NEWSಕೃಷಿನಮ್ಮಜಿಲ್ಲೆ

ತಿ.ನರಸೀಪುರ: ನೀರಿಗಾಗಿ ನೀರಾವರಿ ನಿಗಮದ ಕಚೇರಿ ಮುಂದೆ ರೈತರ ಪ್ರತಿಭಟನೆ ಆಕ್ರೋಶ

ಉಸ್ತುವಾರಿ ಸಚಿವ ಡಾ:ಎಚ್‌ಸಿಎಂ ನಡೆಗೆ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಬರಗಾಲದ ಸಂಕಷ್ಟದಲ್ಲಿರುವ ರೈತರಿಗೆ ಕುಡಿಯುವ ನೀರಿಗಾಗಿ ತಕ್ಷಣವೇ ಕಾಲುವೆಗಳಲ್ಲಿ ನೀರು ಹರಿಸಿ, ನದಿ ಮೂಲಕ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಇಂದು ಪಟ್ಟಣದ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರ ಕಚೇರಿ ಮುಂದೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಧರಣಿ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಅತ್ತಹಳ್ಳಿ ದೇವರಾಜ್, ಕಬಿನಿ – ಕಾವೇರಿ ಜಲಾಶಯದಿಂದ ತಮಿಳು ನಾಡಿಗೆ ನೀರು ಹರಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಹರಿಸಿ ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಹಾಲಿ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ಜನತೆ ಹಾಗೂ ರೈತರನ್ನು ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸುತ್ತಿದೆ. ಅಧಿಕಾರ ಕೊಟ್ಟ ರಾಜ್ಯದ ಜನತೆಗೆ ಹಾಗೂ ರೈತರಿಗೆ ದ್ರೋಹ ಬಗೆದು ತಮ್ಮ ಅಧಿಕಾರದ ಆಸೆಗೆ ಅಧಿಕಾರ ಕೊಟ್ಟ ರಾಜ್ಯದ ರೈತರಿಗೆ ಹಾಗೂ ಜನತೆಗೆ ಮರಣ ಶಾಸನ ಬರೆಯುತ್ತಿದೆ ಎಂದು ಕಿಡಿಕಾರಿದರು.

ನೀರಾವರಿ ನಿಗಮದ ಅಧಿಕಾರಿಗಳು ತಮಿಳುನಾಡಿನ ಗುಲಾಮರಂತೆ ವರ್ತಿಸುವುದನ್ನು ನಿಲ್ಲಿಸಿ ಅಚ್ಚುಕಟ್ಟು ಭಾಗದ ಜನ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಹಾಲಿ ಬೆಳೆದು ನಿಂತಿರುವ ಬೆಳೆಗಳಿಗೆ ನಾಲೆಗಳ ಮೂಲಕ ನೀರು ಹರಿಸಿ ಕೆರೆಗಳನ್ನು ತುಂಬಿಸಲು ಮುಂದಾಗದೆ, ತಮಿಳುನಾಡಿನ ಹಿತ ಕಾಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ತಕ್ಷಣವೇ ತಮಿಳುನಾಡಿಗೆ ಕಾವೇರಿ – ಕಬಿನಿ ಜಲಾಶಯದಿಂದ ಬಿಟ್ಟಿರುವ ನೀರು ನಿಲಿಸಬೇಕು, ಇಲ್ಲವೇ ಕಚೇರಿ ಬಿಟ್ಟು ತೊಲಗಬೇಕು. ಇದು ರೈತರ ಎಚ್ಚರಿಕೆ. ತಮಿಳುನಾಡಿನ ಗುಲಾಮರಂತೆ ವರ್ತಿಸಿ ಜೀತ ಪದ್ಧತಿ ಮುಂದುವರಿಸಿದರೆ ತಮಿಳುನಾಡಿಗೆ ತೊಲಗಿ ಎಂದು ಎಚ್ಚರಿಕೆ ನೀಡಿ ಒತ್ತಾಯ ಸಲ್ಲಿಸಿದರು.

ಉಸ್ತುವಾರಿ ಸಚಿವ ಡಾ:ಎಚ್‌ಸಿಎಂ ನಡೆಗೆ ಖಂಡನೆ: ಇಂದು ನರಸೀಪುರದ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರ ಕಚೇರಿ ಮುಂದೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅದೇ ಮಾರ್ಗವಾಗಿ ಬಂದರು ರೈತರನ್ನು ನೋಡಿಯೂ ನೋಡದಂತೆ ಹೋಗಿದ್ದಾರೆ.

ಸೌಜನ್ಯಕ್ಕಾದರು ಇವರು ಕಾರು ಇಳಿದು ಬಂದು ರೈತರ ಸಮಸ್ಯೆ ಏನು ಎಂದು ಕೇಳಬೇಕಿತ್ತು. ಆದರೇ ಇರಿವರಿಗೆ ಕೇಳುವ ತಾಳ್ಮೆ ಸಹನೆ ಇಲ್ಲ ಎಂದರೆ ಇವರು ಜನ ಪ್ರತಿನಿಧಿಯ ಅಥವಾ ಸರ್ವಾಧಿಕಾರಿಯಾ? ಇವರಿಗೆ ರೈತರ ಬಗ್ಗೆ ಎಳ್ಳಷ್ಟೂ ಕಾಳಜಿಯಿಲ್ಲ ಎಂಬುದು ಇದರಿಂದ ಎದ್ದು ಕಾಣುತ್ತದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ಸಚಿವರ ವರ್ತನೆಯನ್ನು ಖಂಡಿಸಿದ್ದಾರೆ.

ರೈತರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ತಾಲೂಕು ಉಪಾಧ್ಯಕ್ಷರಾದ ಹೆಗ್ಗೂರು ರಂಗರಾಜ್, ಆದಿಬೆಟ್ಟಹಳ್ಳಿ ನಂಜುಂಡಸ್ವಾಮಿ, ತಾಲೂಕು ಪ್ರದಾನ ಕಾರ್ಯದರ್ಶಿ ಕಿರಗಸೂರು ಪ್ರಸಾದ್ ನಾಯಕ್, ತಾಲೂಕು ಸಂಘಟನಾ ಕಾರ್ಯದರ್ಶಿ ಕುರುಬೂರು ಪ್ರದೀಪ್, ಮುಖಂಡರಾದ ಗೌರಿ ಶಂಕರ್, ಕುರುಬೂರು ಗುರುಸ್ವಾಮಿ, ಬನ್ನೂರು ಸೂರಿ, ಶೇಖರ್, ತರಕಾರಿ ನಿಂಗರಾಜು ಮತ್ತಿತರರು ಇದ್ದರು.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ