Breaking NewsNEWS

ತಿ.ನರಸೀಪುರ – ಸೆರೆ ಸಿಕ್ಕ ಚಿರತೆ ಕೊಲ್ಲುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ: ಸಚಿವ ಎಸ್‌ಟಿಎಸ್‌

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ನರಭಕ್ಷಕ ಚಿರತೆ ಸೆರೆಗಾಗಿ ಕಾರ್ಯಾಚರಣೆ ತೀವ್ರಗೊಂಡ ಬೆನ್ನಲ್ಲೇ ಇಂದು ಮುಂಜಾನೆ ಚಿರತೆ ಸೆರೆಯಾಗಿದೆ. ಈಗ ಆ ಚಿರತೆಯನ್ನು ಸಾಯಿಸಿಬಿಡಿ ಎಂದು ಅಲ್ಲಿನ ಜನರು ಹೇಳುತ್ತಿದ್ದಾರೆ. ಹೀಗಾಗಿ ಆ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮೈಸೂರಿನಲ್ಲಿ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್ ಹೇಳಿದ್ದಾರೆ.

ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದ 11 ವರ್ಷದ ಬಾಲಕನನ್ನು ಸ್ಥಳದಲ್ಲೇ ಕೊಂದು ಹಾಕಿದ್ದ, ನರಹಂತಕ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಇಂದು ಬೆಳಗ್ಗಿನ ಜಾವ ಬಿದ್ದಿದ್ದು, ಈ ಚಿರತೆಯಿಂದ ಡಿಎನ್ಎ ಪರೀಕ್ಷೆಗಾಗಿ ಸ್ಯಾಂಪಲ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.

ಈ ನರಹಂತಕ ಚಿರತೆಯನ್ನು ಕಾಡಿಗೆ ಬಿಡದೇ ಮೈಸೂರಿನ ಪ್ರಾಣಿ ಪುನರ್ವಸತಿ ಕೇಂದ್ರ ಅಥವಾ ಬನ್ನೇರುಘಟ್ಟಕ್ಕೆ ಬಿಡಲಾಗುವುದು ಎಂದು ಮೈಸೂರು ವಲಯದಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯ ಮಾಹಿತಿ ನೀಡಿದ್ದಾರೆ.

ಕಳೆದ ಶನಿವಾರ ಅಂಗಡಿಗೆ ಬಿಸ್ಕತ್‌ ತರಲು ಹೋಗಿದ್ದ ಹೊರಳಹಳ್ಳಿ ಗ್ರಾಮದ ಜಯಂತ್ ಎಂಬ ಬಾಲಕನನ್ನು ಚಿರತೆ ಎಳೆದುಕೊಂಡು ಒಂದು ಕಿಲೋ ಮೀಟರ್‌ ದೂರ ಹೋಗಿ, ದೇಹದ ಅರ್ಧ ಭಾಗ ತಿಂದು ಪರಾರಿಯಾಗಿತ್ತು.

ಬಾಲಕನ ಅರ್ಧ ದೇಹ ಇದ್ದ ಸ್ಥಳದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಕ್ಯಾಮೆರಾದಲ್ಲಿ ನಿನ್ನೆ ಸಂಜೆ ಚಿರತೆ ಸೆರೆಯಾಗಿದ್ದು, ಅದೇ ಸ್ಥ ಳದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ನರಹಂತಕ ಚಿರತೆ ಬಿದ್ದಿದೆ.

ಚಿರತೆ  ಕೊಲ್ಲಲು ಗ್ರಾಮಸ್ಥರ ಪಟ್ಟು: ಬೆಳಗ್ಗಿನ ಜಾವ ಹೊರಳಹಳ್ಳಿ ಗ್ರಾಮದ ಹೊರವಲಯದಲ್ಲಿ ಬೋನಿಗೆ ಬಿದ್ದ ವಿಚಾರ ತಿಳಿದು ಅರಣ್ಯ ಇಲಾಖೆ ಸ್ಥಳಕ್ಕೆ ಹೋಗುವ ಹೊತ್ತಿಗೆ ಗ್ರಾಮಸ್ಥರು ಸೇರಿದ್ದರು. ಬೋನಿಗೆ ಬಿದ್ದ ಚಿರತೆಯನ್ನು ಸ್ಥಳದಲ್ಲೇ ಗುಂಡಿಕ್ಕಿ ಕೊಲ್ಲುವಂತೆ ಜನರು ಗಲಾಟೆ ಮಾಡುತ್ತಿದ್ದು, ಗ್ರಾಮಸ್ಥರನ್ನು ಅರಣ್ಯ ಇಲಾಖೆಯವರು ಸಮಾಧಾನ ಪಡಿಸಲು ಸಾಧ್ಯವಾಗದ ಕಾರಣ, ಸ್ಥಳಕ್ಕೆ ಪೊಲೀಸರು ಆಗಮಿಸಿದ ಮೇಲೆ ಚಿರತೆಯನ್ನು ಸ್ಥಳಾಂತರಿಸಲು ಸಿದ್ಧತೆ ಮಾಡಿ ಕೊಂಡಿದ್ದಾರೆ.

ಚಿರತೆಗೆ ಡಿಎನ್ಎ ಪರೀಕ್ಷೆ : ಬೋನಿಗೆ ಬಿದ್ದ ಐದು ವರ್ಷದ ಗಂಡು ಚಿರತೆಯ ಕೂದಲು, ರಕ್ತದ ಮಾದರಿ, ಪಾಲಿಕಲ್ಸ್ ಮಾದರಿಗಳನ್ನು ಪಡೆಯಲಾಗಿದೆ. ಇದನ್ನು ಪ್ರಯೋಗಾಲಾಯಕ್ಕೆ ಕಳುಹಿಸಲಾಗಿದೆ. ಜತೆಗೆ ಚಿರತೆ ದಾಳಿಯಿಂದ ಮೃತಪಟ್ಟ ಬಾಲಕನ ಮೃತದೇಹದ ಮೇಲೆ ಸಿಕ್ಕ ಕೂದಲುಗಳು ಹಾಗೂ ಮೃತ ಬಾಲಕನ ಮರಣೊತ್ತರ ಪರೀಕ್ಷೆಯನ್ನು ಚಿರತೆಯ ಡಿಎನ್ಎ ಪರೀಕ್ಷೆ ಜತೆಗೆ ಹೋಲಿಕೆ ಮಾಡಲಾಗುವುದು ಎಂದು ಅರಣ್ಯಾಧಿಕಾರಿ ಮಾಲತಿ ಪ್ರಿಯ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ