NEWSಕೃಷಿನಮ್ಮರಾಜ್ಯ

ಸಾಮಾನ್ಯ ಬೆಳೆಗಳಿಗೆ 50 ಸಾವಿರ ರೂ. ತೋಟಗಾರಿಕೆ ಬೆಳೆಗಳಿಗೆ 1 ಲಕ್ಷ ರೂ. ಪರಿಹಾರ ಮೊತ್ತ ಹೆಚ್ಚಿಸಲು ಕೃಷಿ ಬೆಲೆ ಆಯೋಗ ಶಿಫಾರಸು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೈಸರ್ಗಿಕ ವಿಕೋಪದಡಿ ನಾಶವಾಗುವ ಸಾಮಾನ್ಯ ಬೆಳೆಗಳಿಗೆ 50 ಸಾವಿರ ರೂ. ತೋಟಗಾರಿಕೆ ಬೆಳೆಗಳಿಗೆ 1 ಲಕ್ಷ ರೂಪಾಯಿ ಪರಿಹಾರ ಮೊತ್ತ ಹೆಚ್ಚಿಸಲು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮಗೌಡ ಬೆಳಗುರ್ಕಿ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ 2019-20 ಹಾಗೂ 2020-21 ನೇ ಸಾಲಿನ ಕೃಷಿ ಮತ್ತು ತೋಟಗಾರಿಕಾ ಬೆಲೆಗಳ ಕುರಿತು ಆಯೋಗದ ಶಿಫಾರಸುಗಳನ್ನು ಸಲ್ಲಿಸಿದರು. ಈ ವೇಳೆ ಕೃಷಿ ಸಚಿವ ಬಿ.ಸಿ.ಪಾಟೀಲ, ತೋಟಗಾರಿಕೆ ಸಚಿವ ನಾರಾಯಣಗೌಡ ಇದ್ದರು.

ಪ್ರಸ್ತುತ ಎನ್‌ಡಿಆರ್‌ಎಫ್‌ ಮಾರ್ಗ ಸೂಚಿಯಡಿ ಪ್ರತಿ ಹೆಕ್ಟೇರ್‌ಗೆ 6,800 ರಿಂದ 18 ಸಾವಿರ ರೂ. ರವರೆಗೆ ನೀಡಲಾಗುತ್ತಿದೆ. ಈಗ ನೀಡುತ್ತಿರುವ ಬೆಳೆ ಪರಿಹಾರ ಅತ್ಯಲ್ಪವಾಗಿದೆ. ಹೀಗಾಗಿ ಕೃಷಿ ಮತ್ತು ವಾಣಿಜ್ಯ ಬೆಳೆಗಳಿಗೆ ಪ್ರತಿ ಹೆಕ್ಟೇರ್‌ಗೆ 50 ಸಾವಿರ ಮತ್ತು ಬಹು ವಾರ್ಷಿಕ ತೋಟಗಾರಿಕಾ ಬೆಳೆಗಳು ಹಾಗೂ ಹೆಚ್ಚಿನ ಮೌಲ್ಯದ ಬೆಳೆಗಳಿಗೆ 1 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಶಿಫಾರಸು ಮಾಡಲಾಗಿದೆ.

ಎಪಿಎಂಸಿ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತಂದು ಮಾರುಕಟ್ಟೆ ಸಮಿತಿ ಹೊರಗೆ ಮಾರಾಟಕ್ಕೆ ಅವಕಾಶ ನೀಡಿರುವುದರಿಂದ ರೈತನ ಹಿತ ಕಾಪಾಡಲು ಕೇಂದ್ರ ಸರ್ಕಾರದ ಘೋಷಿತ ಬೆಂಬಲ ಬೆಲೆಯನ್ನೇ ಉಲ್ಲೇಖ ಬೆಲೆಗಳಾಗಿ (ರೆಫರೆನ್ಸ್‌ ಪ್ರೈಸ್‌) ಪರಿಗಣಿಸಬೇಕು ಎಂದೂ ಆಯೋಗ ತಿಳಿಸಿದೆ.

ಈ ಹೊಸ ಕಾಯ್ದೆಯಿಂದ ಕೃಷಿಕರಿಗೆ ಮುಕ್ತವಾಗಿ ವ್ಯಾಪಾರ ವಹಿವಾಟು ಮಾಡಲು ನಿಖರ ಮಾಹಿತಿ ಮತ್ತು ದತ್ತಾಂಶಗಳ ಕೊರತೆ ಆಗುವ ಸಾಧ್ಯತೆ ಇದೆ. ಇದರಿಂದಾಗಿ ಉಲ್ಲೇಖ ಬೆಲೆಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದರಿಂದ ಗೊಂದಲವೂ ಆಗಬಹುದು. ಆದ್ದರಿಂದ ಕೇಂದ್ರ ಸರ್ಕಾರದ ಘೋಷಿತ ಬೆಂಬಲ ಬೆಲೆಯನ್ನೇ ಉಲ್ಲೇಖ ಬೆಲೆಯಾಗಿ ಪರಿಗಣಿಸುವುದು ಸೂಕ್ತ. ಈ ಅಂಶವನ್ನು ಕಾಯ್ದೆಯಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಸೂಕ್ತ ಶಿಫಾರಸು ಮಾಡಬೇಕು ಎಂದು ಆಯೋಗ ಮನವಿ ಮಾಡಿದೆ.

ಪ್ರಮುಖ ಶಿಫಾರಸುಗಳು

  • ನೀರಿನ ನಿರ್ವಹಣೆಗಾಗಿ ‘ಹೊಲಕ್ಕೊಂದು ಕೆರೆ’ ಯೋಜನೆ ಜಾರಿಗೊಳಿಸಬೇಕು
  • ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಅಡಿ ಖರೀದಿಸಲು ಸಂಚಾರಿ ಖರೀದಿ ವ್ಯವಸ್ಥೆಗೊಳಿಸಿದಲ್ಲಿ ರೈತರು ಮತ್ತು ಸರ್ಕಾರಕ್ಕೂ ಅನುಕೂಲವಾಗುತ್ತದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಲು ಆವರ್ತನಿಧಿಗೆ ಕನಿಷ್ಠ 5 ಸಾವಿರ ಕೋಟಿ ಒದಗಿಸಬೇಕು
  •  ಎನ್‌ಡಿಡಿಬಿ, ಕೆಎಂಎಫ್‌ ಮಾದರಿಯಲ್ಲಿ ತರಕಾರಿ ಮತ್ತು ಹಣ್ಣುಗಳ ಸದೃಢ ಮಾರುಕಟ್ಟೆಗಾಗಿ ಕರ್ನಾಟಕ ತೋಟಗಾರಿಕಾ ಮಾರಾಟ ಮಹಾ ಮಂಡಳ ಸ್ಥಾಪಿಸಬೇಕು.

ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ’ಗೆ ಶಿಫಾರಸು

ರೈತರು ಬೆಳೆದ ಫಸಲಿಗೆ ಸಿಗುವ ಬೆಂಬಲ ಬೆಲೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಮತ್ತು ಪಡಿತರ ವ್ಯವಸ್ಥೆ ಸದೃಢಗೊಳಿಸಲು ‘ಮುಖ್ಯಮಂತ್ರಿ ಅನ್ನಪೂರ್ಣ’ ಯೋಜನೆಯನ್ನು ಜಾರಿ ಮಾಡಬೇಕು ಎಂದು ಆಯೋಗ ಶಿಫಾರಸು ಮಾಡಿದೆ.

ಜತೆಗೆ ಅದನ್ನು ಕಾರ್ಯಗತಗೊಳಿಸುವುದರಿಂದ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಗೆ ಸುಮಾರು 12 ಸಾವಿರ ಕೋಟಿ ರೂ. ದೊರಕಿದಂತಾಗುತ್ತದೆ. ಇನ್ನು ರಾಜ್ಯದಲ್ಲಿ ಪಡಿತರ ವ್ಯವಸ್ಥೆಯೂ ಸ್ವಾವಲಂಬನೆ ಹೊಂದುತ್ತದೆ ಎಂದು ಆಯೋಗ ಹೇಳಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...