NEWSನಮ್ಮರಾಜ್ಯ

ಸಾರಿಗೆ ನೌಕರರ ವೇತನ ಹೆಚ್ಚಳ ಪ್ರಕರಣ: ಜೂನ್‌ 25ಕ್ಕೆ ಮುಂದೂಡಿದ ಹೈಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್‌ನಲ್ಲಿ ಅರ್ಜಿ ಹಾಕಿದ್ದು ಆ ಪ್ರಕರಣದ ವಿಚಾರಣೆ ಇಂದು (ಜೂನ್‌ 11ರಂದು) ನಡೆದಿದ್ದು, ಇದೇ ಜೂನ್‌ 25ಕ್ಕೆ ಮುಂದೂಡಲಾಗಿದೆ.

ನೌಕರರ ವೇತನ ಹೆಚ್ಚಳದ ಬಗ್ಗೆ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ವಕೀಲ ಎಚ್‌.ಬಿ.ಶಿವರಾಜು ಹಾಕಿರುವ ಅರ್ಜಿ ಸಂಬಂಧದ ಪ್ರಕರಣ ಇಂದು ನಡೆದಿದ್ದು, ನೌಕರರ ಪರ ವಕೀಲರು ಹಾಗೂ ಸರ್ಕಾರ, ಸಾರಿಗೆ ಆಡಳಿತ ಮಂಡಲಿ ಪರ ವಕೀಲರು ಹಾಜರಾಗಿದ್ದರು. ಸಮಯದ ಅಭಾವದಿಂದ ಪ್ರಕರಣವನ್ನು ಇದೇ ಜೂನ್‌ 25ಕ್ಕೆ ನ್ಯಾಯಪೀಠ ಮುಂದೂಡಿದೆ.

ಇನ್ನು ವಿಚಾರಣೆ ಇದೇ ಜೂನ್‌ 9ರಂದು ನಡೆಯಬೇಕಿತ್ತು ಆದರೆ, ಕೆಲ ಕಾರಣಗಳಿಂದ ನ್ಯಾಯಪೀಠಕ್ಕೆ ಪ್ರಕರಣ ಬಂದಿರಲಿಲ್ಲ. ಹೀಗಾಗಿ ಇಂದು ಪ್ರಕರಣ ಕೋರ್ಟ್‌ಹಾಲ್‌ಗೆ ಬಂದಿದ್ದು, ಜೂನ್‌ 25ಕ್ಕೆ ಹೋಗಿದೆ.

ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳವಾಗಬೇಕಿದ್ದು 16ತಿಂಗಳಗಳು ಕಳೆದರೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.

ನೌಕರರ ವೇತನ ಹೆಚ್ಚಳ ಸಂಬಂಧ 2025ರ ಮಾರ್ಚ್‌ 10ರಂದು ಹೈ ಕೋರ್ಟ್‌ನಲ್ಲಿ ವಕೀಲ ಶಿವರಾಜು ಹಾಗೂ ಅವರ ವಕೀಲರ ತಂಡ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಟ್ಟಿಲ್ಲ. ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನು ಮಾಡಿಲ್ಲ. ಹೀಗಾಗಿ ನೌಕರರ ಸಹಿಯೊಂದಿಗೆ ಪಿಟಿಶನ್‌ ಫೈಲ್‌ ಮಾಡಿದ್ದಾರೆ.

ಇನ್ನು ಸರ್ಕಾರ ಸಾರಿಗೆ ನೌಕರರನ್ನು ಒಂದು ರೀತಿ ಮಲತಾಯಿಯಂತೆ ನೋಡುತ್ತಿದೆ. ಹೀಗಾಗಿ ನೌಕರರಿಗೆ ಸಿಗಬೇಕಿರುವ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ಹೀಗಾಗಿ ನೌಕರರು ತಮ್ಮ ವೇತನ ಸೌಲಭ್ಯ ಪಡೆಯಲೂ ಇನ್ನೂ ಸಾಧ್ಯವಾಗಿಲ್ಲ. ಈ ಎಲ್ಲವನ್ನು ಗಮನಿಸಿರುವ ಶಿವರಾಜು ಅವರು ನೌಕರರ ವೇತನಕ್ಕೆ ಸಂಬಂಧಪಟ್ಟಂತೆ  ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Megha
the authorMegha

Leave a Reply

error: Content is protected !!