NEWSನಮ್ಮರಾಜ್ಯ

ಫೆ.19ರಂದು ವಿವಿಧ ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೌಕರರಿಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಶೇ.15ರಷ್ಟು ಹೆಚ್ಚವಾಗಿರುವ 38 ತಿಂಗಳ ವೇತನ ಹಿಂಬಾಕಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಾರಿಗೆ ನೌಕರರ ಸಂಘಟನೆಗಳು ಫೆ.19ರಂದು ಪ್ರತಿಭಟನೆ ಹಮ್ಮಿಕೊಂಡಿವೆ.

ಈ ಹಿಂದೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಘೋಷಿಸಿದ್ದ ಮುಷ್ಕರವು ವಿವಿಧ ಕಾರಣಗಳಿಂದ ಮುಂದೂಡಿಕೆ ಆಗಿತ್ತು. ಇದೀಗ ಸರ್ಕಾರ ಯಾವುದೇ ರೀತಿಯಲ್ಲಿ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣಕ್ಕೆ ರಾಜ್ಯವ್ಯಾಪಿ ‘ಬೆಂಗಳೂರು ಚಲೋ’ ನಡೆಸುವುದಾಗಿ ಜಂಟಿ ಕ್ರಿಯಾ ಸಮಿತಿ ಅಧಿಕೃವಾಗಿ ಘೋಷಿಸಿದೆ. ಇನ್ನು ಈ ಪ್ರತಿಭಟನೆ ಫೆ.19ರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ನಗರ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವುದರಿಂದ ಸಾರಿಗೆ ಬಸ್‌ಗಳ ಓಡಾಟದಲ್ಲಿ ಯಾವುದೆ ವ್ಯತ್ಯಯವಾಗುವುದಿಲ್ಲ ಎಂದು ತಿಳಿಸಿದೆ.

ಈಗಾಗಲೇ ಸರ್ಕಾರದೊಂದಿಗೆ ಸಾರಿಗೆ ನೌಕರರ ಸಂಘಟನೆಗಳು ಹಲವು ಬಾರಿ ಮಾತುಕತೆ ನಡೆಸಿವೆ. ಆದರೆ ಸರ್ಕಾರ ಭರವಸೆ ನೀಡಿತೇ ವಿನಾಃ ಬೇಡಿಕೆ ಈಡೇರಿಸಲು ಮುಂದಾಗಿಲ್ಲ. ಹೀಗಾಗಿ 2024 ಜನವರಿ 1ರಿಂದ ಜಾರಿಗೆ ಬರಬೇಕಿರುವ ವೇತನ ಹೆಚ್ಚಳ, 2020 ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳ ಹಿಂಬಾಕಿ ಇದುವರೆಗೂ ನೌಕರರ ಕೈ ಸೇರಿಲ್ಲ. ಹೀಗಾಗಿ 4 ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.

4 ಸಾರಿಗೆ ನಿಗಮಗಳ ಬೆಂಬಲ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ನಿಗಮಗಳು ಈ ಪ್ರತಿಭಟನೆ ಬೆಂಬಲಿಸುತ್ತಿದ್ದರೂ ಒಟ್ಟಾರೆ ಸಾರಿಗೆ ಸೇವೆ ನೀಡುತ್ತಿವೆ.

ಸರ್ಕಾರದ ಶಕ್ತಿ ಯೋಜನೆ ಜಾರಿಗೆ ಸಾರಿಗೆ ಸಂಸ್ಥೆಗಳ ಪ್ರತಿಯೊಬ್ಬ ನೌಕರರು ಶ್ರಮಿಸಿದ್ದಾರೆ ಶ್ರಮಿಸುತ್ತಿದ್ದಾರೆ ಆದ್ದರಿಂದ ವೇತನ ಪರಿಷ್ಕರಣೆ, ಹಿಂಬಾಕಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಇದೂವರೆಗೂ ನೌಕರರು ಕೋರಿದ ಮನವಿಗಳಿಗೆ ಸ್ಪಂದಿಸದ ಕಾರಣ ಪ್ರತಿಭಟನೆ ಅನಿವಾರ್ಯವೆಂದು ನೌಕರರು ನಿರ್ಧರಿಸಿದ್ದಾರೆ.

ಕೊಟ್ಟ ಮಾತಿನಂತೆ ನಡೆದುಕೊಳ್ಳದ ಸರ್ಕಾರ: 2025ರ ಆಗಸ್ಟ್ ತಿಂಗಳಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದರು. ಆದರೆ ಸರ್ಕಾರ ನೀಡಿದ ಭರವಸೆ, ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ ಅಂದಿನ ಮುಷ್ಕರ ಮುಂದೂಡಿಕೆ ಆಗಿತ್ತು. ಕಳೆದ ದೀಪಾವಳಿ ಹಬ್ಬದ ಹೊತ್ತಿಗೆ ಮತ್ತೆ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದರು.

ಆದರೆ, ಅಂದು KSRTC ವ್ಯವಸ್ಥಾಪಕ ನಿರ್ದೇಶಕರು ಮೌಖಿಕ ಭರವಸೆ ನೀಡಿದ್ದರು. ಚರ್ಚೆಗೆ 15 ದಿನಗಳ ಕಾಲಾವಕಾಶ ಕೋರಿದ್ದರು. ಈ ಹಿನ್ನೆಲೆ 38 ತಿಂಗಳ ಹಿಂಬಾಕಿ ಸಿಗುವುದೆಂಬ ಆಶಾಭಾವನೆಯಿಂದ ಮುಷ್ಕರವನ್ನು ಮತ್ತೆ ಕೈ ಬಿಡಲಾಗಿತ್ತು. ಬಳಿಕ ಸರ್ಕಾರ ಭರವಸೆ ನೀಡಿತೇ ಹೊರತು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಹೀಗಾಗಿ ಕುಪಿತಗೊಂಡಿರುವ ಸಾರಿಗೆ ನೌಕರರ ಸಂಘಟನೆಗಳು ಮತ್ತೆ ಪ್ರತಿಭಟನೆಗೆ ಕರೆ ನೀಡಿವೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!