NEWSನಮ್ಮಜಿಲ್ಲೆನಮ್ಮರಾಜ್ಯ

6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ

ವಿಜಯಪಥ ಸಮಗ್ರ ಸುದ್ದಿ

ಸೀಬಿ: ರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಹಾಗೂ ಒಕ್ಕೂಟ ಹಮ್ಮಿಕೊಂಡಿರುವ ಪಾದಯಾತ್ರೆ ಸೋಮವಾರಕ್ಕೆ 6ನೇದಿನ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು ಮತ್ತೆ ನಾಳೆ ಅಂದರೆ ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಜಯಂತಿ ನಿಮಿತ್ತ ಪಾದಯಾತ್ರೆಗೆ ವಿರಾಮ ಹಾಕಲಾಗಿದೆ.

ಇದೇ ಏ.8ರಿಂದ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆರಂಭಗೊಂಡ ಸಾರಿಗೆ ನೌಕರರ ಪಾದಯಾತ್ರೆ ಇಂದಿಗೆ 6ನೇ ದಿನ ಯಶಸ್ವಿಗೊಳಿಸಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳಾದಿಂದ 6ನೇ ದಿನದ ಪಾದಯಾತ್ರೆ ಆರಂಭವಾಗಿ ಮಧ್ಯಾಹ್ನದ ಹೊತ್ತಿಗೆ ದೊಡ್ಡಾಲದ ಮರದವರೆಗೆ ಜಡೆಯಿತು. ಬಳಿಕ ಅಲ್ಲಿಂದ ಸೀಬಿವರೆಗೆ ಸಾಗಿದ್ದು ಈ ರಾತ್ರಿ ಹಾಘೂ ನಾಳೆ ಸೀಬಿಯಲ್ಲೇ ವಾಸ್ತವ್ಯ ಹೂಡಲಾಗುತ್ತಿದೆ.

ಇನ್ನು ಏ.15ರಿಂದ ಇದೇ ಸೀಬಿಯಿಂದ ಪಾದಯಾತ್ರೆ ಮುಂದುರಿಯಲಿದೆ ಎಂದು ಕೂಟ ಹಾಗೂ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಇಂದಿನ ಪಾದಯಾತ್ರೆಯಲ್ಲಿ ವಿವಿಧೆಡೆಯಿಂದ ಹಲವಾರು ನೌಕರರು ಭಾಗವಹಿಸಿದ್ದರು.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!