ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ ಅರ್ಜಿ ಹಾಕಿದ್ದು ಆ ಪ್ರಕರಣದ ವಿಚಾರಣೆ ಇಂದು ಹೈ ಕೋರ್ಟ್ ನಡೆದು, ಸೆ.17ಕ್ಕೆ ಮುಂದೂಡಿದೆ.
ಈ ಹಿಂದೆ ಸೆ.3ರಂದು ಪ್ರಕರಣದ ವಿಚಾರಣೆ ನಡೆದಿತ್ತು. ನೌಕರರ ಪರ ವಕೀಲರು ಹಾಗೂ ಸರ್ಕಾರ, ಸಾರಿಗೆ ಆಡಳಿತ ಮಂಡಲಿ ಪರ ವಕೀಲರು ಹಾಜರಾಗಿದ್ದರು. ಈ ವೇಳೆ ನೌಕರರ ಪರ ವಕೀಲರು ಐಎ ಹಾಕಿದ್ದರು. ಬಳಿಕ ಸೆ.10ಕ್ಕೆ ಅಂದರೆ ಇಂದಿಗೆ ಮುಂದೂಡಲಾಗಿತ್ತು. ಇಂದು ವಿಚಾರಣೆ ನಡೆಯಿತು.
ಈ ವೇಳೆ ಸಂಸ್ಥೆಯ ಪರ ವಕೀಲರು ನೌಕರರ ಪರ ವಕೀಲರು ಹಾಕಿರುವ ಐಎಗೆ ಆಕ್ಷೇಪಣೆ (Objection) ಸಲ್ಲಿಸಲು ಕಾಲಾವಕಾಶ ಕೊಡಿ ಎಂದು ಕೇಳಿದ್ದರು. ಈ ವೇಳೆ ಮೇನ್ ಪಿಟಿಷನ್ಗೆ ಆಕ್ಷೇಪಣೆ ಸಲ್ಲಿಸಿಲ್ಲ ಈಗ ಐಎಗೆ ಏನು ಆಕ್ಷಣೆ ಸಲ್ಲಿಸುತ್ತಾರೆ ಎಂದು ನೌಕರರ ಪರ ವಕೀಲರಾದ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ವಕೀಲ ಎಚ್.ಬಿ.ಶಿವರಾಜು ಕೇಳಿದರು.
ಈ ವೇಳೆ ಇಲ್ಲ ನಾವು ಈ ಐಎಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದರಿಂದ ಕೋರ್ಟ್ ಇದೇ ಸೆ.17ಕ್ಕೆ ಪ್ರಕರಣವನ್ನು ಮುಂದೂಡಿದೆ.
ಒಟ್ಟಾರೆ ಈ ಪ್ರಕರಣ ತ್ವರಿತವಾಗಿ ಮುಗಿಯಬೇಕು ನೌಕರರಿಗೆ ನ್ಯಾಯಸಿಗಬೇಕು ಎಂದು ಕೋರ್ಟ್ ಕೂಡ ಬಯಸಿದ್ದು ಆ ನಿಟ್ಟಿನಲ್ಲಿ ಹತ್ತಿರ ಹತ್ತಿರದಲ್ಲೇ ಡೇಟ್ಕೊಡುತ್ತಿದೆ ಎಂದು ಹೇಳಬಹುದು. ಇದನ್ನು ಗಮನಿಸಿದರೆ ಕೋರ್ಟ್ ಕೂಡ ನೌಕರರಿಗೆ ಆಗುತ್ತಿರುವ ಅನ್ಯಾಯವನ್ನು ಗಮನಿಸುತ್ತಿದೆ ಎನ್ನಬಹುದು. ಆದರೆ, ಕೋರ್ಟ್ ದಾಖಲೆಗಳ ಆಧಾರದ ಮೇಲೆ ತೀರ್ಪುಕೊಡುವುದರಿಂದ ಎಷ್ಟರಮಟ್ಟಿಗೆ ವಾದ ಪ್ರತಿವಾದ ಮಂಡನೆಯಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಇನ್ನು ಈ ಪ್ರಕರಣ ನೌಕರರ ಪರ ಬಲವಾಗಿ ನಿಲ್ಲಬೇಕಾದರೆ ಯಾವುದಾದರೊಂದು ನೌಕರರ ಪರ ಸಂಘಟನೆ ಸಂಸ್ಥೆಯ ಎಂಡಿ ಅವರಿಗೆ 2024ರ ಜನವರಿ 1ರಿಂದ ವೇತನ ಹೆಚ್ಚಳ ಮಾಡಬೇಕು ಹಾಗೂ 38 ತಿಂಗಳ ಹಿಂಬಾಕಿ ಕೊಡಬೇಕು ಎಂಬ ಸಂಬಂಧ ಮನವಿ ಮಾಡಿರುವ ಪ್ರತಿಯನ್ನು ಲಗತ್ತಿಸಿದರೆ ತುಂಬ ಅನುಕೂಲವಾಗುತ್ತದೆ. ಆದರೆ ಈ ಬಗ್ಗೆ ನೌಕರರ ಯಾವುದೇ ಸಂಘಟನೆ ಈವರೆಗೂ ಮುಂದೆ ಬಂದಿಲ್ಲದಿರುವುದು ದುರಂತ.

ಪ್ರಕರಣವೇನು?: ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳವಾಗಬೇಕಿದ್ದು20 ತಿಂಗಳಗಳು ಕಳೆದರೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
ನೌಕರರ ವೇತನ ಹೆಚ್ಚಳ ಸಂಬಂಧ 2025ರ ಮಾರ್ಚ್ 10ರಂದು ಹೈ ಕೋರ್ಟ್ನಲ್ಲಿ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ, ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನು ಮಾಡಿಲ್ಲ. ಹೀಗಾಗಿ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಹೈ ಕೋರ್ಟ್ ಮೆಟ್ಟಿಲೇರಿದ್ದಾರೆ.
Related


You Might Also Like
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 47,848 ಮನೆಗಳು ಮಂಜೂರು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303...
ಅರ್ಹರಿಗೆ ತಕ್ಷಣವೇ ಬಿಪಿಎಲ್ ಕಾರ್ಡ್ ನೀಡಬೇಕು: ಅಧಿಕಾರಿಗಳಿಗೆ ಸಿಎಂ ತಾಕೀತು
ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ, ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ...
ಭ್ರಷ್ಟ ಕಾರ್ಮಿಕ ಅಧಿಕಾರಿಗೆ ಕೆಆರ್ಎಸ್ ಪಕ್ಷದಿಂದ ನಾಗರೀಕ ಸನ್ಮಾನ
ಬೆಂಗಳೂರು: ಕಾರ್ಮಿಕ ಪರವಾನಿಗೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಗೆ ಸಿಕ್ಕಿದ ಕಾರ್ಮಿಕ ಅಧಿಕಾರಿಗೆ ಕೆಆರ್ಎಸ್ ಪಕ್ಷದ ವತಿಯಿಂದ ಸನ್ಮಾನ ಮಾಡಲು ಕಚೇರಿಗೆ ಹೋದಾಗ ಅಧಿಕಾರಿ...
KSRTC ಚಿಲ್ಲರೇ ಗಲಾಟೆ: ಸಂಸ್ಥೆ ನೌಕರನ ವಿರುದ್ಧ ಮೃಗದಂತೆ ವರ್ತಿಸಿ ರಾಜೀನಾಮೆ ಕೇಳಿದ ವಿಭಾಗೀಯ ನಿಯಂತ್ರಣಾಧಿಕಾರಿ
ನಾಲ್ಕೂ ಸಾರಿಗೆ ನಿಗಮಗಳ ನೌಕರರು ಹಾಗೂ ಸಂಘಟನೆಗಳ ಬಳಿ ನೋವು ತೋಡಿಕೊಂಡ ನೊಂದ ನೌಕರ ಕೊಳ್ಳೇಗಾಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೊಳ್ಳೇಗಾಲ ಘಟಕದ ಬಸ್...
KSRTC: ಚಿಲ್ಲರೆಗಾಗಿ ಗಲಾಟೆ ಘಟನೆ- ಕಂಡಕ್ಟರ್ಗೆ ಬೈದು ರಾಜೀನಾಮೆ ಕೇಳಿದ ಡಿಸಿ ಅಶೋಕ್ ವಿರುದ್ಧ ದೂರು ದಾಖಲು
ಕೊಳ್ಳೇಗಾಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೊಳ್ಳೇಗಾಲ ಘಟಕದ ಬಸ್ ನಿರ್ವಾಹಕ ಮತ್ತು ಪ್ರಯಾಣಿಕನ ನಡುವೆ ಚಿಲ್ಲರೆ ಹಣ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿತ್ತು. ಈ...
ನೇಪಾಳ ಧಗಧಗ: ಅಧ್ಯಕ್ಷ, ಪ್ರಧಾನಿ, ಸಂಸತ್ಗೆ ದಾಳಿಯಿಟ್ಟು ಹಿಂಸಾಚಾರ
ಕಠ್ಮಂಡು: ಸಾಮಾಜಿಕ ಜಾಲತಾಣಗಳ ನಿರ್ಬಂಧ ಮಾಡಿದ್ದಕ್ಕೆ ಯುವಕರು ದಂಗೆ ಎದ್ದಿರುವ ಕಾರಣ ಭಾರತದ ನೆರೆಯ ರಾಷ್ಟ್ರ ನೇಪಾಳ ಹೊತ್ತಿ ಉರಿಯುತ್ತಿದೆ. ಸತತ 3ನೇ ದಿನವೂ ನೇಪಾಳ ಕುದಿಯುತ್ತಿದೆ....
ಸಾರಿಗೆ ಬಸ್ಗಳು ಅಪಘಾತವಾದರೆ ಚಾಲಕರಿಗೆ ಡಿಎಂಗಳು ಜಾಮೀನು ಕೊಡಬೇಕು: ಸಿಟಿಎಂ ಆದೇಶ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳು ಅಪಘಾತವಾದ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರು ಚಾಲಕರಿಗೆ ಜಾಮೀನು ನೀಡುವ ವ್ಯವಸ್ಥೆಯನ್ನು ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದು ಮುಖ್ಯ ಸಂಚಾರ...
ಬದುಕಲಾಗುತ್ತಿಲ್ಲ ದಯಮಾಡಿ ನನಗೆ ವಿಷ ಕೊಡಿ: ನ್ಯಾಯಾಧೀಶರಲ್ಲಿ ನಟ ದರ್ಶನ್ ಮನವಿ
ಬೆಂಗಳೂರು: ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ಹಾಜರಾದ ವೇಳೆ ಮನವಿ ಮಾಡಿದ್ದಾರೆ....
ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲಪತ್ತೆ: 1.17 ಕೋಟಿ ರೂ.ಮೌಲ್ಯದ 4,108 ಕ್ವಿಂಟಾಲ್ ಅಕ್ಕಿ ಜಪ್ತಿ- ಇಬ್ಬರ ವಿರುದ್ಧ FIR ದಾಖಲು
ಯಾದಗಿರಿ: ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಪಾಲಿಶ್ ಮಾಡಿ ಮಾರಾಟ ಮಾಡುತ್ತಿದ್ದ ಅಪ್ಪ ಮಕ್ಕಳಿಗೆ ಸೇರಿದ ಎರಡು ರೈಸ್ ಮಿಲ್ಗಳ ಮೇಲೆ ಆಹಾರ ಪೊರೈಕೆ ಹಾಗೂ ಕಂದಾಯ ಇಲಾಖೆ...