NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಎಂಡಿ ಅನ್ಬುಕುಮಾರ್‌ ಸೇರಿದಂತೆ 11 ಐಎಎಸ್‌ ಅಧಿಕಾರಿಗಳ ವರ್ಗಾವಣೆ 

KSRTC MD ಅನ್ಬುಕುಮಾರ್‌
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಸೇರಿದಂತೆ ಬರೋಬರಿ 11 ಐಎಎಸ್‌ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಿದೆ.

ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಆಡಳಿತ ಯಂತ್ರಕ್ಕೂ ಮೇಜರ್ ಸರ್ಜರಿ ಮಾಡುತ್ತಿದೆ. ಇದೀಗ ದೊಡ್ಡ ಮಟ್ಟದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಸಿದ್ದರಾಮಯ್ಯ ಸರ್ಕಾರ ಮುಂದಾಗಿದ್ದು, 11 ಐಎಎಸ್‌ ಅಧಿಕಾರಿಗಳನ್ನು ವಿವಿಧೆಡೆಗೆ ವರ್ಗಾವಣೆ ಮಾಡಿದ್ದು, ಕೂಡಲೇ ನಿಯೋಜನೆಗೊಂಡಿರುವ ಇಲಾಖೆಗಳಲ್ಲಿ ತಮ್ಮ ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಿದೆ.

1990ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. 1993ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಎಸ್.ಆರ್. ಉಮಾಶಂಕರ್ ಅವರನ್ನು ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

1994ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಎನ್.ಮಂಜುನಾಥ ಪ್ರಸಾದ್ ಅವರನ್ನು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. 2004ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ. ಅನ್ಬುಕುಮಾರ್ ಅವರನ್ನು ಕೃಷಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.

2007ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಕೆ.ಪಿ.ಮೋಹನ್ ರಾಜ್ ಅವರನ್ನು ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆ ಕಾರ್ಯದರ್ಶಿಯಾಗಿ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಾರ್ಯದರ್ಶಿಯಾಗಿದ್ದ 2007ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರನ್ನು ಇದೀಗ ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ಕಾರ್ಯನಿರ್ವಹಣ ಅಧಿಕಾರಿಯಾಗಿದ್ದ 2010ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಆರ್.ಗಿರೀಶ್ ಅವರನ್ನು ಈಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

2012ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಕರೀಗೌಡ ಅವರನ್ನು ಅಟಲ್ ಜನಸ್ನೇಹಿ ಕೇಂದ್ರ ಇದರ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ತುಮಕೂರು ಜಿಲ್ಲಾಧಿಕಾರಿಯಾಗಿದ್ದ 2012ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಪಾಟೀಲ್ ಯಲಗೌಡ ಶಿವನಗೌಡರನ್ನು ಕೃಷಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.

ಇನ್ನು 2012ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಜಿ.ಜಗದೀಶ್ ಅವರನ್ನು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾಯಿಸಲಾಗಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ವ್ಯವಸ್ಥಾಪಕ ನಿರ್ದೇಶಕ 2017ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಎಂ.ಮಹೇಶ್ ಅವರನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ಕಾರ್ಯನಿರ್ವಹಣ ಅಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹಲವು ಬದಲಾವಣೆ ಮಾಡುತ್ತಿದ್ದು, ಈ ಹಿಂದಿನ ಸರ್ಕಾರದಲ್ಲಿ ಆಗಿದ್ದ ಬದಲಾವಣೆಗಳನ್ನು ಕೈಬಿಡುತ್ತಿದೆ. ಆ ಮೂಲಕ ಜನರಿಗೆ ಉತ್ತಮ ಆಡಳಿತ ನೀಡಲು ಹಾಗೂ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜಾರಿ ಮಾಡಲು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ ಎನ್ನಲಾಗುತ್ತಿದೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ