NEWSನಮ್ಮಜಿಲ್ಲೆನಮ್ಮರಾಜ್ಯ

KKRTC ಹೊಸಪೇಟೆ ವಿಭಾಗಕ್ಕೆ ತಿಮ್ಮಾರೆಡ್ಡಿ ಹೀರಾ ವಿಭಾಗೀಯ ನಿಯಂತ್ರಣಾಧಿಕಾರಿ: ಸಿಪಿಎಂ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಗರಿಬೊಮ್ಮನಹಳ್ಳಿಯಲ್ಲಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಚಾಲಕರ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿದ್ದ ತಿಮ್ಮಾರೆಡ್ಡಿ ಹೀರಾ ಅವರನ್ನು ಕೂಡಲೇ ಜಾರಿಗೆ ಬರುವಂತೆ ಕೆಕೆಆರ್‌ಟಿಸಿ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ವರ್ಗಾವಣೆ ಮಾಡಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ನಿನ್ನೆ ಅಂದರೆ ಶುಕ್ರವಾರ (ಆ.16) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿಯಲ್ಲಿರುವ ಸಿಬ್ಬಂದಿ ಶಾಖೆಯಿಂದ  ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು  ಈ ಆದೇಶ ಹೊರಡಿಸಿದ್ದಾರೆ.

ನಿಗಮದ ಆಡಳಿತಾತ್ಮಕ ಕಾರಣಗಳ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ವರ್ಗಾಯಿಸಿ ನಿಯೋಜಿಸಲಾಗಿದ್ದು ಕೂಡಲೇ ನಿಯೋಜಿತ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ಸಿಪಿಎಂ ಆದೇಶ ಮಾಡಿದ್ದಾರೆ.

ಇನ್ನು ನಿಗಮದ ಚಾಲಕರ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿದ್ದ ತಿಮ್ಮಾರೆಡ್ಡಿ ಹೀರಾ ಅವರ ವರ್ಗಾವಣೆಯಿಂದ ತೆರವಾಗಿರುವ ಸ್ಥಳಕ್ಕೆ ಲಂಚ ಆರೋಪದಡಿ ಅಮಾನತಾಗಿದ್ದ ಕೆ.ಆರ್. ಬಸವರಾಜು ಅವರ ಅಮಾನತನ್ನು ತೆರವುಗೊಳಿಸಿ ನಿಯೋಜಿಸಲಾಗಿದೆ.

Leave a Reply

error: Content is protected !!
LATEST
KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌