CRIMENEWSನಮ್ಮಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್‌: 16 ಮಂದಿಗೆ ಗಾಯ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್‌ ಕಂದಕಕ್ಕೆ ಉರುಳಿದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಣಿವೆಹಳ್ಳಿಯಲ್ಲಿ ನಡೆದಿದೆ.

ಬಸ್‌ ಹೊಸಪೇಟೆಯಿಂದ – ದಾವಣಗೆರೆಗೆ ಹೊರಟಿತ್ತು. ಮಾರ್ಗ ಮಧ್ಯೆ ಕಣಿವೆಹಳ್ಳಿ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಪರಿಣಾಮ 16 ಜನರಿಗೆ ಸಣ್ಣ, ಪುಟ್ಟ ಗಾಯಗಳಾಗಿವೆ.

ಎಲ್ಲ ಗಾಯಾಳುಗಳನ್ನು ಹರಪನಹಳ್ಳಿ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆದ ಬಳಿಕ ಕೆಲವರು ಮನೆಗೆ ಮರಳಿದ್ದರೆ ಇನ್ನು ಕೆಲವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ಬಸ್‌ ಕಂದಕಕ್ಕೆ ಉರುಳಿದ್ದರೂ ಸಹ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!