ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29) ಕ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ಬಹುತೇಕ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆಯು ಆಯಾಯ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಾರಿಗೆ ನೌಕರರು ಈ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಇದಕ್ಕೆ ಸಮಸ್ತ ಅಧಿಕಾರಿ ವರ್ಗವದವರು ಬೆಂಬಲ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೆ ಬಸ್ ನಿಲ್ಲಿಸಿ ಮುಷ್ಕರ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಅಧಿಕಾರಿಗಳು ನಮ್ಮ ಶಾಂತಿಯುತ ಹೋರಾಟವನ್ನು ಬೆಂಬಲಿಸುವುದಾಗಿ ಈ ಹಿಂದೆಯೇ ವಿಜಯಪಥಕ್ಕೆ ತಿಳಿಸಿದ್ದರು. ಅದಂತೆ ನಾಳೆಯಿಂದ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಕ್ಕೆ ಬೇಷರತ್ತಾಗಿ ನಾವು ಬೆಂಬಲ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.
ಹೀಗಾಗಿ ಸಾರಿಗೆ ನೌಕರರಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಅಂದರೆ ವಿಧಾನಸಭಾ ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿ ಮಾಡಬೇಕು ಎಂದು ಬೇಡಿಕೆ ಸಮಸ್ತ ಅಧಿಕಾರಿಗಳು ಹಾಗೂ ನೌಕರರ ಆಗ್ರಹವಾಗಿದೆ.
ಇದರ ಜತೆಗೆ 01/01/2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡಬೇಕು (ನಿವೃತ್ತ ನೌಕರರಿಗೆ ಮೊದಲ ಅದ್ಯತೆಯಲ್ಲಿ ಅವರ ಹಿಂಬಾಕಿ ಮತ್ತು ಇತರೆ ಸೇವಾ ಆರ್ಥಿಕ ಸೌಲಭ್ಯಗಳನ್ನು ನೀಡುವುದು) ಎಂಬ ಬೇಡಿಕೆಯೂ ಇದೆ.
ಇನ್ನು ಪ್ರಮುಖವಾಗಿ 2020 ಮತ್ತು 2021ರ ಸಾರಿಗೆ ಮುಷ್ಕರದ ಸಮಯದಲ್ಲಿ ಆಗಿರುವ ವಜಾ ಮತ್ತು ಇತರೆ ಪ್ರಕರಣಗಳ ಶಿಕ್ಷಾದೇಶಗಳನ್ನು ರದ್ದು ಪಡಿಸಿ ಸೌಹರ್ದ ರೀತಿಯಲ್ಲಿ ಇತ್ಯರ್ಥ ಪಡಿಸುವುದು ಹಾಗೂ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಲಾಗುತ್ತಿದೆ.
ಇದರ ನಡುವೆ ಸಾರಿಗೆ ಸಂಘಟನೆಗಳ ಮುಖಂಡರು ಅದರಲ್ಲೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು 1992 ನಂತರ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಯದೆ ಇರುವುದರಿಂದ, ಕೂಡಲೆ” ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ಮಾಡಲು ಆದೇಶ ಮಾಡಬೇಕು ಎಂದು ಒತ್ತಾಯಿಸಿ ಈ ಧರಣಿ ಹಮ್ಮಿಕೊಳ್ಳುತ್ತಿದ್ದಾರೆ.
ಅಲ್ಲದೆ ಈ ಧರಣಿ ಸತ್ಯಾಗ್ರಹಕ್ಕೆ ಸಮಸ್ತ ಮಾಧ್ಯಮದವರು ನಮ್ಮ ಬೆಂಬಲಕ್ಕೆ ನಿಲ್ಲುವ ಮೂಲಕ ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಸಿಕೊಳ್ಳಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
ಅಭಿವೃದ್ಧಿಗೆ ಹಣ ಇಲ್ಲ ಅಂತ ಸುಳ್ಳು ಎರಚುವ ಬಿಜೆಪಿಗೆ ನಮ್ಮ ಸವಾಲ್: ಸಿಎಂ
ಮಂಡ್ಯ: ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು...