ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬಕ್ಕೆ ಬೆಳಗ್ಗೆ ಜೆಸಿಬಿ ಡಿಕ್ಕಿಯಾಗಿ ದಡಿಲಗೊಂಡಿತ್ತು. ಆ ವಿದ್ಯುತ್ ಕಂಬ ಸಂಜೆ ವೇಳೆ ಬಿದ್ದ ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿ ಬಳಿಯ ಸದ್ದುಗುಂಟೆಪಾಳ್ಯದಲ್ಲಿ ನಡೆದಿದೆ.
ಸದ್ದುಗುಂಟೆಪಾಳ್ಯ ನಿವಾಸಿಗಳಾದ ಸುಮತಿ(35) ಮತ್ತು ಸೋನಿ ಕುಮಾರಿ (36) ಮೃತ ಮಹಿಳೆಯರು.
ಸೋಮವಾರ ಸಂಜೆ 4ಗಂಟೆ ಸುಮಾರಿಗೆ ಸದ್ದುಗುಂಟೆಪಾಳ್ಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರನ್ನು ಬಲಿಪಡೆದಿದೆ. ಈ ದುರಂತಕ್ಕೆ ಬೆಳಗ್ಗೆ ಜೆಸಿಬಿ ಡ್ರೈವರ್ ಮಾಡಿದ ಎಡವಟ್ಟೆ ಕಾರಣ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಜೆಸಿಬಿಯನ್ನು ಜಪ್ತಿ ಮಾಡಿ, ಜೆಸಿಬಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related

Deva