NEWSನಮ್ಮಜಿಲ್ಲೆನಮ್ಮರಾಜ್ಯ

ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಮೀಸಲಿರುವ ಸೀಟುಗಳಲ್ಲಿ ಇತರೆ ಪ್ರಯಾಣಿಕರು ಕುಳಿತು ಪ್ರಯಾಣಿಸುತ್ತಿದ್ದು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KSRTC ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಎಲ್ಲ ನಾಲ್ಕೂ ನಿಗಮಗಳ ಎಂಡಿಗಳಿಗು ತಾಕೀತು ಮಾಡಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ
  • ಇತರೆ ಪ್ರಯಾಣಿಕರು ಕುಳಿತು ಪ್ರಯಾಣಿಸುವ ವೇಳೆ ತನಿಖಾ ಸಿಬ್ಬಂದಿ ಬಂದರೆ ನಿರ್ವಾಹಕರಿಗೆ ಮೆಮೋ ಕೊಡುವ ಹಾಗೂ ದಂಡ ಹಾಕುವ ಬದಲಿಗೆ ಸಂಬಂಧಪಟ್ಟವರಿಗೆ ಹಾಕಬೇಕು -ಚಂದ್ರಶೇಖರ್‌

ಬೆಂಗಳೂರು: ರಾಜ್ಯದ ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಮೀಸಲಿರುವ ಸೀಟುಗಳಲ್ಲಿ ಇತರೆ ಪ್ರಯಾಣಿಕರು ಕುಳಿತು ಪ್ರಯಾಣಿಸುತ್ತಿದ್ದು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KSRTC ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಎಲ್ಲ ನಾಲ್ಕೂ ನಿಗಮಗಳ ಎಂಡಿಗಳಿಗು ತಾಕೀತು ಮಾಡಿದ್ದಾರೆ.

ಈ ಸಂಬಂಧ ಇದೇ ಮೇ 27ರಂದು ಆದೇಶ ಹೊರಡಿಸಿರುವ ಸಚಿವರು, ರಾಜ್ಯದ ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಮೀಸಲಿರುವ ಸೀಟುಗಳಲ್ಲಿ ಇತರೆ ಪ್ರಯಾಣಿಕರು ಕುಳಿತು ಪ್ರಯಾಣಿಸುತ್ತಿದ್ದು ಇದರಿಂದ ಹಿರಿಯ ನಾಗರಿಕರು, ವಿಶೇಷ ಚೇತನರಿಗೆ ಸೀಟುಗಳು ಅಲಭ್ಯವಾಗುತ್ತಿದೆ. ಇದು ಹಿರಿಯ ನಾಗರಿಕರು, ವಿಶೇಷ ಚೇತನರಿಗೆ ಬಸ್ಸಿನಲ್ಲಿ ಕಿರಿಕಿರಿಯಾಗುತ್ತಿದೆ.

ಈ ಬಗ್ಗೆ ಅನೇಕ ದೂರುಗಳು ಬಂದಿದ್ದು, ಮುಂದೆ ಈ ರೀತಿಯ ದೂರುಗಳು ಬರದಂತೆ ಚಾಲನಾ ಸಿಬ್ಬಂದಿ ಎಚ್ಚರವಹಿಸಿಬೇಕು. ಜತೆಗೆ ತನಿಖಾಧಿಕಾರಿಗಳು ಪ್ರಯಾಣಿಕರಿಗೆ ಸಂಸ್ಥೆಯ ನಿಯಮದ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದ್ದಾರೆ.

ಹೌದು! ರಾಜ್ಯದ ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಪ್ರತಿನಿತ್ಯ 1.25 ಕೋಟಿ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಬಸ್ಸುಗಳಲ್ಲಿ ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಮೀಸಲಾದ ಸೀಟುಗಳಲ್ಲಿ ಇತರೆ ಪ್ರಯಾಣಿಕರು ಕುಳಿತು ಪ್ರಯಾಣಿಸುತ್ತಿದ್ದು ಇದರಿಂದ ಹಿರಿಯ ನಾಗರಿಕರು, ವಿಶೇಷ ಚೇತನರಿಗೆ ಸೀಟುಗಳು ಅಲಭ್ಯವಾಗುತ್ತಿದೆ. ಈ ಕುರಿತು ದಿನ ಪತ್ರಿಕೆಯೊಂದರಲ್ಲಿ 25.05.2026 ರಂದು ಸುದ್ದಿ ಪ್ರಕಟವಾಗಿದೆ.

ಆದುದರಿಂದ, ಬಸ್ಸುಗಳಲ್ಲಿ ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಮೀಸಲಿರುವ ಸೀಟಿನಲ್ಲಿ ಇತರೆ ಪ್ರಯಾಣಿಕರು ಕುಳಿತು ಪ್ರಯಾಣಿಸದಂತೆ ಹಾಗೂ ಅರ್ಹರು ಕುಳಿತುಕೊಳ್ಳಲು ಅವಕಾಶ ಕಲ್ಪಿಸುವಂತೆ ಎಲ್ಲ ಚಾಲನಾ ಸಿಬ್ಬಂದಿಗಳಿಗೆ ಅರಿವು ಮೂಡಿಸುವುದು ಹಾಗೂ ಮಾರ್ಗ ತನಿಖಾ ಸಿಬ್ಬಂದಿಗಳು ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಮೀಸಲಿರುವ ಸೀಟಿನಲ್ಲಿ ಕುಳಿತು ಪಯಾಣಿಸುವ ಬಗ್ಗೆ, ಖಾತರಿ ಪಡಿಸಿಕೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಆದೇಶದಲ್ಲಿ ಸಚಿವರು ತಿಳಿಸಿದ್ದಾರೆ.

ಇನ್ನು ಇಲ್ಲಿ ಇತರೆ ಪ್ರಯಾಣಿಕರು ಕುಳಿತು ಪ್ರಯಾಣಿಸುವ ವೇಳೆ ತನಿಖಾ ಸಿಬ್ಬಂದಿ ಬಂದರೆ ನಿರ್ವಾಹಕರಿಗೆ ಮೆಮೋ ಕೊಡುವ ಹಾಗೂ ದಂಡ ಹಾಕುವ ಬದಲಿಗೆ ಯಾರು ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಮೀಸಲಿರುವ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿರುತ್ತಾರೋ ಅವರಿಗೆ ದಂಡ ಹಾಕುವ ಮೂಲಕ ಕಾನೂನಿನ ಅರಿವು ಮೂಡಿಸಬೇಕು ಎಂದು ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಒತ್ತಾಯಿಸಿದ್ದಾರೆ.

ಈಗಾಗಲೇ ರಾಜ್ಯ ಪ್ರತಿ ಮಾರ್ಗಗಳ ಬಸ್‌ಗಳು ಪ್ರಯಾಣಿಕರಿಂದ ರಶ್‌ ಆಗುತ್ತಿದ್ದು, ಕಾಲಿಡುವುದಕ್ಕೂ ಜಾಗವಿರುವುದಿಲ್ಲ ಈ ವೇಳೆ ಪ್ರಯಾಣಿಕರ ನಡುವೆ ನುಗ್ಗಿ ಟಿಕೆಟ್‌ ವಿತರಣೆ ಮಾಡುವುದೇ ಭಾರಿ ಕಷ್ಟಸಾಧ್ಯವಾಗುತ್ತಿದೆ. ಈ ನಡುವೆ ಈ ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಮೀಸಲಿರುವ ಸೀಟಿನಲ್ಲಿ ಯಾರು ಕುಳಿತು ಪ್ರಯಾಣಿಸುತ್ತಿದ್ದಾರೆ ಎಂಬುದನ್ನು ನೋಡುವಷ್ಟು ಸಮಯ ನೌಕರರಿಗೆ ಸಿಗುವುದಿಲ್ಲ ಹೀಗಾಗಿ ಪ್ರಜ್ಞಾವಂತ ನಾಗರಿಕರು ಅರಿತು ಅರ್ಹರಿಗೆ ಸೀಟು ಬಿಟ್ಟುಕೊಡಬೇಕು ಎಂದು ಮನವಿ ಮಾಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ