CrimeNEWSನಮ್ಮಜಿಲ್ಲೆ

ಬೈಕ್‌ಗೆ ಟಿಪ್ಪರ್ ಡಿಕ್ಕಿ: ಬಿಕಾಂ ವಿದ್ಯಾರ್ಥಿ ಸಾವು, ಮತ್ತೊಬ್ಬರ ಸ್ಥಿತಿ ಚಿಂತಾಜನಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಪದವಿ ವಿದ್ಯಾರ್ಥಿಗಳಿಬ್ಬರು ಹೋಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ವಾಪಸಂದ್ರ ಸೇತುವೆ ಕೆಳಗಡೆ ಸಂಭವಿಸಿದೆ.

ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ಚೈತ್ರ ಮೃತಪಟ್ಟಿದ್ದು, ಸ್ನೇಹಿತ ಲಿಖಿತ್ ಗೌಡ ತೀವ್ರಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಶ್ರೀನಿವಾಸ ಸಾಗರ ಜಲಾಶಯ ನೋಡಲು ಆಗಮಿಸಿದ್ದ ಈ ಬಿಕಾಂ ವಿದ್ಯಾರ್ಥಿಗಳು ಜಲಾಶಯ ವೀಕ್ಷಣೆ ಮಾಡಿ ಬೆಂಗಳೂರಿನತ್ತ ವಾಪಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಸ್ಕೂಟಿಯಲ್ಲಿ ಲಿಖಿತ್ ಗೌಡ ಹಾಗೂ ಚೈತ್ರ ತೆರಳುತ್ತಿದ್ದರು. ಈ ವೇಳೆ ಇವರು ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿದ್ದಾರೆ. ಆದರೆ, ಅದೇ ವೇಳೆ ಇನ್ನೊಂದು ಬದಿಯಿಂದ ಬರುತ್ತಿದ್ದ ವಾಹನವನ್ನು ಗಮನಿಸಿಲ್ಲ ಎನ್ನಲಾಗಿದೆ.

ಇತ್ತ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿಯಾಗಿದ್ದು, ಚೈತ್ರ ಮೈ ಮೇಲೆ ಹರಿದಿದೆ ಎನ್ನಲಾಗಿದೆ. ಚೈತ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಲಿಖಿತ್ ತೀವ್ರವಾಗಿ ಗಾಯಗೊಂಡಿದ್ದಾರೆ.

ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC