NEWSನಮ್ಮಜಿಲ್ಲೆನಮ್ಮರಾಜ್ಯ

ಸಿಎಂ ಜತೆಗಿನ ಸಾರಿಗೆ ಸಂಘಟನೆಗಳ ಸಂಧಾನ ಸಭೆ ವಿಫಲ: ನಾಳೆಯಿಂದ ಮುಷ್ಕರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆಗಿನ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯೊಂದಿಗಿನ ಸಂಧಾನ ಸಭೆ ವಿಫಲವಾಗಿದ್ದು ನಾಳೆ ಸಾರಿಗೆ ಮುಷ್ಕರ ನಡೆಯಲಿದೆ.

1.15 ಲಕ್ಷ ಸರ್ಕಾರಿ ಸಾರಿಗೆ ನೌಕರು ಬಂದ್‌ನಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಹೀಗಾಗಿ ಇಂದು ರಾತ್ರಿಯಿಂದಲೇ ಬಸ್ ಸಂಚಾರ ಸ್ಥಗಿತವಾಗುವ ಸಾಧ್ಯತೆಯಿದೆ.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಅಧಿವೇಶನದ ನಂತರ ವೇತನ ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಆದರೆ, ಈ ಆಫರ್‌ ಅನ್ನು ತಿರಸ್ಕರಿಸಿದ ಜಂಟಿ ಕ್ರಿಯಾ ಸಮಿತಿ ನಾಯಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಸಭೆಯ ಬಳಿಕ ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಫೆಡರೇಶನ್‌ ಅಧ್ಯಕ್ಷ ಎಚ್‌.ವಿ. ಅನಂತಸುಬ್ಬರಾವ್‌ ಮಾತನಾಡಿ, 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿಯಲ್ಲಿ 24 ತಿಂಗಳು ಬಿಡಿ ಎಂದು ಸಿಎಂ ಕೇಳಿದ್ದಾರೆ.

ಆದರೆ, ನಾವು 24 ತಿಂಗಳ ಹಿಂಬಾಕಿ ನೀಡಲು ಸಾಧ್ಯವಿಲ್ಲ. 14 ತಿಂಗಳು ಆರಿಯರ್ಸ್ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ ನಾವು 38 ತಿಂಗಳ ಹಿಂಬಾಕಿಯನ್ನು ಕೊಡಲೇ ಬೇಕು ಎಂದು ಕೇಳಿರುವುದಾಗಿ ತಿಳಿಸಿದ್ದಾರೆ.

ಇನ್ನು 2024ರ ಜನವರಿ 1ರಿಂದ ಆಗಿಬೇಕಿರುವ ವೇತನ ಪರಿಷ್ಕರಣೆ ಬಗ್ಗೆಯೂ ನಮಗೆ ಭರವಸೆ ಸಿಕ್ಕಿಲ್ಲ. ಹೀಗಾಗಿ ಮುಷ್ಕರ ನಡೆಯಲಿದೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ