NEWSVideosನಮ್ಮಜಿಲ್ಲೆನಮ್ಮರಾಜ್ಯ

KSRTC: ಬೆಂಗಳೂರು ಚಲೋ- ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತಿರುವ ನೌಕರರು ಬಸ್‌ ನಿಲ್ಲಿಸಲು ಚಿಂತನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2020ರ ಜನವರಿ 1ರಿಂದ -2023ರ ಫೆ.28ರವರೆಗಿನ 38 ತಿಂಗಳ ಹಿಂಬಾಕಿ ಸೇರಿದಂತೆ ಒಟ್ಟಾರೆ 63 ತಿಂಗಳ ವೇತನ ಹಿಂಬಾಕಿಗೆ ಆಗ್ರಹಿಸುವ ಜತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಸಾರಿಗೆ ನೌಕರರು ನಾಳೆ ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ಒಂದು ವೇಳೆ ಇದಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಇಂದು ಸಂಜೆಯಿಂದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ ಹಾಗೂ ಎನ್‌ಡಬ್ಲ್ಯುಕೆಅರ್‌ಟಿಸಿ ಬಸ್‌ಗಳ ಸಂಚಾರ ಬಂದ್‌ ಮಾಡಿ ಮುಷ್ಕರ ಮಾಡಲಾಗುವುದು ಎಂದು ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

ಸಾರಿಗೆ ನೌಕರರು ಇಂದು ಫ್ರೀಡಂಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ‘ಬೆಂಗಳೂರು ಚಲೋ’ ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗಿಯಾಗಿದ್ದು ಸರ್ಕಾರದ ವಿರುದ್ಧ ಘೊಷಣೆ ಕೂಗುತ್ತಿದ್ದಾರೆ. ಅಲ್ಲದೆ ಸಂಜೆ 4 ಗಂಟೆವರೆಗೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಲಾಗಿದ್ದು, ಬೇಡಿಕೆ ಸಂಬಂಧ ನಿರ್ಣಯ ಕೈಗೊಳ್ಳದಿದ್ದರೆ ಬಸ್‌ಗಳನ್ನು ನಿಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಈ ಸಂಬಂಧ ನಿನ್ನೆ ರಾತ್ರಿಯೇ ಸರ್ಕಾರ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಬದಲಿಗೆ 26 ತಿಂಗಳ ಹಿಂಬಾಕಿ ಬಿಡುಗಡೆ ಮಾಡುವುದಾಗಿ ಆದೇಶ ಹೊರಡಿಸಿದೆ. ಆದರೆ, ಇದನ್ನು ಒಪ್ಪದ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದು 2020ರ ಬಳಿಕ ನಿವೃತ್ತರಾಗಿರುವ ನೌಕರರು ಸೇರಿದಂತೆ ನೂರಾರು ನೌಕರರು ಚಲೋದಲ್ಲಿ ಭಾಗಿಯಾಗುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತಿದ್ದಾರೆ.

ಈ ನಡುವೆ ಈಗ ಸರ್ಕಾರ ಸ್ಪಂದಿಸದಿದ್ದರೆ ಸಂಜೆ ಬಳಿಕ ಬಸ್ ಸಂಚಾರ ಸ್ಥಗಿತವಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಇದಕ್ಕೆ ಅಧಿಕಾರಿಗಳ ಸ್ಪಂದನೆ ಹೇಗಿರುತ್ತದೆ ಎಂಬುವುದನ್ನು ಕಾದು ನೋಡಬೇಕಿದೆ.

ಒಟ್ಟಾರೆ ಸಾರಿಗೆ ಅಧಿಕಾರಿಗಳು/ನೌಕರರಿಗೆ 2020 ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳದ ಮತ್ತೆ 27 ತಿಂಗಳ ಹಿಂಬಾಕಿ ಸೇರಿದರೆ 63 ತಿಂಗಳ ಅಂದರೆ 5ವರ್ಷ 3 ತಿಂಗಳ ಹಿಂಬಾಕಿ ಕೊಡಬೇಕಿದೆ. ಆದರೆ ಈ ಬಗ್ಗೆ ಸರ್ಕಾರ ಮೌನವಹಿಸಿರುವುದರಿಂದ ಹಾಗೂ ನೌಕರರ ಕೂಗಿಗೆ ಸ್ಪಂದಿಸರಿರುವುದಕ್ಕೆ ಇಂದು ರೊಚ್ಚಿಗೆದ್ದು ಹೋರಾಟದ ಹಾದಿ ಹೊಡಿದಿದ್ದಾರೆ ನಾಲ್ಕೂ ನಿಗಮಗಳ ನೌಕರರು.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...