NEWSನಮ್ಮಜಿಲ್ಲೆನಮ್ಮರಾಜ್ಯ

ಡ್ಯೂಟಿ ರೋಟಾ ಸಂಬಂಧ  ಜೂನ್‌ 20ರಿಂದ ಸಾರಿಗೆ ನೌಕರರ ಕೌನ್ಸೆಲಿಂಗ್: ಸಿಟಿಎಂ ಆದೇಶ

ಪ್ರತಿ 6 ತಿಂಗಳಿಗೊಮ್ಮೆ ಪರಿಶೀಲಿಸಿ, ಮಾರ್ಗಗಳನ್ನು ಪುನರ್ ನಿಗದಿಗೊಳಿಸಬೇಕಾಗಿದೆ. ಅದರಂತೆ ಬರುವ ತಿಂಗಳ ಜುಲೈ 1ರಿಂದ ಜಾರಿಗೆ ಬರುವಂತೆ ಹೊಸದಾಗಿ ಡ್ಯೂಟಿ ರೋಟಾವನ್ನು ಅನುಷ್ಠಾನಗೊಳಿಸಿ ಡ್ಯೂಟಿ ರೋಟಾವನ್ನು ಜಾರಿಗೊಳಿಸಲು ಕ್ರಮವಹಿಸಬೇಕು

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಲ್ಲ ವಿಭಾಗಗಳ ಹಿರಿಯ, ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಡ್ಯೂಟಿ ರೋಟಾವನ್ನು ಜುಲೈ ಒಂದರಿಂದಲೇ ಪೂರ್ಣ ಪ್ರಮಾಣದಲ್ಲಿ  ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಮೇ 26ರಂದೇ ಆದೇಶ ಹೊರಡಿಸಿರುವ ಮುಖ್ಯ ಸಂಚಾರ ವ್ಯವಸ್ಥಾಪಕರು, ಈ ವಿಷಯಕ್ಕೆ ಸಂಬಂಧಿಸಿದಂತೆ, ಅನುಸೂಚಿಗಳಿಗೆ ಪಾರದರ್ಶಕವಾಗಿ ಚಾಲನಾ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲು ಅನುಕೂಲವಾಗುವ ದೃಷ್ಟಿಯಿಂದ ಅವರ ಸೇವಾ ಜೇಷ್ಠತೆಯ ಆಧಾರದ ಮೇಲೆ ಕೌನ್ಸೆಲಿಂಗ್  ಮುಖಾಂತರ ಡ್ಯೂಟಿ ರೋಟಾ ಸಿದ್ಧಪಡಿಸಿ ಜಾರಿಗೊಳಿಸಲು ಈಗಾಗಲೇ ಪತ್ರಗಳ ಮುಖಾಂತರ ಹಾಗೂ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ತಿಳಿಸಲಾಗಿದೆ.

ಪ್ರತಿ 6 ತಿಂಗಳಿಗೊಮ್ಮೆ ಪರಿಶೀಲಿಸಿ, ಮಾರ್ಗಗಳನ್ನು ಪುನರ್ ನಿಗದಿಗೊಳಿಸಬೇಕಾಗಿದೆ. ಅದರಂತೆ ಬರುವ ತಿಂಗಳ ಜುಲೈ 1ರಿಂದ ಜಾರಿಗೆ ಬರುವಂತೆ ಹೊಸದಾಗಿ ಡ್ಯೂಟಿ ರೋಟಾವನ್ನು ಸಂಸ್ಥೆಯ ಎಲ್ಲ ಘಟಕಗಳಲ್ಲೂ ಅನುಷ್ಠಾನಗೊಳಿಸಿ ಡ್ಯೂಟಿ ರೋಟಾವನ್ನು ಜಾರಿಗೊಳಿಸಲು ಕ್ರಮವಹಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇದೇ ಜೂನ್‌ 8ರೊಳಗಾಗಿ ನೌಕರರ ಜೇಷ್ಠತಾ ಪಟ್ಟಿಯನ್ನು ಆಯಾಯಾ ಡಿಪೋಗಳ ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು. ಬಳಿಕ ಜೂನ್‌ 14ರೊಳಗಾಗಿ ಡ್ಯೂಟಿ ರೋಟಾ ಬ್ಲಾಕ್ ಗಳನ್ನು ಪ್ರದರ್ಶಿಸಬೇಕು. ಇನ್ನು ಜೇಷ್ಠತಾ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜೂನ್‌ 16 ರೊಳಗಾಗಿ ಪಡೆದು ಜೂನ್‌ 18ರೊಳಗಾಗಿ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ತಿಳಿಸಿದ್ದಾರೆ.

ಇನ್ನು ಜೂನ್‌ 20ರಿಂದ 28ರೊಳಗೆ ಕೌನ್ಸೆಲಿಂಗ್ ಸಭೆ ನಡೆಸಿ, ಜೂನ್‌ 30 ರೊಳಗೆ ವಿಭಾಗೀಯ ಕಚೇರಿಯಿಂದ ಅನುಮೋದನೆ ನೀಡಬೇಕು. ಈ ಮೂಲಕ ಜುಲೈ 1 ರಿಂದ ಜಾರಿಗೆ ಬರುವಂತೆ ಹೊಸ ಡ್ಯೂಟಿ ರೋಟಾವನ್ನು ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದ್ದಾರೆ.

ಅಲ್ಲದೆ ಈ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಘಟಕ ವ್ಯವಸ್ಥಾಪಕರಿಗೆ ಹಾಗೂ ವಿಭಾಗದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು. ಈ ವಿಷಯದಲ್ಲಿ ಯಾವುದೇ ರೀತಿಯ ದೂರುಗಳು ಬಾರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು.

ಜತೆಗೆ ಈ ಬಗ್ಗೆ ಕೈಗೊಂಡ ಕ್ರಮದ ಕುರಿತು ಡ್ಯೂಟಿ ರೋಟಾ ದೃಢೀಕೃತ ಪ್ರತಿಯೊಂದಿಗೆ ಸಂಸ್ಥೆಯ ಕೇಂದ್ರ ಕಚೇರಿಗೆ ಅನುಸರಣಾ ವರದಿಯನ್ನು ಕಳುಹಿಸಬೇಕು ಎಂದು ಕೋರಿದ್ದಾರೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ