CrimeNEWSನಮ್ಮರಾಜ್ಯ

ಬೈಕ್‌ಗೆ ಡಿಕ್ಕಿ ಹೊಡೆದು ಗರ್ಭಿಣಿ ಮೇಲೆ ಹರಿದ ಟಿಪ್ಪರ್‌: ಹೊಟ್ಟೆಯಿಂದ ಹೊರಬಂದು ಜೀವ ಬಿಟ್ಟ ಮಗು-ತಾಯಿ

ವಿಜಯಪಥ ಸಮಗ್ರ ಸುದ್ದಿ

ನೆಲಮಂಗಲ: ವೇಗವಾಗಿ ಬಂದ ಟಿಪ್ಪರ್ ಗರ್ಭಿಣಿ ಇದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಹಿಂಬದಿ ಕುಳಿತಿದ್ದ ಗರ್ಭಿಣಿ ಮತ್ತು ಅಪಘಾತದಿಂದ ಹೊಟ್ಟೆಯಿಂದ ಹೊರ ಬಂದ ನವಜಾತ ಶಿಶು ಒದ್ದಾಡಿ ಮೃತ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದೆ.

ಇಂದು ಬೆಳಗ್ಗೆ ಈ ಅಪಘಾತ ಸಂಭವಿದ್ದು, ಟಿಪ್ಪರ್ ಬೈಕ್‌ ಡಿಕ್ಕಿ ಹೊಡೆದು ಬಳಿಕ ಗರ್ಭಿಣಿ ಮೇಲೆ ಹರಿದಿದೆ. ಇದರಿಂದ ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರ ಬಂದು ವಿಲ ವಿಲ ಒದ್ದಾಡಿ ಅಸುನೀಗಿದೆ.

ಎಡೇಹಳ್ಳಿಯ ಸಿಂಚನಾ (30) ಮತ್ತು ಹೊಟ್ಟೆಯಲ್ಲಿದ್ದ ನವಜಾತ ಶಿಶು ಮೃತ ದುರ್ದೈವಿಗಳು. ಇನ್ನು ಸಿಂಚನಾ ಪತಿ ಮಂಜುನಾಥ್ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ​ಪಾರಾಗಿದ್ದಾರೆ. ಮೃತ ದೇಹದ ಮುಂದೆ ಪತಿ ಮಂಜುನಾಥ್​​ ಹಾಗೂ ಅತ್ತೆಯ ಆಕ್ರಂದನ ಮುಗಿಲು ಮುಟ್ಟಿದೆ.

ಶಿವಗಂಗೆ ಗಣೇಶನ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ದಾಬಸ್​ಪೇಟೆ ಮುಖಾಂತರ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಎಡೆಹಳ್ಳಿ ಮುಖಾಂತರವಾಗಿ ತೋಟನಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದೇವು. ಈ ವೇಳೆ ವೇಗವಾಗಿ ಬಂದ ಟಿಪ್ಪರ್​ ಲಾರಿ ನಾವಿದ್ದ ಬೈಕಿಗೆ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದಾಗ ಸಿಂಚನಾ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೊಟ್ಟೆಯಿಂದ ಮಗು ಆಚೆ ಬಂದಿದೆ ಈ ದೃಶ್ಯ ನೋಡಲು ನನ್ನಿಂದಾಗುತ್ತಿಲ್ಲ ಎಂದು ಸಿಂಚನಾ ಪತಿ ಮಂಜುನಾಥ ಗೋಳಾಡುತ್ತಿದ್ದರು.

ಇನ್ನು ಅಪಘಾತದ ಬಳಿಕ ಸ್ಥಳದಲ್ಲೇ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

ಸಿಂಚನಾಗೆ ಬರುವ ಇದೇ ಆಗಸ್ಟ್​ 17ಕ್ಕೆ 8 ತಿಂಗಳು ತುಂಬಿ 9 ತಿಂಗಳಿಗೆ ಬೀಳುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್‌ನಲ್ಲಿ​​ ದಾಬಸ್​ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮರಳಿ ತಮ್ಮೂರು ತೋಟನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು.

ಈ ವೇಳೆ ವೇಗವಾಗಿ ಬಂದ ಟಿಪ್ಪರ್​ ಡಿಕ್ಕಿ ಹೊಡೆದಿದೆ. ಡಿಕ್ಕೆ ಹೊಡೆದ ರಭಸಕ್ಕೆ ಸಿಂಚನಾ ಬೈಕ್​ನಿಂದ ಕೆಳೆಗೆ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ​ಸಿಂಚನಾ ಮೇಲೆ ಹರಿದಿದೆ, ಪರಿಣಾಮ ಹೊಟ್ಟೆಯಲ್ಲಿದ್ದ 8 ತಿಂಗಳು ಮಗು ಹೊರಗೆ ಬಂದಿದೆ. ನಡು ರಸ್ತೆಯಲ್ಲೇ ಮಗು ಹಾಗೂ ತಾಯಿ ವಿಲ ವಿಲ ಒದ್ದಾಡಿ ಮೃತಪಟ್ಟಿದ್ದಾರೆ. ಈ ಮನಕಲಕುವ ಘಟನೆ ನೋಡಿದ ಸ್ಥಳೀಯರು ಕೂಡ ಕಣ್ಣೀರು ಹಾಕಿದ್ದಾರೆ.

ಇನ್ನು ಕಳೆದ ಆರು ತಿಂಗಳಲ್ಲಿ ನೆಲಮಂಗಲ ಸಾಂಚಾರಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ 90ಕ್ಕೂ ಹೆಚ್ಚು ಅಪಘಾತ ಸಂಭವಿಸಿದ್ದು, 125ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ಅಪಘಾತಗಳನ್ನು ತಪ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ