NEWSನಮ್ಮಜಿಲ್ಲೆ

ತಿ.ನರಸೀಪುರ: ಬಸವನಹಳ್ಳಿ ಹಿರಿಯ ವಕೀಲ ಬಿ.ಎಂ. ಪ್ರಕಾಶ್ ನಿಧನ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ಬನ್ನೂರು ಹೋಬಳಿ ಬಸವನಹಳ್ಳಿ ಗ್ರಾಮದ ಹಾಲಿ ಮೈಸೂರು ನಿವಾಸಿ ಹಿರಿಯ ವಕೀಲ ಬಿ.ಎಂ.ಪ್ರಕಾಶ್ (60) ಅವರು ಹೃದಯಾಘಾತದಿಂದ ನಿನ್ನೆ ಸಂಜೆ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಬಸವನಹಳ್ಳಿ ಗ್ರಾಮದ ಲೇಟ್‌ ಮೇಷ್ಟ್ರು ಮಾಯಪ್ಪ ಅವರ ಪುತ್ರರಾದ ಮೃತರು ಪತ್ನಿ ಕಮಲಮ್ಮ, ಓರ್ವ ಪುತ್ರ ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.

ಹಾಲಿ ಮೈಸೂರಿನ ಸಿದ್ಧಾರ್ಥ ಬಡಾವಣೆಯಲ್ಲಿ ವಾಸವಾಗಿದ್ದ ಮೃತರು, ಸಿದ್ಧಾರ್ಥ ಸ್ಫೋರ್ಟ್‌ ಕ್ಲಬ್‌ ಸದಸ್ಯರಾಗಿದ್ದರು. ಈ ಹಿಂದೆ ತಿ.ನರಸೀಪುರ ನ್ಯಾಯಾಲಯದಲ್ಲಿ ಪ್ರಾಕ್ಟಿಸ್‌ ಮಾಡುತ್ತಿದ್ದರು. ಆದರೆ ಪ್ರಸ್ತುತ ಮೈಸೂರಿನ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯವಾದಿಯಾಗಿದ್ದರು.

ವಕೀಲ ಬಿ.ಎಂ.ಪ್ರಕಾಶ್ ಅವರಿಗೆ ತಿ.ನರಸೀಪುರ ವಕೀಲರ ಸಂಘವು ಶನಿವಾರ ಕಲಾಪದಿಂದ ಹೊರಗುಳಿದು ಶ್ರದ್ಧಾಂಜಲಿ ಸಲ್ಲಿಸಿತು.

ಮೃತರ ಅಂತ್ಯಕ್ರಿಯೆ ಬಸವನಹಳ್ಳಿಯ ಮೃತರ ಸ್ವಂತ ಜಮೀನಿನಲ್ಲಿ ಇಂದು ಮಧ್ಯಾಹ್ನ ನೆರವೇರಿತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...