NEWSನಮ್ಮಜಿಲ್ಲೆನಮ್ಮರಾಜ್ಯ

ಇದ್ದಲ್ಲಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೀರುವ ಸಾರಿಗೆ ನೌಕರರು: ಧರ್ಮ ಸಂಕಟದಲ್ಲಿ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ
  • ಫ್ರೀಡಂಪಾರ್ಕ್‌ನಲ್ಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುವುದಕ್ಕೆ ಅನುಮತಿದಲು ಮತ್ತೊಂದು ಅರ್ಜಿ ಕೊಡಿ: ಪೊಲೀಸ್‌ ಅಧಿಕಾರಿಗಳು

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಚುನಾವಣಾ ಪೂರ್ವ ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆ ಈಡೇರಿಸುವಂತ ಒತ್ತಾಯಿಸಿ ಫ್ರೀಡಂಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ನೌಕರರನ್ನು ಪೊಲೀಸರು ಬಂಧಿಸಿ ಮೈಸೂರು ರಸ್ತೆಯಲ್ಲಿರುವ ಸಿಆರ್‌ಪಿಎಫ್‌ ಮೈದಾನದಲ್ಲಿ ಬಿಟ್ಟಿದ್ದರು.

ಇಂದು ಸಂಜೆ 4ಗಂಟೆ ಸುಮಾರಿಗೆ ಸಿಆರ್‌ಪಿಎಫ್‌ ಮೈದಾನದಲ್ಲಿ ಬಿಟ್ಟಿದ್ದರು. ಆ ವೇಳೆ ನಾವು ಇಲ್ಲಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೇವೆ ಎಂದು ನೌಕರರು ಹೇಳಿ ಮುಂದುವರಿಸುತ್ತಿದ್ದರು. ಈಗ ಸಿಆರ್‌ಪಿಎಫ್‌ ಮೈದಾನದಿಂದ ಹೊರಕಳಿಸಲು ಪೊಲೀಸರು ಯತ್ನಿಸಿದ್ದಾರೆ. ಆದರೆ, ಒಕ್ಕೂಟದ ಪದಾಧಿಕಾರಿಗಳು ಇಲ್ಲ ನಾವು ಇಲ್ಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೇವೆ ಎಂದು ಪಟ್ಟುಹಿಡಿದ್ದರು.

ಈ ವೇಳೆ ಒಕ್ಕೂಟದ ಪದಾಧಿಕಾರಿಗಳನ್ನು ಸಮಾಧಾನಪಡಿಸಿರುವ ಪೊಲೀಸರು ಉಪ್ಪಾರಪೇಟೆ ಪೊಲೀಸ್‌ ಠಾಣೆಗೆ ಬಂದು ಮತ್ತೊಂದು ಅರ್ಜಿಕೊಡಿ ನಾವು ಫ್ರೀಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಕ್ಕೆ ಅವಕಾಶ ಮಾಡಿಕೊಡುತ್ತೇವೆ ಈ ಬಗ್ಗೆ ಉನ್ನತ ಅಧಿಕಾರಿಗಳ ಜತೆ ಮಾತನಾಡುತ್ತೇವೆ ಎಂದು ಹೇಳಿ ಸಿಆರ್‌ಪಿಎಫ್‌ ಮೈದಾನದಿಂದ ಉಪ್ಪಾರುಪೇಟೆ ಪೊಲೀಸ್‌ ಠಾಣೆಗೆ ಮುಖಂಡರನ್ನು ಕರೆಸಿಕೊಂಡಿದ್ದಾರೆ.

ಒಂದು ವೇಳೆ ಫ್ರೀಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಕ್ಕೆ ಅನುಮತಿಸದಿದ್ದರೆ ನಾವು ಪೊಲೀಸ್‌ ಠಾಣೆ ಮುಂದೆಯೇ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೇವೆ ಎಂದು ಒಕ್ಕೂಟ ಪದಾಧಿಕಾರಿಗಳು ವಿಜಯಪಥಕ್ಕೆ ತಿಳಿಸಿದ್ದಾರೆ.

ಇನ್ನು ನೌಕರರು ಕೂಡ ಇದೆಲ್ಲವನ್ನು ಗಮನಿಸುತ್ತಿದ್ದು, ಸರ್ಕಾರ ಹಾಗೂ ಪೊಲೀಸರು ಇದೇ ರೀತಿ ನೌಕರರ ಬಗ್ಗೆ ಕೀಳಾಗಿ ಕಾಣುವುದನ್ನು ಮುಂದುವರಿಸಿದರೆ ಬಸ್‌ಗಳನ್ನೇ ನಿಲ್ಲಿಸಿ ಹೋರಾಟ ಮಾಡುವುದಕ್ಕೂ ಈಗಾಗಲೇ ತರೆಮರೆಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ ಎಂಬ ಬಗ್ಗೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ನಾವು ಕೂಡ ಕಳೆದ 2021ರಿಂದ ಇಲ್ಲಿಯವರೆಗೂ ಕಾದು ನೋಡಿದ್ದು ಆಯಿತು ಆದರೆ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ತಾಳ್ಮೆಯನ್ನೇ ಅಶಕ್ತಿಯಂದು ಅಂದುಕೊಳ್ಳುತ್ತಿರುವ ಸರ್ಕಾರಕ್ಕೆ ಹಾಗೂ ಸಾರಿಗೆ ಸಚಿವರಿಗೆ ಬುದ್ಧಿ ಕಲಿಸುವ ಕಾಲ ಬಂದಂತೆ ಕಾಣುತ್ತಿದೆ. ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೆ ಹೋದರೆ ಬಸ್‌ ನಿಲ್ಲಿಸಿ ಹೋರಾಟ ಮಾಡಬೇಕಾಗುತ್ತದೆ ಎಂಬ ಬಹುತೇಕ ಎಲ್ಲ ಸಂಘಟನೆಗಳ ಮುಖಂಡರು ಕೂಡ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ.

ನೌಕರರು ಕೂಡ ಸಂಘಟನೆಗಳ ಮುಖಂಡರ ನಿರ್ಧಾರವನ್ನು ಬೆಂಬಲಿಸುವುದಾಗಿ ಹೇಳಿಕೆ ನೀಡುತ್ತಿದ್ದು, ಸರ್ಕಾರ ಇದೇ ರೀತಿ ಮೊಂಡುತನ ಪ್ರದರ್ಶಿಸುವುದನ್ನು ಮುಂದುವರಿಸಿದರೆ ಇನ್ನೊದೆರಡು ದಿನದಲ್ಲಿ ರಾಜ್ಯದಲ್ಲಿ ನಾಲ್ಕೂ ಸಾರಿಗೆ ಬಸ್‌ಗಳು ಸ್ತಬ್ದವಾಗುವ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಪ್ರಮುಖವಾಗಿ ಈ ಹೋರಾಟಕ್ಕೆ ಈ ಬಾರಿ ಸಾರಿಗೆ ನೌಕರರ ಜತೆಗೆ ಪರೋಕ್ಷವಾಗಿ ಅಧಿಕಾರಿಗಳು ಕೂಡ ಸಾಥ್‌ ನೀಡುವುದಕ್ಕೆ ತೀರ್ಮಾನಿಸಿದ್ದಾರೆ ಎನ್ನಲಾಗಿದ್ದು ಸರ್ಕಾರವನ್ನು ಸಮಸ್ತ ಸಾರಿಗೆ ಅಧಿಕಾರಿಗಳು ಹಾಗೂ ನೌಕರರ ಕಟ್ಟಿಹಾಕುವುದಕ್ಕೆ ಸಜ್ಜಾಗಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಒಂದು ದೃಢನಿರ್ಧಾರಕ್ಕೆ ಬಂದು ಸಮಾನ ವೇತನ ಜಾರಿ ಮಾಡುವುದಕ್ಕೆ ಮುಂದಾಗಬೇಕಿದೆ. ಅದು ತಡವಾದರೆ ಮಧ್ಯಂತರ ಪರಿಹಾರ ಘೋಷಣೆ ಮಾಡಬೇಕು ಎಂದು ನೌಕರರ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಒಟ್ಟಾರೆ ಸಾರಿಗೆ ನೌಕರರ ಒಕ್ಕೂಟ ಏನು ಇಂದಿನಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ನಾಔಉ ಎಲ್ಲಿ ಇರುತ್ತೇವೋ ಅಲ್ಲೇ ಮುಂದುವರಿಸುತ್ತೇವೆ ಎಂದು ಪಟ್ಟುಹಿಡಿದ್ದಾರೆ. ಸಮಸ್ತ ನೌಕರರು ಕೂಡ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದು, ಇದು ನಮ್ಮ ಭವಿಷ್ಯದ ಹೋರಾಟ ಎಂದು ಕರೆ ನೀಡಿದ್ದಾರೆ.

ಇನ್ನು ನೌಕರರು ಕೂಡ ಈ ಬಗ್ಗೆ ಭಾರಿ ಚರ್ಚೆಯಲ್ಲಿ ತೊಡಗಿದ್ದು ಸರ್ಕಾರ ಇನ್ನೇರಡು ದಿನದೊಳಗೆ ತನ್ನ ತೀರ್ಮಾನವನ್ನು ತಿಳಿಸದಿದ್ದರೆ ಬಸ್‌ ನಿಲ್ಲಿಸುವುದು ಪಕ್ಕ ಎಂದು ಹೇಳುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ: ಗೃಹಬಳಕೆ ಗ್ಯಾಸ್‌ ಸಿಂಡರ್‌ಗೆ 29 ರೂ. ಏರಿಕೆ, ಇಂದಿನಿಂದ... ರಾಮಲಿಂಗಾರೆಡ್ಡಿ: ರಾಜೀನಾಮೆ ವಾಪಸ್‌ -ಡಿಕೆಶಿ ಸರ್ಕಾರದಲ್ಲಿದ್ದ ಭಿನ್ನಮತ ಶಮನ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯ "ನನ್ನ ಇ-ಖಾತಾ ನನ್ನ ಹಕ್ಕು" ಅಭಿಯಾನಕ್ಕೆ ಉತ್ತಮ ಸ್ಪಂದನೆ ಪಾರ್ಕ್‌ಗಳ ನಡಿಗೆದಾರರ ಸ್ನೇಹಿಯನ್ನಾಗಿ ರೂಪಿಸಿ: ನೂತನ ಆಯುಕ್ತ ಜಗದೀಶ್ ಕರೆ 100 ವರ್ಷವಾದರೂ ಸಾಧನೆಗಳ ಮೂಲಕ ಅರಸು ಜೀವಂತ: ಸಿಎಂ ಡಿ.ಕೆ.ಶಿವಕುಮಾರ್‌ ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ: ನೈರ್ಮಲ್ಯ ಇಲಾಖೆ ಆಯುಕ್ತೆ ಫೌಜಿಯಾ