Breaking NewsNEWSನಮ್ಮರಾಜ್ಯ

ಏ.15ರಂದು ಸಿಎಂ ಮನೆ ಮುಂದೆ ಸಾರಿಗೆ ನೌಕರರ ಧರಣಿ: ಜಂಟಿ ಕ್ರಿಯಾ ಸಮಿತಿ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸಂಕ್ರಾಂತಿ ಬಳಿಕ ಸಾರಿಗೆ ಸಂಘಟನೆಗಳ ಸಭೆ ಕರೆಯುತ್ತೇವೆ ಎಂದು ಹೇಳಿ ಈವರೆಗೂ ಸಭೆ ಕರೆಯದಿರುವುದಕ್ಕೆ ಆಕ್ರೋಶಗೊಂಡಿರುವ ಜಂಟಿ ಕ್ರಿಯಾ ಸಮಿತಿ ಇದೇ ಏ.15ರಿಂದ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುವುದಕ್ಕೆ ಮುಂದಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಕಳೆದ 2024ರ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರ ಮಾಡದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡ ಅವರು ಮನವಿ ಮಾಡಿದ್ದರಿಂದ ಜಂಟಿ ಕ್ರಿಯಾ ಸಮಿತಿ ಅಂದು ಧರಣಿಯನ್ನು ಮುಂದೂಡಿತ್ತು.

ಆ ಬಳಿಕ ಅಂದರೆ ಸಂಕ್ರಾಂತಿ ಮುಗಿದ ಕೂಡಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಂಘಟನೆಗಳ ಸಭೆ ಕರೆದು 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳ ಸಂಬಂಧ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳೋಣ ಎಂದು ಸಚಿವರು ಮನವಿ ಮಾಡಿದ್ದರು.

ಹೀಗಾಗಿ ಜಂಟಿ ಕ್ರಿಯಾ ಸಮಿತಿ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಡಿ.29ರಂದು ಹೇಳಿಕೆ ನೀಡಿತ್ತು. ಆ ಬಳಿಕ ಅಂದರೆ ಜನವರಿ 15ರ ಬಳಿಕ ಸಭೆ ಕರೆಯುತ್ತೇವೆ ಎಂದು ಹೇಳಿದ ಸರ್ಕಾರ ಅಥವಾ ಸಚಿವರು ಈವರೆಗೂ ಸಂಘಟನೆಗಳ ಸಭೆ ಕರೆದಿಲ್ಲ ಆದ್ದರಿಂದ ಮತ್ತೆ ಮುಷ್ಕರ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.

ಇನ್ನು ಇದೇ ಏ.15ರಿಂದ ಮುಖ್ಯಮಂತ್ರಿ ಮನೆಮುಂದೆ ಧರಣಿ ಕೂರುವುದಾಗಿತಿಳಿಸಿದ್ದು, ನಾವು ಈವರೆಗೂ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ಕರೆಯುತ್ತಾರೆ ಎಂದು ಕಾದು ನೋಡಿದ್ದೇವೆ. ಅದರಂತೆ ಏ.5ರಂದು ಸಭೆಯನ್ನು ನಿಗದಿ ಮಾಡಿದ್ದರು ಆದರೆ, ಆ ಸಭೆಯನ್ನು ಮುಂದೂಡಿದ್ದು 7ದಿನಗಳು ಕಳೆದರೂ ಈವರೆಗೂ ಯಾವುದೆ ಮಾಹಿತಿ ಇಲ್ಲ.

ಹೀಗಾಗಿ ನಾವು ಇದೇ ಏ.15ರಿಂದ ಸಿಎಂ ಮನೆ ಮುಂದೆ ಧರಣಿ ಕೂರುತ್ತೇವೆ ಎಂದು ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಆದರಿಂದ ಏ.15ರಂದು ಸಾರಿಗೆ ಬಸ್‌ ವ್ಯತ್ಯಯವಾಗುವ ಸಂಭವ ಹೆಚ್ಚಿದೆ ಎಂದು ಹೇಳಲಾಗುತ್ತಿದ್ದು, ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣ ಮಾಡುವ ಸಾರ್ವಜನಿಕರು ಈ ಬಗ್ಗೆ ಸ್ವಲ್ಪ ಎಚ್ಚರ ವಹಿಸುವುದು ಸೂಕ್ತ.

Deva
the authorDeva

Leave a Reply

error: Content is protected !!
Latest news
ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು