ತಿ.ನರಸೀಪುರ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.
ಪಟ್ಟಣದ ತಾಲೂಕು ಕುರುಬರ ಸಂಘದ ಕಚೇರಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಭವನ ಪ್ರಸ್ತುತ ಬಿಜೆಪಿ ಭವನವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರದ ಅಣತಿಯಂತೆ ಕಾರ್ಯ ನಿರ್ವಹಿಸುತ್ತಿದೆ. ಒಬ್ಬ ಪ್ರಾಮಾಣಿಕ ಅಹಿಂದ ನಾಯಕನ ರಾಜಕೀಯವನ್ನು ಕೊನೆಗಾಣಿಸಲು ಹಿನ್ನಿಲ್ಲದ ಹುನ್ನಾರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಡಾ ನಿವೇಶನ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯ ಪಾಲರು ಅದೇ ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ, ಶಶಿಕಲಾಜೊಲ್ಲೆ ಇವರಿಗೇಕೆ ವರ್ಷ ಕಳಿಯುತಿದ್ದರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕನ್ನಡ ಪುಟ್ಟಸ್ವಾಮಿ, ಮುಖಂಡರಾದ ಮೂಗೂರು ನಕುಲ, ಪುರಸಭಾ ಸದಸ್ಯ ಮಂಜು ಬಾದಾಮಿ, ಸಹದೇವ, ಕಾರ್ಮಿಕ ವಿಭಾಗದ ಟೌನ್ ಉಪಾಧ್ಯಕ್ಷ, ವಿಪಿ ಹುಂಡಿ ಬಸವರಾಜು, ಅಕ್ಕುರ್ ರಾಜೇಗೌಡ ಸೇರಿದಂತೆ ಮತ್ತಿತರರು ಇದ್ದರು.