NEWSಕೃಷಿನಮ್ಮರಾಜ್ಯ

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯದ ಜನತೆಗೆ ವರುಣ ಕೃಪೆ ತೋರಿದ್ದು, ಕಳೆದ ಒಂದುವಾರದಿಂದಲೂ ರಾಜ್ಯದ ಹಲವೆಡೆ ಮಳೆಯಾಗುತ್ತಲೇ ಇದೆ. ಇದರಿಂದ ರಾಜ್ಯದ ಜನ ಸ್ವಲ್ಪಮಟ್ಟಿಗೆ ಸೂರ್ಯನ ಶಾಖದಿಂದ ಹೊರಬಂದಿದ್ದಾರೆ.

ಇನ್ನು ಹವಾಮಾನ ಇಲಾಖೆ ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಅಲ್ಲದೆ ಹವಾಮಾನ ತಜ್ಞರು ಮಾಹಿತಿ ನೀಡಿದ್ದು, ಮುಂದಿನ ಐದು ದಿನಗಳ ಕಾಲ ಸಿಲಿಕಾನ್​ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಗುಡುಗು, ಮಿಂಚು ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಇಂದು ಮಂಗಳವಾರ ಕೂಡ ಉತ್ತರ ಒಳನಾಡು ಹಾಗೂ ಕರಾವಳಿ ಕಡೆಗಳಲ್ಲಿ ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ಸೋಮವಾರ ಮಂಡ್ಯದಲ್ಲಿ 9 ಸೆಂ.ಮೀ, ಬೆಳಗಾವಿಯಲ್ಲಿ 6 ಸೆಂ.ಮೀ​, ಮೈಸೂರಿನಲ್ಲಿ 5 ಸೆಂ.ಮೀ​ ಮಳೆಯಾಗಿತ್ತು.

ಮೇ 14ರಿಂದ 18ರವರೆಗೂ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಸಾಧರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಂಭವ ಹೆಚ್ಚಿದ್ದು, ಜನರು ಜಾಗರೂಕರಾಗಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಗೆ ನೀಡಿದೆ.

ಇನ್ನು ಚಿಕ್ಕಮಗಳೂರಲ್ಲಿ ಕಳೆದ ಒಂದು ಗಂಟೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತ ಜೋರು ಮಳೆಯಾಗುತ್ತಿದೆ. ‌ಮಳೆಯಿಂದ ಪ್ರವಾಸಿಗರು ಹಾಗೂ ಜನಜೀವನ ಅಸ್ತವ್ಯಸ್ತಗೊಂಡಿದೆ.

ಇನ್ನು ಪೂರ್ವ ಮುಂಗಾರು ಮಳೆ ಚುರುಕಾಗಿರುವುದರಿಂದ ರೈತರು ಹಾಗೂ ಕೃಷಿಕರಲ್ಲಿ ಸಂತಸ ಮನೆ ಮಾಡಿದೆ. ಸತತ ಮಳೆಯಾದರೇ ತುಂಗಾ ನದಿ ಹರಿವು ಕೊಂಚ ಏರಿಕೆಯಾಗೋ ಸಾಧ್ಯತೆ ಇದೆ. ಇತ್ತ ಉಡುಪಿಯಲ್ಲೂ ಗುಡುಗು‌ ಸಹಿತ ಧಾರಾಕಾರ ಮಳೆಯಾಗುತ್ತಿದೆ.

ಅದರಲ್ಲೂ ಸಿಲಿಕಾನ್​ ಸಿಟಿಯಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂಬ ಮಾಹಿತಿ ಇದ್ದು, ಹೀಗಾಗಿ ಸಿಲಿಕಾನ್​ ಸಿಟಿ ಮಂದಿ ಮನೆಯಿಂದ ಹೊರಬರುವ ಮುನ್ನ ಕೊಡೆ, ರೈನ್ ಕೋಟ್ ಅನ್ನು ಬ್ಯಾಗ್​ನಲ್ಲಿ ಇಟ್ಟುಕೊಂಡರೆ ನಿಮ್ಮನ್ನು ನೀವು ರಕ್ಷಣೆ ಮಾಡಿಕೊಳ್ಳಬಹುದು. ಜತೆಗೆ ಸಂಜೆಯಾಗುತ್ತಿದ್ದಂತೆ ಸಿಟಿಗೆ ಎಂಟ್ರಿ ಕೊಡುವ ವರುಣನ ಜತೆ ಜತೆಗೆ ನಿಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳುವುದಕ್ಕೆ ಅನುಕೂಲವಾಗಲಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು