ಜಕಾರ್ತ: ಮುಸ್ಲಿಮರು ಮಾಡುವ ಬಿಸ್ಮಿಲ್ಲಾ ಪ್ರಾರ್ಥನೆ ಬಳಿಕ ಹಂದಿ ಮಾಂಸ ತಿಂದ ಟಿಕ್ ಟಾಕ್ ಸ್ಟಾರ್ ಲೀನಾ ಮುಖರ್ಜಿ ಅವರಿಗೆ ಇಸ್ಲಾಂ ರಾಷ್ಟ್ರವಾದ ಇಂಡೋನೇಷ್ಯಾ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪ್ರಾರ್ಥನೆ ಮಾಡಿದ ಬಳಿಕ ಹಂದಿ ಮಾಂಸ ತಿಂದ ವಿಡಿಯೋವನ್ನು ಲೀನಾ ಮುಖರ್ಜಿ ಅವರು ಟಿಕ್ಟಾಕ್ನಲ್ಲಿ ಹಂಚಿಕೊಂಡ ಆರು ತಿಂಗಳ ಬಳಿಕ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
ಬಾಲಿಯಲ್ಲಿ 33 ವರ್ಷದ ಲೀನಾ ಮುಖರ್ಜಿ ಅವರು ಕಳೆದ ಮಾರ್ಚ್ನಲ್ಲಿ ಬಿಸ್ಮಿಲ್ಲಾ ಪ್ರಾರ್ಥನೆ ಬಳಿಕ ಹಂದಿ ಮಾಂಸ ತಿಂದ ವಿಡಿಯೋ ವೈರಲ್ ಆಗುತ್ತಲೇ ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ, ಇಸ್ಲಾಂನಲ್ಲಿ ಹಂದಿ ಮಾಂಸವು ನಿಷಿದ್ಧವಾಗಿರುವ ಕಾರಣ ಲೀನಾ ಮುಖರ್ಜಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಧರ್ಮ ನಿಂದನೆಯ ಆರೋಪದಲ್ಲಿ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
ಕೋರ್ಟ್ ಆದೇಶದಲ್ಲಿ ಹೇಳಿದ್ದೇನು?: ಧಾರ್ಮಿಕ ಆಚಾರ-ವಿಚಾರಗಳನ್ನು ನಂಬುವವರು ಹಾಗೂ ಒಂದು ನಿಗದಿತ ಸಮುದಾಯದ ಜನರ ವಿರುದ್ಧ ದ್ವೇಷವನ್ನು ಹರಡಿಸುವ ಉದ್ದೇಶದಿಂದ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಲೀನಾ ಮುಖರ್ಜಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ” ಎಂದು ಪಾಲೆಮ್ಬಾಂಗ್ ನ್ಯಾಯಾಲಯವು ತಿಳಿಸಿದೆ.
ಇಸ್ಲಾಮಿಕ್ ರಾಷ್ಟ್ರವಾಗಿರುವ ಇಂಡೋನೇಷ್ಯಾದಲ್ಲಿ ಧರ್ಮನಿಂದನೆಯ ಕಾನೂನುಗಳು ಬಲಿಷ್ಠವಾಗಿವೆ. ಪ್ರವಾದಿ ಮೊಹಮ್ಮದ್ ಹೆಸರಿನಲ್ಲಿ ಜನರಿಗೆ ಉಚಿತವಾಗಿ ಮದ್ಯ ಹಂಚುತ್ತಿದ್ದ ಆರು ಜನರನ್ನು ಇತ್ತೀಚೆಗಷ್ಟೇ ಬಂಧಿಸಲಾಗಿತ್ತು. ಆದಾಗ್ಯೂ, ಇಂಡೋನೇಷ್ಯಾದಲ್ಲಿ ಅಲ್ಪಸಂಖ್ಯಾತರ ಮೇಲೆ ಧರ್ಮನಿಂದನೆಯ ಕಾನೂನುಗಳನ್ನು ಗುರಾಣಿಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪಗಳೂ ಸಹ ಕೇಳಿಬಂದಿವೆ.
Ada Indonesia guys … 🥲
Lina Mukherjee pic.twitter.com/JNNuUltAZF
— 🌸 Bebeb Bubu 🌸 (@NyaiiBubu) September 21, 2023