿಸಿ, ವ್ಯವಸ್ಥೆ ಕಲ್ಪಿಸುವಂತೆ ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಸಾರ್ವಜನಿಕರು ಸ್ವ-ಹಿತದೃಷ್ಟಿಯಿಂದ ಸ್ವಚ್ಛತಾ ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಫೈರಿಂಗ್, ಆಂಬುಲೆನ್ಸ್ ಸೇರಿದಂತೆ ಸುರಕ್ಷತಾ ಕ್ರಮಗಳ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬಂಧಿಸಿದವರಿಗೆ ಸೂಚಿಸಿದರಲ್ಲದೆ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ಸಂಖ್ಯೆಯ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಒದಗಿಸಬೇಕು. ವಿದ್ಯುತ್ ಸ್ಥಗಿತಗೊಳ್ಳದಂತೆ ಬೆಸ್ಕಾಂ ಕ್ರಮ ವಹಿಸಬೇಕು. ಜನರೇಟರ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರತಿದಿನ ವಿವಿಧ ಸಾಂಸ್ಕೃತಿಕ, ಜಾನಪದ ಕ್ರೀಡೆ, ಬಾಣ-ಬಿರುಸುಗಳ ಪ್ರದರ್ಶನ ಸೇರಿದಂತೆ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದರಲ್ಲದೆ ಲಕ್ಷದೀಪೋತ್ಸವ ಕಾರ್ಯಕ್ರಮ ನಿಮಿತ್ತ ದೇವನಹಳ್ಳಿ ಪಟ್ಟಣದಲ್ಲಿರುವ ಸರ್ಕಾರಿ ಕಚೇರಿ ಕಟ್ಟಡಗಳನ್ನು ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗುವುದು ಎಂದು ತಿಳಿಸಿದರು.

ಲಕ್ಷದೀಪೋತ್ಸವ ಕಾರ್ಯಕ್ರಮವು ಸುಗಮವಾಗಿ ನಡೆಸಲು ಈಗಾಗಲೇ ಅಧಿಕಾರಿಗಳ ನೇತೃತ್ವದಲ್ಲಿ ಸ್ವಾಗತ ಸಮಿತಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿ, ಸಾರಿಗೆ ಸಮಿತಿ ಸೇರಿದಂತೆ ಹಲವು ಸಮಿತಿಗಳನ್ನು ರಚಿಸಲಾಗಿದ್ದು ಕಾರ್ಯೋನ್ಮುಖವಾಗಿವೆ ಎಂದು ಹೇಳಿದರಲ್ಲದೆ ಯಾವುದೇ ಅಡೆತಡೆ, ನ್ಯೂನ್ಯತೆಗಳು ಉಂಟಾಗದಂತೆ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಲಕ್ಷದೀಪೋತ್ಸವ ಸೇವಾ ಸಮಿತಿ ಸದಸ್ಯರು, ಎಲ್ಲಾ ಇಲಾಖೆ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.

ಜಾನುವಾರುಗಳ ಜಾತ್ರೆ ನಡೆಸಲು ಅನುಮತಿ ನೀಡುವಂತೆ ಮುಖಂಡರೊಬ್ಬರು ಸಭೆಯಲ್ಲಿ ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ಈವರೆಗೂ 2037 ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, 154 ಜಾನುವಾರುಗಳು ಮರಣಹೊಂದಿವೆ. ಇದು ಒಂದು ವೈರಾಣುನಿಂದ ಹರಡುವ ರೋಗವಾಗಿರುವುದರಿಂದ, ಜಿಲ್ಲೆಯಲ್ಲಿ ಹಲವೆಡೆ ಜಾನುವಾರು ಸಂತೆ/ ಜಾತ್ರೆಗಳು ನಡೆಯಲಿದ್ದು, ಇವುಗಳಿಂದ ಜಾನುವಾರುಗಳ ಸಾಗಾಣಿಕೆ/ ಚಲನವಲನದಿಂದ ಹಾಗೂ ಹಲವಾರು ಜಾನುವಾರುಗಳನ್ನು ಒಂದೆಡೆ ಸೇರಿಸುವುದರಿಂದ ರೋಗೋದ್ರೇಕವು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ 2023ರ ಜನವರಿ 30 ರವರೆಗೆ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾಡುವುದನ್ನು ನಿಷೇಧಿಸುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನಾಗರಾಜು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಹೇಮಾವತಿ, ದೇವನಹಳ್ಳಿ ತಹಸೀಲ್ದಾರ್ ಕೆ.ಶಿವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ದೇವಾಲಯದ ಸಮಿತಿ ಸದಸ್ಯರು, ಮಾಜಿ ಶಾಸಕರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ